ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರೀಯ ಶಿಕ್ಷಣ ನೀತಿ ಸಮಾವೇಶ; ಶುಕ್ರವಾರ ಮೋದಿ ಭಾಷಣ

|
Google Oneindia Kannada News

ನವದೆಹಲಿ, ಆಗಸ್ಟ್ 06: ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಡೆಯಲಿರುವ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸಮಾವೇಶ ಉದ್ದೇಶಿಸಿ ಶುಕ್ರವಾರ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.

'ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶ'ವನ್ನು ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಲಿದ್ದಾರೆ. ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಘೋಷಣೆ ಮಾಡಿದ ಬಳಿಕ ಮೊದಲ ಬಾರಿಗೆ ಮೋದಿ ಶಿಕ್ಷಣದ ಬಗ್ಗೆ ಮಾತನಾಡುತ್ತಿದ್ದಾರೆ.

ನಾಳೆ SSLC ರಿಸಲ್ಟ್‌: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆನಾಳೆ SSLC ರಿಸಲ್ಟ್‌: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಯುಜಿಸಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಜಂಟಿಯಾಗಿ ಈ ಸಮಾವೇಶ ಆಯೋಜನೆ ಮಾಡಿವೆ. ಉದ್ಘಾಟನಾ ಭಾಷಣ ಮಾಡಲಿರುವ ಪ್ರಧಾನಿ ಮೋದಿ ಹೊಸ ಶಿಕ್ಷಣ ನೀತಿ ಬಗ್ಗೆ ಜನರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ: ಮೂರು ಭಾಷೆಯ ಸೂತ್ರ ತಿರಸ್ಕರಿಸಿದ ತಮಿಳುನಾಡುರಾಷ್ಟ್ರೀಯ ಶಿಕ್ಷಣ ನೀತಿ: ಮೂರು ಭಾಷೆಯ ಸೂತ್ರ ತಿರಸ್ಕರಿಸಿದ ತಮಿಳುನಾಡು

Narendra Modi To Address On National Education Policy On August 7

ಸಮಾವೇಶದಲ್ಲಿ ಭವಿಷ್ಯದ ಶಿಕ್ಷಣ, ಗುಣಮಟ್ಟ, ಸಂಶೋಧನೆ ಬಗ್ಗೆ ಹಲವು ಚರ್ಚೆಗಳು ನಡೆಯಲಿವೆ. ಹೊಸ ಶಿಕ್ಷಣ ನೀತಿಯ ಮುನ್ನೋಟವನ್ನು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಮಂಡಿಸುವ ನಿರೀಕ್ಷೆ ಇದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ಆರ್ ಎಸ್ಎಸ್: ಎಲ್ಲಿಂದೆಲ್ಲಿ ನಂಟು?ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ಆರ್ ಎಸ್ಎಸ್: ಎಲ್ಲಿಂದೆಲ್ಲಿ ನಂಟು?

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸ ಶಿಕ್ಷಣ ನೀತಿಗೆ ಒಪ್ಪಿಗೆ ನೀಡಲಾಗಿತ್ತು. 1986ರಲ್ಲಿ ರೂಪಿಸಲಾಗಿದ್ದ ಶಿಕ್ಷಣ ನೀತಿಯನ್ನು ಬದಲಾವಣೆ ಮಾಡಲಾಗಿದ್ದು, ಅದನ್ನು ಈಗಾಗಲೇ ಪ್ರಕಟಿಸಲಾಗಿದೆ.

English summary
Prime minister Narendra Modi to deliver inaugural address at Conclave on Transformational Reforms in Higher Education under National Education Policy on Friday August 7, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X