ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಜೆ 6 ಗಂಟೆಗೆ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ

|
Google Oneindia Kannada News

ನವದೆಹಲಿ, ಅಕ್ಟೋಬರ್ 20: ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನರೇಂದ್ರ ಮೋದಿ ಭಾಷಣ ದೇಶಾದ್ಯಂತ ಕುತೂಹವನ್ನು ಮೂಡಿಸಿದೆ.

ಮಂಗಳವಾರ ಮಧ್ಯಾಹ್ನ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ. ನವರಾತ್ರಿಯ ಸಂದರ್ಭದಲ್ಲಿ ಮೋದಿ ಭಾಷಣ ಮಾಡುತ್ತಿದ್ದಾರೆ.

 ಮೈಸೂರು ವಿವಿ 100ನೇ ಘಟಿಕೋತ್ಸವ; ವಿವಿ ಶ್ಲಾಘಿಸಿದ ಪ್ರಧಾನಿ ಮೋದಿ ಮೈಸೂರು ವಿವಿ 100ನೇ ಘಟಿಕೋತ್ಸವ; ವಿವಿ ಶ್ಲಾಘಿಸಿದ ಪ್ರಧಾನಿ ಮೋದಿ

Narendra Modi To Address Nation On October 20 6 PM

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಬಳಿಕ ಅನ್ ಲಾಕ್ 3.0 ಜಾರಿಗೆ ಬಂದ ಬಳಿಕ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿಲ್ಲ. ಆದ್ದರಿಂದ, ಇಂದಿನ ಭಾಷಣ ಕುತೂಹಲಕ್ಕೆ ಕಾರಣವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದ ವ್ಯಕ್ತಿ ಈಗ ಬಿಜೆಪಿ ಅಭ್ಯರ್ಥಿ!ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದ ವ್ಯಕ್ತಿ ಈಗ ಬಿಜೆಪಿ ಅಭ್ಯರ್ಥಿ!

ಲಾಕ್‌ ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ದೇಶದ ಜನರಿಗೆ ನವರಾತ್ರಿ, ದೀಪಾವಳಿ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆಯೇ? ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಮಳೆ ಹಾನಿ: ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಮಾತುಕತೆಮಳೆ ಹಾನಿ: ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಮಾತುಕತೆ

ಭಾರತದಲ್ಲಿ ಕೋವಿಡ್‌ ಸೋಂಕಿಗೆ ಔಷಧಿಗಳನ್ನು ಕಂಡುಹಿಡಿಯುವ ಪ್ರಯತ್ನಗಳು ನಡೆಯುತ್ತಿದ್ದವು. ಈ ಸಂಶೋಧನೆ ಯಶಸ್ವಿಯಾಗಿದೆಯೇ?. ಮೋದಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆಯೇ? ಕಾದು ನೋಡಬೇಕಿದೆ.

ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆಯೇ? ಎಂಬುದು ಕುತೂಹಲ ಮೂಡಿಸಿದೆ.

Recommended Video

Mysore Dasara : ಮೈಸೂರಿನಿಂದ ವಿಶೇಷ Trains ನಿಮಗೋಸ್ಕರ!! | Oneindia Kannada

ನವರಾತ್ರಿ ಸಂದರ್ಭದಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಲಿದ್ದಾರೆ. ಬಳಿಕ ಯಾವ ವಿಚಾರದ ಕುರಿತು ಮಾತನಾಡಲಿದ್ದಾರೆ? ಎಂದು ಕಾದು ನೋಡಬೇಕಿದೆ.

English summary
Prime Minister of India Narendra Modi will be sharing a message for citizens at 6 PM on October 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X