"ಗುಜರಾತ್ ಪ್ರವಾಹ ಬಂದಾಗ ಕಾಂಗ್ರೆಸಿಗರು ಬೆಂಗಳೂರಿನ ಈಜುಕೊಳದಲ್ಲಿದ್ರು"

ಅಹಮದಾಬಾದ್, ಡಿಸೆಂಬರ್ 8: ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಬನಸ್ಕಾಂತ ಜಿಲ್ಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಅವರು ಕಾಂಗ್ರೆಸ್ ಶಾಸಕರನ್ನು ತರಾಟೆಗೆ ತೆಗೆದುಕೊಂಡರು.

ಪಠಾನ್ ಮತ್ತು ಬನಸ್ಕಾಂತ ಜಿಲ್ಲೆಯ ಜನರು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವ್ಯತ್ಯಾಸವನ್ನು ತಿಳಿದುಕೊಂಡಿದ್ದಾರೆ. ಗುಜರಾತಿನಲ್ಲಿ ಪ್ರವಾಹ ಬಂದಾಗ ಬಿಜೆಪಿ ನಾಯಕರು ಜನರ ಜತೆ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಕಾಂಗ್ರೆಸ್ ನಾಯಕರು ಬೆಂಗಳೂರಿನ ಈಜುಕೊಳದಲ್ಲಿ ವಿರಾಮ ತೆಗೆದುಕೊಳ್ಳುತ್ತಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

Narendra Modi slams congress MLAs Bengaluru visit in his campaign

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿಯಿಂದ ಕಾಂಗ್ರೆಸ್ ಶಾಸಕರು ಬೆಂಗಳೂರುನ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದರು. ಕಾಂಗ್ರೆಸ್ ಶಾಸಕರ ಈ ರೆಸಾರ್ಟ್ ರಾಜಕಾರಣವನ್ನು ನರೇಂದ್ರ ಮೋದಿ ಟೀಕಿಸಿದ್ದಾರೆ.

ಗುಜರಾತಿನಲ್ಲಿ ನಾಳೆ ಅಂದರೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ರ ಸೋಮವಾರ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+