ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

|
Google Oneindia Kannada News

ನವದೆಹಲಿ, ಏಪ್ರಿಲ್ 08: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು 2 ರಿದಂ 3 ವಾರ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಎರಡನೇ ಅಲೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಹಲವು ರಾಜ್ಯದ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ದೇಶದಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾಗಿಯೂ ಆತಂಕಕಾರಿ ವಿಷಯವಾಗಿದೆ ಎಂದರು.

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಮೊದಲನೇ ಅಲೆ ಮುಕ್ತಾಯವಾಗಿದೆ. ಮೊದಲು ಕೊವಿಡ್-19 ಸೋಂಕನ್ನು ಎದುರಿಸಿದ ಅನುಭವವನ್ನು ಈ ಬಾರಿ ಸಮರ್ಥವಾಗಿ ಬಳಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತದಲ್ಲಿ ಲಾಕ್‌ಡೌನ್ ಜಾರಿಗೊಳಿಸಲು ಪರಿಸ್ಥಿತಿ ಮೊದಲಿನಂತಿಲ್ಲ

ಭಾರತದಲ್ಲಿ ಲಾಕ್‌ಡೌನ್ ಜಾರಿಗೊಳಿಸಲು ಪರಿಸ್ಥಿತಿ ಮೊದಲಿನಂತಿಲ್ಲ

ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಯು ಮೊದಲಿಗಿಂತ ಹೆಚ್ಚಾಗಿದೆ. ಭಾರತದಲ್ಲಿನ ವೈದ್ಯಕೀಯ ಸೌಲಭ್ಯಗಳು ಮೊದಲಿಗಿಂತಲೂ ಉತ್ತಮವಾಗಿದೆ. ನಮ್ಮಲ್ಲಿ ಇದೀಗ ಪಿಪಿಇ ಕಿಟ್ ಇದೆ, ಕೊವಿಡ್-19 ಲಸಿಕೆಯೂ ಇದೆ. ಹೀಗಿರುವಾಗ ಕೊರೊನಾವೈರಸ್ ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ಆದರೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲೇಬೇಕು. ಕೊರೊನಾವೈರಸ್ ಸೋಂಕಿನ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿರಿ

ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿರಿ

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ನಿಯಂತ್ರಣಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸಬೇಕಿದೆ. ಕೊವಿಡ್-19 ಸೋಂಕಿನ ತಪಾಸಣೆ ನಡೆಸಿದಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತವೆ. ಹಾಗಿದ್ದರೂ, ದೇಶದ ಶೇ.70ರಷ್ಟು ಜನರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೀವು ಸೋಂಕಿನ ತಪಾಸಣೆ ಮಾಡಿಸಿಕೊಳ್ಳದಿದ್ದರೆ, ನಿಮ್ಮ ನೆರೆಹೊರೆಯವರಿಗೂ ಸೋಂಕು ಹರಡುವ ಅಪಾಯ ಹೆಚ್ಚಾಗಿರುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.

ಕೊರೊನಾ ಕಡಿವಾಣಕ್ಕೆ ಮೈಕ್ರೋ ಕಂಟೇನ್ಮೆಂಟ್ ಝೋನ್

ಕೊರೊನಾ ಕಡಿವಾಣಕ್ಕೆ ಮೈಕ್ರೋ ಕಂಟೇನ್ಮೆಂಟ್ ಝೋನ್

ಕೊವಿಡ್-19 ಸೋಂಕು ನಿಯಂತ್ರಿಸುವುದಕ್ಕೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುವ ಕ್ರಮವನ್ನು ತಳ್ಳಿ ಹಾಕಿರುವ ಪ್ರಧಾನಿ ಮೋದಿ ಮೈಕ್ರೋ ಕಂಟೇನ್ಮೆಂಟ್ ಝೋನ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅತಿಹೆಚ್ಚು ಸೋಂಕು ಹರಡುವ ಅಪಾಯವಿರುವ ಪ್ರದೇಶಗಳನ್ನು ಮೈಕ್ರೋ ಕಂಟೇನ್ಮೆಂಟ್ ಝೋನ್ ಆಗಿ ಮಾಡುವುದು. ಈ ಪ್ರದೇಶಗಳಲ್ಲಿ ಅತಿಹೆಚ್ಚು ನಿಗಾ ವಹಿಸಬೇಕು. ಸೋಂಕಿನ ತಪಾಸಣೆಯನ್ನು ಮಾಡುವುದರ ಜೊತೆಗೆ ಕೊವಿಡ್-19 ಪಾಸಿಟಿವ್ ಪ್ರಮಾಣವನ್ನು ಶೇ.5ರಷ್ಟು ಕಡಿಮೆ ಮಾಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶದಲ್ಲಿ ನಾಲ್ಕು ದಿನ ಕೊರೊನಾವೈರಸ್ ಲಸಿಕೆ ಉತ್ಸವ

ದೇಶದಲ್ಲಿ ನಾಲ್ಕು ದಿನ ಕೊರೊನಾವೈರಸ್ ಲಸಿಕೆ ಉತ್ಸವ

ಕೊರೊನಾವೈರಸ್ ಲಸಿಕೆ ಬಗ್ಗೆ ದೇಶಾದ್ಯಂತ ಜಾಗೃತಿ ಮೂಡಿಸಬೇಕಿದೆ. ಏಪ್ರಿಲ್ 11 ರಿಂದ ಏಪ್ರಿಲ್ 14ರವರೆಗೂ ಲಸಿಕೆ ಉತ್ಸವವನ್ನು ನಡೆಸಲಾಗುತ್ತದೆ. ನಾಲ್ಕು ದಿನಗಳಲ್ಲಿ ಅತಿಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಬೇಕಿದೆ. 45 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆದುಕೊಳ್ಳಬೇಕು. ಆ ಮೂಲಕ ಲಸಿಕೆಯು ವ್ಯರ್ಥವಾಗುವುದನ್ನು ತಡೆಯೋಣ ಎಂದು ಪ್ರಧಾನಿ ಮೋದಿ ಮನವಿ ಮಾಡಿಕೊಂಡಿದ್ದಾರೆ.

English summary
PM Narendra Modi Speech Highlights In Kannada: Here Are The Key Highlights Of PM Modi’s Speech. Read On.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X