Delhi Election: ಬಿಜೆಪಿ ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸಮೀಕ್ಷೆಗಳು ಹೇಳಿದ್ದು ನಿಜವಾಗಿದೆ. 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಗೆಲುವಿನ ಬಾವುಟ ಹಾರಿಸಿದೆ. ಒಂದು ದಶಕದ ಆಮ್ ಆದ್ಮಿ ಪಕ್ಷದ ಆಡಳಿತ ಅಂತ್ಯವಾಗಿದೆ. ಭರ್ಜರಿ ಬಹುಮತ ಪಡೆಯುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಕೂಡ ಬಿಜೆಪಿ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಶ್ಲಾಘಿಸಿದ್ದು, ಅಭಿವೃದ್ಧಿ ಮತ್ತು ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ.

narendra modi reaction after bjp win in delhi assembly election 2025

"ಬಿಜೆಪಿಗೆ ಐತಿಹಾಸಿಕ ಗೆಲುವು ನೀಡಿದ್ದಕ್ಕಾಗಿ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ಧನ್ಯವಾದಗಳು ಮತ್ತು ಅಭಿನಂದನೆಗಳು. ಹೃದಯಾಂತರಾಳದಿಂದ ನಾನು ನಿಮಗೆ ಕೃತಜ್ಞನಾಗಿದ್ದೇನೆ, ದೆಹಲಿಯ ಸರ್ವತೋಮುಖ ಅಭಿವೃದ್ಧಿ ಮಾಡಲು ಮತ್ತು ಅದರ ಜನರ ಜೀವನವನ್ನು ಉತ್ತಮಗೊಳಿಸಲು ಸಿಗುವ ಯಾವುದೇ ಅವಕಾಶವನ್ನು ನಾವು ಬಿಡುವುದಿಲ್ಲ ಎಂದು ಭರವಸೆ ಕೊಡುತ್ತಿದ್ದೇನೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ದೆಹಲಿ ಪ್ರಮುಖ ಪಾತ್ರ ವಹಿಸುತ್ತದೆ" ಎಂದು ಹೇಳಿದರು.

"ಇಷ್ಟು ದೊಡ್ಡ ಗೆಲುವು ಪಡೆಯಲು ಹಗಲು ಇರುಳು ಎನ್ನದೆ ಶ್ರಮಿಸಿದ ಬಿಜೆಪಿಯ ನನ್ನ ಎಲ್ಲಾ ಕಾರ್ಯಕರ್ತರ ಬಗ್ಗೆ ತುಂಬಾ ಹೆಮ್ಮೆಯಾಗುತ್ತದೆ. ಈಗ ನಾವು ದೆಹಲಿಯ ಜನರ ಸೇವೆ ಮಾಡಲು ಇನ್ನಷ್ಟು ಹೆಚ್ಚು ಕೆಲಸ ಮಾಡುತ್ತೇವೆ" ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿಗೆ ಸ್ಪಷ್ಟ ಬಹುಮತ

ಎರಡು ದಶಕಗಳ ಬಳಿಕ ಬಿಜೆಪಿ ದೆಹಲಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಚುನಾವಣೋತ್ತರ ಫಲಿತಾಂಶಗಳು ದೆಹಲಿತಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ನುಡಿದಿದ್ದ ಭವಿಷ್ಯ ನಿಜವಾಗಿದ್ದು ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಇನ್ನೂ ಮತ ಎಣಿಕೆ ನಡೆಯುತ್ತಿದ್ದು ಬಿಜೆಪಿ ಈಗಾಗಲೇ 30 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಮ್ ಆದ್ಮಿ ಪಕ್ಷ 13 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು 7 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ ಇಲ್ಲಿ ಖಾತೆ ತೆರೆಯುವಲ್ಲಿ ಕೂಡ ವಿಫಲವಾಗಿದೆ. 2015ರ ಚುನಾವಣೆಯಲ್ಲಿ ಎಎಪಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, 2020ರಲ್ಲಿ 62 ಸ್ಥಾನಗಳಲ್ಲಿ ಗೆಲುವು ಕಂಡಿತ್ತು.

ದೆಹಲಿ ಮಾಜಿ ಸಿಎಂ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೂ ಜನ ಈ ಬಾರಿ ಮನೆ ದಾರಿ ತೋರಿಸಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಕೇಜ್ರಿವಾಲ್ ಬಿಜೆಪಿ ಅಭ್ಯರ್ಥಿ ಪರ್ವೇಶ್ ಶರ್ಮಾ ವಿರುದ್ಧ ಸೋಲನುಭವಿಸಿದ್ದಾರೆ.

ದೆಹಲಿ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅರವಿಂದ್ ಕೇಜ್ರಿವಾಲ್, ಬಿಜೆಪಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುತ್ತೇನೆ. ಅವರು ಜನರ ಆಶಯಗಳು, ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+