Breaking; ರಾತ್ರಿ 9.15ಕ್ಕೆ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ

ನವದೆಹಲಿ, ಏಪ್ರಿಲ್ 21; ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಗುರುವಾರ ರಾತ್ರಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯ ಮೇಲಿನಿಂದ ಈ ಭಾಷಣ ಮಾಡಲಿದ್ದಾರೆ.

ಗುರುವಾರ ರಾತ್ರಿ 9.15ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಿಖ್ ಗುರು ತೇಜ್ ಬಹದ್ದೂರ್ ಅವರ 400ನೇ ಪ್ರಕಾಶ್ ಪುರಬ್ ಅಂಗವಾಗಿ ಮೋದಿ ಭಾಷಣ ಮಾಡುತ್ತಿದ್ದಾರೆ.

Narendra Modi To Address Nation From Red Fort On April 21st

ಈ ಸಂದರ್ಭದಲ್ಲಿ ಮೋದಿ ತೇಜ್ ಬಹದ್ದೂರ್ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ನವದೆಹಲಿಯ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಸಹಯೋಗದೊಂದಿಗೆ ಕೆಂಪುಕೋಟೆಯಲ್ಲಿ ಎರಡು ದಿನಗಳ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಕಾರ್ಯಕ್ರಮದ ಕೇಂದ್ರಬಿಂದುವಾಗಿದೆ ಎಂದು ಹೇಳಿದ್ದಾರೆ. 400 ಸಿಖ್ ಸಂಗೀತಗಾರರು ಶಾಬಾದ್ ಕೀರ್ತನೆಗಳನ್ನು ಹಾಡಿದ ಬಳಿಕ ಮೋದಿ ಭಾಷಣ ಮಾಡಲಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಕೀರ್ತನಕಾರರು ಮತ್ತು ಮಕ್ಕಳು ಶಾಬಾದ್ ಕೀರ್ತನೆಯಲ್ಲಿ ಭಾಗವಹಿಸಲಿದ್ದಾರೆ. ಗುರು ತೇಜ್ ಬಹದ್ದೂರ್ ಜಿ ಅವರ ಜೀವನವನ್ನು ಬಿಂಬಿಸುವ ಭವ್ಯವಾದ ಧ್ವನಿ ಮತ್ತು ಬೆಳಕಿನ ಪ್ರದರ್ಶನವೂ ನಡೆಯಲಿದೆ.

ಜಾಗತಿಕ ಇತಿಹಾಸದಲ್ಲಿ ಧರ್ಮ ಮತ್ತು ಮಾನವೀಯ ಮೌಲ್ಯಗಳು, ಆದರ್ಶಗಳು ಮತ್ತು ತತ್ವಗಳನ್ನು ರಕ್ಷಿಸಲು ತನ್ನ ಜೀವನವನ್ನು ತ್ಯಾಗ ಮಾಡಿದ 9ನೇ ಸಿಖ್ ಗುರು ಗುರು ತೇಜ್ ಬಹಾದ್ದೂರ್ ಜಿ ಬೋಧನೆಗಳನ್ನು ಪ್ರಚಾರ ಮಾಡಲು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಮೊಘಲ್ ದೊರೆ ಔರಂಗಜೇಬನ ಆದೇಶದ ಮೇರೆಗೆ ಕಾಶ್ಮೀರಿ ಪಂಡಿತರ ಧಾರ್ಮಿಕ ಸ್ವಾತಂತ್ರ್ಯವನ್ನು ಬೆಂಬಲಿಸಿದ್ದಕ್ಕಾಗಿ ಗುರು ತೇಜ್ ಬಹಾದ್ದೂರ್ ಜಿ ಗಲ್ಲಿಗೇರಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+