Narendra Modi: ಸತತ 3ನೇ ಬಾರಿ ಪ್ರಧಾನಿ ಗದ್ದುಗೆ ಏರಲಿರುವ ನರೇಂದ್ರ ಮೋದಿ
Narendra Modi: ಈಗಾಗಲೇ ಲೋಕಸಭೆ ಚುನಾವಣೆಯ ಫಲಿತಾಂಶ ನಿನ್ನೆ (ಜೂನ್ 04) ಹೊರಬಿದ್ದಿದ್ದು, ಕೊನೆಗೂ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿ ಪ್ರಧಾನಿ ಗದ್ದುಗೆ ಏರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಜೂನ್ 8ರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಪ್ರಧಾನಿ ಮೋದಿ ಕೊನೆಯದಾಗಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದ್ದು, ಇಂದಿಗೆ 17ನೇ ಲೋಕಸಭೆ ವಿಸರ್ಜನೆ ಮಾಡಲಾಗಿದೆ.
ಜೂನ್ 7ರಂದು ಮಧ್ಯಾಹ್ನ 2:30ಕ್ಕೆ ಸಂಸತ್ ಭವನದಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.
ಇನ್ನು ಜೂನ್ 8ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮ ಸಂಜೆ 7ರಿಂದ 8 ಗಂಟೆಯವರೆಗೆ ನಡೆಯಬಹುದು ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಪ್ರಮಾಣ ವಚನ ಸ್ವೀಕಾರದ ವಿವರ: 2019ರ ಲೋಕಸಭಾ ಫಲಿತಾಂಶದ 7 ದಿನಗಳ ಬಳಿಕ ಪ್ರಧಾನಿ ಹುದ್ದೆಗೆ ಪ್ರಮಾಣ ವಚನ ಸಮಾರಂಭವನ್ನು ನಡೆಸಲಾಯಿತು. 2014ರಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದ್ದು, 10 ದಿನಗಳ ಬಳಿಕ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇನ್ನು ಈ ಬಾರಿ ಫಲಿತಾಂಶ ಘೋಷಣೆಯಾದ 4 ದಿನಗಳ ನಂತರ ಅಂದರೆ ಜೂನ್ 8ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಫಲಿತಾಂಶ ಜೂನ್ 4ರಂದು ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ತನ್ನ ತೆಕ್ಕೆಗೆ ಪಡೆದು ಬಹುಮತ ಗಳಿಸಿದೆ. ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ 234 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ ಏಕಾಂಗಿಯಾಗಿ 240 ಸ್ಥಾನಗಳನ್ನು ಗೆದ್ದಿದ್ದು, ಅಂತಹ ಪರಿಸ್ಥಿತಿಯಲ್ಲಿ, ಇದು ಮ್ಯಾಜಿಕ್ ನಂಬರ್ 272ಕ್ಕಿಂದ ತುಂಬಾ ಹಿಂದಿದೆ.
2014ರ ಚುನಾವಣೆಯಲ್ಲಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬಿಜೆಪಿ 282 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ 303 ಸ್ಥಾನಗಳನ್ನು ವಶಕ್ಕೆ ಪಡೆಯುವ ಮೂಲಕ ಬಹುಮತ ಗಳಿಸಿತ್ತು. ಆದರೆ, 2024ರಲ್ಲಿ ಮಿತ್ರಪಕ್ಷಗಳನ್ನು ಸೇರಿಸಿಕೊಂಡು ಎನ್‌ಡಿಎ ಬಹುಮತ ಸಾಧಿಸಿದೆ.












Click it and Unblock the Notifications