ಮೇ 30ರಂದು ಗುರುವಾರ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ಸ್ವೀಕಾರ
Recommended Video
ಮೇ 30ರಂದು ನರೇಂದ್ರ ಮೋದಿ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
ನವದೆಹಲಿ, ಮೇ 30 : ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ನರೇಂದ್ರ ಮೋದಿ ಅವರು ಮೇ 30ರ ಗುರುವಾರದಂದು ನವದೆಹಲಿಯಲ್ಲಿ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.
68 ವರ್ಷದ ನರೇಂದ್ರ ಮೋದಿಯವರು ಸತತ ಎರಡನೇ ಬಾರಿ ಪ್ರಧಾನಿಯಾಗಿ ಭಾರತದ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಪ್ರಮಾಣ ವಚನ ಸಮಾರಂಭಕ್ಕೆ ದೇಶದ ಗಣ್ಯರು ಸೇರಿದಂತೆ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಭಾಗಿಯಾಗುವ ಸಾಧ್ಯತೆಯಿದೆ.
ಪ್ರಮಾಣ ವಚನ ಸಮಾರಂಭಕ್ಕೂ ಮೊದಲು ಮೇ 28ರಂದು ನರೇಂದ್ರ ಮೋದಿಯವರು ತಮ್ಮನ್ನು ಗೆಲ್ಲಿಸಿದ ವಾರಣಾಸಿಗೆ ಭೇಟಿ ನೀಡಿ, ಜನರಿಗೆ ಧನ್ಯವಾದ ಅರ್ಪಿಸಲಿದ್ದಾರೆ. ನಂತರ ಮೇ 30ರಂದು ಗುಜರಾತ್ ನ ಗಾಂಧಿನಗರಕ್ಕೆ ಕೂಡ ಭೇಟಿ ನೀಡಲಿದ್ದಾರೆ.

ಐತಿಹಾಸಿಕ ಗೆಲುವು ದಾಖಲಿಸಿರುವ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ, ಸ್ಪಷ್ಟ ಬಹುಮತ ಗಳಿಸಿದ್ದಲ್ಲದೆ, ಏಕಾಂಗಿಯಾಗಿ 300ರ ಗಡಿ ದಾಟಿದೆ. 2014ರ ಲೋಕಸಭಾ ಚುನಾವಣೆಯಲ್ಲಿ 282 ಕ್ಷೇತ್ರಗಳಲ್ಲಿ ಬಿಜೆಪಿ ಜಯಿಸಿತ್ತು. ಈ ಬಾರಿ ಆ ದಾಖಲೆಯನ್ನು ಅಳಿಸಿಹಾಕಿದೆ.












Click it and Unblock the Notifications