ಪ್ರಧಾನಿ ಮೋದಿ ಬ್ರಿಟನ್ ಪ್ರವಾಸ ಆರಂಭ, ಕಾರ್ಯಕ್ರಮಗಳು
ನವದೆಹಲಿ, ನವೆಂಬರ್ 12 : ಮೂರು ದಿನಗಳ ಬ್ರಿಟನ್ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬೆಳಗ್ಗೆ ದೆಹಲಿಯಿಂದ ತೆರಳಿದರು. ಪ್ರವಾಸದ ಸಂದರ್ಭದಲ್ಲಿ ಮೋದಿ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ಭೇಟಿ ಮಾಡಲಿದ್ದು, ಉದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಗುರುವಾರ ಬೆಳಗ್ಗೆ ದೆಹಲಿಯ ಪಾಲಂ ಏರ್ಪೋರ್ಟ್ನಿಂದ ಹೊರಟ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬೀಳ್ಕೊಟ್ಟರು. ಮೂರು ದಿನಗಳ ಬ್ರಿಟನ್ ಪ್ರವಾಸದಲ್ಲಿ ಮೋದಿ ಅವರು ಉದ್ಯಮಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ನರೇಂದ್ರ ಮೋದಿ ಅವರು ಗುರುವಾರ ಮಧ್ಯಾಹ್ನ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮೆರೂನ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಪಾರ್ಲಿಮೆಂಟ್ ಸ್ಕ್ವೇರ್ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿ, ಸಂಸತ್ನಲ್ಲಿ ಭಾಷಣ ಮಾಡಲಿದ್ದಾರೆ. [ಬಸವಣ್ಣ ಪ್ರತಿಮೆ ಅನಾವರಣ ಆಹ್ವಾನ ಸ್ವೀಕರಿಸಿದ ಮೋದಿ]
ಶುಕ್ರವಾರ ಮೋದಿ ಅವರು ಸಿಇಒಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ರಾಣಿ ಎಲಿಜಬೆತ್ II ಅವರೊಂದಿಗೆ ಭೋಜನ ಮಾಡಲಿದ್ದಾರೆ. ಅಲ್ಲದೆ ವೆಂಬ್ಲೆ ಸ್ಟೇಡಿಯಂನಲ್ಲಿ ನಡೆಯುವ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Prime Minister Narendra Modi leaves for UK #ModiInUK pic.twitter.com/jap3Z5nYc6
— ANI (@ANI_news) November 12, 2015 ಶನಿವಾರ ಲಂಡನ್ಗೆ ತೆರಳಲಿರುವ ಮೋದಿ ಬಸವಣ್ಣ ಹಾಗೂ ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಉದ್ಘಾಟಿಸಲಿದ್ದಾರೆ. ಬಳಿಕ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅಂಕಾರಾಗೆ ಪ್ರಯಾಣ ಬೆಳೆಸಲಿದ್ದಾರೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications