Narendra Modi took oat: ಮೋದಿ ಪ್ರಮಾಣವಚನ ಸ್ವೀಕಾರ: ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮ..
ದೆಹಲಿ ಜೂನ್ 9: ದೆಹಲಿಯಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ದೇಶದೆಲ್ಲಡೆ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.
ಪಟಾಕಿ ಸಿಡಿಸಿ ಸಿಹಿ ಹಂಚಿಕೊಂಡು ಕಾರ್ಯಕರ್ತರು, ಅಭಿಮಾನಿಗಳು ಸಂಭ್ರಮಿಸಿದರು. ಬಾನಂಗಳದಲ್ಲಿ ಕಲರ್‌ಫುಲ್ ಪಟಾಕಿ ನೋಡುಗರ ಸಂತಸವನ್ನು ಮತ್ತಷ್ಟು ಹೆಚ್ಚಿವೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದ ಗಣ್ಯರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಅನೇಕ ಗಣ್ಯರು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನೆರೆದಿರುವುದು ಕಂಡು ಬಂದಿದೆ.

ನರೇಂದ್ರ ಮೋದಿ ಅವರೊಂದಿಗೆ ರಾಜನಾಥ್ ಸಿಂಗ್, ಅಮಿತ್ ಶಾ, ನಿತೀನ್ ಗಡ್ಕರಿ, ಜೆಪಿ ನಡ್ಡಾ ಅವರು ಪ್ರಮಾಣವಚನ ಸ್ವೀಕಾರ ಮಾಡಿ ಸಂಪುಟ ಸೇರಿದರು.
ನರೇಂದ್ರ ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇನ್ನೂ ದೇವರ ಹೆಸರಿನಲ್ಲಿ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು.
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಿಹಿ ಹಂಚಿಕೆ
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬೆಂಗಳೂರಿನ ಮಲ್ಲೇಶ್ವರನ ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ಹರ್ಷ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಸಂಭ್ರಮ:
ಮೂರನೇ ಬಾರಿ ಪ್ರಧಾನ ಮಂತ್ರಿ ಪದಗ್ರಹಣ ಸ್ವೀಕಾರ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ನಗರದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.












Click it and Unblock the Notifications