• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸೋಮವಾರ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ

|

ನವದೆಹಲಿ, ಮೇ 10 : ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆ ಸೋಮವಾರ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಜಾರಿಯಲ್ಲಿರುವ 3ನೇ ಹಂತದ ಲಾಕ್ ಡೌನ್ ಮೇ 17ರಂದು ಅಂತ್ಯವಾಗಲಿದೆ. ಈ ಹಿನ್ನಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ.

ಸೋಮವಾರ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕೊರೊನಾ ನಿಯಂತ್ರಣದ ಕುರಿತು, ಲಾಕ್ ಡೌನ್ ಸಡಿಲಿಕೆ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ.

ಮೈಸೂರಿನ ನಾಯಕರ ಮನೆಗೂ ಬಂತು ಮೋದಿ ಫೋನ್ ಕಾಲ್

ವಲಸೆ ಕಾರ್ಮಿಕರು ವಾಪಸ್, ಕೊರೊನಾ ವಲಯಗಳ ಗುರುತಿಸುವಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಲಾಕ್ ಡೌನ್ ಕುರಿತು ಕೇಂದ್ರ ಸರ್ಕಾರ ರಾಜ್ಯಗಳ ಅಭಿಪ್ರಾಯ ಸಂಗ್ರಹ ಮಾಡಲಿದ್ದು, ಮುಂದಿನ ತೀರ್ಮಾನ ಕೈಗೊಳ್ಳಲಿದೆ.

ಲಾಕ್ ಡೌನ್ ಆಗಿರುವ ಭಾರತದ ಬಗ್ಗೆ ಪ್ರಧಾನಿ ಮೋದಿ 'ಮನ್ ಕೀ ಬಾತ್'?

ಕೊರೊನಾ ಹರಡದಂತೆ ತಡೆಯಲು ಮೇ 4ರಿಂದ ಜಾರಿಯಲ್ಲಿರುವ 3ನೇ ಹಂತದ ಲಾಕ್ ಟೌನ್ ಮೇ 17ರಂದು ಕೊನೆಗೊಳ್ಳಲಿದೆ. ಬಳಿಕ ಲಾಕ್ ಡೌನ್ ವಿಸ್ತರಣೆಯಾಗಲಿದೆಯೇ?, ರೈಲು, ವಿಮಾನ, ಬಸ್ ಸೇವೆ ಆರಂಭದ ಕುರಿತು ಯಾವ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ರೋಗಲಕ್ಷಣಗಳಿಲ್ಲದವರಲ್ಲಿ ಕೊರೊನಾ: ಆತಂಕ ಹೆಚ್ಚಿಸಿದ ಆರೋಗ್ಯ ಇಲಾಖೆ ಅಧ್ಯಯನ!

ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ. ಈ ಕುರಿತು ಪ್ರಧಾನಿ ಮೋದಿ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಲಾಕ್ ಡೌನ್ ನಿಯಮ ಇನ್ನಷ್ಟು ಸಡಿಲಗೊಳಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ.

English summary
Prime Minister of India Narendra Modi will have another video conference with state Chief Ministers on May 11, 2020. Discussion may expected on the lockdown which to end on May 17.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X