ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

PM Modi Assam Visit: 500 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆ;ಮೋದಿಯಿಂದ ಶಂಕುಸ್ಥಾಪನೆ

|
Google Oneindia Kannada News

ನವದೆಹಲಿ, ಏಪ್ರಿಲ್ 28: ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಸ್ಸಾಂಗೆ ಭೇಟಿ ನೀಡಲಿದ್ದು, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ದಿಪುದಲ್ಲಿ ಪ್ರಧಾನಮಂತ್ರಿ ಮೋದಿ 'ಶಾಂತಿ, ಏಕತೆ ಮತ್ತು ಅಭಿವೃದ್ಧಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಪ್ರಧಾನಿ ಸ್ವಾಗತಕ್ಕೆ 1 ಲಕ್ಷ ರಾಷ್ಟ್ರ ಧ್ವಜಗಳನ್ನು ಸಿದ್ಧಪಡಿಸಲಾಗಿದೆ.

ಪ್ರಧಾನ ಮಂತ್ರಿಗಳ ಕಚೇರಿ (PMO) ಪ್ರಕಾರ, ಅಸ್ಸಾಂ ಭೇಟಿ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿ ಶಿಕ್ಷಣ ಕ್ಷೇತ್ರದ ವಿವಿಧ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ದಿಫುವಿನಲ್ಲಿ ಪಶುವೈದ್ಯಕೀಯ ಕಾಲೇಜು, ಪಶ್ಚಿಮ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಪದವಿ ಕಾಲೇಜು ಮತ್ತು ಕೊಲೊಂಗಾ, ಪಶ್ಚಿಮ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಕೃಷಿ ಕಾಲೇಜುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಿಯವರೇ ಸುಳ್ಳು ಹೇಳದೆ ಈ 5 ಪ್ರಶ್ನೆಗಳಿಗೆ ಉತ್ತರಿಸಿ: ಸುರ್ಜೇವಾಲಾಪ್ರಧಾನಿಯವರೇ ಸುಳ್ಳು ಹೇಳದೆ ಈ 5 ಪ್ರಶ್ನೆಗಳಿಗೆ ಉತ್ತರಿಸಿ: ಸುರ್ಜೇವಾಲಾ

500 ಕೋಟಿಗೂ ಹೆಚ್ಚು ಮೌಲ್ಯದ ಈ ಯೋಜನೆಗಳು ಅಸ್ಸಾಂನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ.

Narendra Modi Visit to Assam on Today; 1 Lakh National Flag ready to welcome PM

2,950ಕ್ಕೂ ಹೆಚ್ಚು ಅಮೃತ ಸರೋವರ ಯೋಜನೆಗಳಿಗೆ ಶಂಕುಸ್ಥಾಪನೆ:

Recommended Video

ಸಾಲ ಮಾಡಿಯಾದ್ರು ತುಪ್ಪ ತಿನ್ನು ಎಂಬ ಗಾದೆ ಮಾತನ್ನು ನಿಜ‌ ಮಾಡಿರೋ‌ ದೇಶ‌ ಯಾವ್ದು? | Oneindia Kannada

ಅಸ್ಸಾಂ ಭೇಟಿ ವೇಳೆ 2,950ಕ್ಕೂ ಹೆಚ್ಚು ಅಮೃತ ಸರೋವರ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಜ್ಯವು ಈ ಅಮೃತ ಸರೋವರಗಳನ್ನು ಸುಮಾರು 1,150 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿದೆ. ಇದರ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಅಸ್ಸಾಂ ಸರ್ಕಾರವು ಏಪ್ರಿಲ್ 28 ರಂದು ದಿಬ್ರುಗಢ ಮತ್ತು ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಿಗೆ ಸ್ಥಳೀಯ ರಜೆ ಘೋಷಿಸಿದೆ.

English summary
Narendra Modi Visit to Assam on Today; 1 Lakh National Flag ready to welcome PM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X