ಏ.14ರಂದು ದೇಶವನ್ನು ಉದ್ದೇಶಿಸಿ ನರೇಂದ್ರ ಮೋದಿ ಭಾಷಣ

ಬೆಂಗಳೂರು, ಏಪ್ರಿಲ್ 13 : ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಂಗಳವಾರ ಮಾತನಾಡಲಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಘೋಷಣೆ ಮಾಡಲಾಗಿರುವ ಲಾಕ್ ಡೌನ್ ಏಪ್ರಿಲ್ 14ರ ಮಂಗಳವಾರಕ್ಕೆ ಅಂತ್ಯವಾಗಲಿದೆ.

ಮಂಗಳವಾರ ಬೆಳಗ್ಗೆ 10 ಗಂಟೆಗೆ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲಾಕ್ ಡೌನ್ ಘೋಷಣೆಯಾದ ಬಳಿಕ 2ನೇ ಬಾರಿ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಲಾಕ್ ಡೌನ್ ವಿಸ್ತರಣೆಯಾಗಲಿದೆಯೇ?.

ಮಾರ್ಚ್ 24ರಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ನರೇಂದ್ರ ಮೋದಿ 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಿದ್ದರು. ಲಾಕ್ ಡೌನ್ ಏಪ್ರಿಲ್ 14ರ ಮಂಗಳವಾರ ಅಂತ್ಯಗೊಳ್ಳುತ್ತಿದೆ.

ಲಾಕ್ ಡೌನ್ ಏಪ್ರಿಲ್ 30ರ ತನಕ ವಿಸ್ತರಣೆಯಾಗಲಿದೆ ಎಂಬ ಸುದ್ದಿಗಳು ಹಬ್ಬಿದೆ. ಆದ್ದರಿಂದ, ನರೇಂದ್ರ ಮೋದಿ ಅವರ ಭಾಷಣ ದೇಶದಲ್ಲಿ ಕುತೂಹಲ ಹುಟ್ಟುಹಾಕಿದೆ. ಲಾಕ್ ಡೌನ್ ವಿಸ್ತರಣೆಯಾದರೂ ಕೆಲವು ವಿನಾಯಿತಿ ಸಿಗಲಿದೆಯೇ? ಕಾದು ನೋಡಬೇಕು.

ಮುಖ್ಯಮಂತ್ರಿಗಳ ಜೊತೆ ಸಭೆ

ಮುಖ್ಯಮಂತ್ರಿಗಳ ಜೊತೆ ಸಭೆ

ಕೊರೊನಾ ನಿಯಂತ್ರಣದ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು. ಈ ಸಭೆಯ ಬಳಿಕ ಅವರು ಲಾಕ್ ಡೌನ್ ಬಗ್ಗೆ ತೀರ್ಮಾನ ಕೈಗೊಂಡಿದ್ದು, ಅದನ್ನು ಮಂಗಳವಾರ ಘೋಷಣೆ ಮಾಡಲಿದ್ದಾರೆ.

ವಿಪಕ್ಷ ನಾಯಕರ ಜೊತೆ ಚರ್ಚೆ

ವಿಪಕ್ಷ ನಾಯಕರ ಜೊತೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಣದ ಕುರಿತು ವಿಪಕ್ಷಗಳ ನಾಯಕರ ಜೊತೆ ಸಭೆ ನಡೆಸಿದ್ದರು. ಅವರು ನೀಡಿರುವ ಸಲಹೆಗಳನ್ನು ಸ್ವೀಕಾರ ಮಾಡಿದ್ದು, ಲಾಕ್ ಡೌನ್ ವಿಸ್ತರಣೆ ಮಾಡಲಿದ್ದಾರೆಯೇ ಕಾದು ನೋಡಬೇಕು.

ದೀಪ ಹಚ್ಚಲು ಕರೆ ಕೊಟ್ಟಿದ್ದರು

ದೀಪ ಹಚ್ಚಲು ಕರೆ ಕೊಟ್ಟಿದ್ದರು

ಏಪ್ರಿಲ್ 3ರಂದು ವಿಡಿಯೋ ಸಂದೇಶ ನೀಡಿದ್ದ ನರೇಂದ್ರ ಮೋದಿ ಏಪ್ರಿಲ್ 5ರಂದು ರಾತ್ರಿ 9 ಗಂಟೆಯಿಂದ 9 ನಿಮಿಷದ ತನಕ ಮನೆಯಲ್ಲಿ ವಿದ್ಯುತ್ ದೀಪ ಆರಿಸಿ ದೀಪ ಹಚ್ಚಲು ಕರೆ ಕೊಟ್ಟಿದ್ದರು. ಈ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಮಾರ್ಗಸೂಚಿ ಬಿಡುಗಡೆ

ಮಾರ್ಗಸೂಚಿ ಬಿಡುಗಡೆ

ಲಾಕ್ ಡೌನ್‌ ಅನ್ನು ಏಪ್ರಿಲ್ 30ರ ತನಕ ವಿಸ್ತರಣೆ ಮಾಡಲು ನರೇಂದ್ರ ಮೋದಿ ಕರೆ ನೀಡಿದರೆ ಕೇಂದ್ರ ಗೃಹ ಸಚಿವಾಲಯ ಲಾಕ್ ಡೌನ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ. ಈಗಾಗಲೇ ಹಲವು ರಾಜ್ಯಗಳು ಲಾಕ್ ಡೌನ್ ವಿಸ್ತರಣೆಗೆ ಬೇಡಿಕೆ ಇಟ್ಟಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+