ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮೇ 2 ರಿಂದ ಈ ವರ್ಷದ ಮೋದಿ ಮೊದಲ ವಿದೇಶ ಪ್ರವಾಸ

|
Google Oneindia Kannada News

ನವದೆಹಲಿ, ಏಪ್ರಿಲ್ 27; ಭಾರತದ ಪ್ರಧಾನಿ ನರೇಂದ್ರ ಮೋದಿ ಮೇ 2 ರಿಂದ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. 2022ನೇ ವರ್ಷದಲ್ಲಿ ಮೊದಲ ಬಾರಿಗೆ ಮೋದಿ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ.

ಜರ್ಮನಿ, ಡೆನ್ಮಾರ್ಕ್‌ ಮತ್ತು ಫ್ರಾನ್ಸ್‌ ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಮೇ 2, 3 ಮತ್ತು 4ರಂದು ಮೋದಿ ವಿದೇಶ ಪ್ರವಾಸದಲ್ಲಿ ಇರಲಿದ್ದು, ವಿವಿಧ ನಾಯಕರನ್ನು ಭೇಟಿಯಾಗಲಿದ್ದಾರೆ.

 ಜಿಲ್ಲೆಗೊಂದು ವೈದ್ಯಕೀಯ ಕಾಲೇಜು: ಪ್ರಧಾನಿ ನರೇಂದ್ರ ಮೋದಿ ಘೋಷಣೆ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಯ 6ನೇ ಸಮ್ಮೇಳನದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಭಾರತ-ನಾರ್ಡಿಕ್‌ನ 2ನೇ ಶೃಂಗಸಭೆಯಲ್ಲಿಯೂ ಭಾಗಿಯಾಗಲಿದ್ದಾರೆ. ಈ ಶೃಂಗಸಭೆಯಲ್ಲಿ ನಾರ್ವೆ, ಡೆನ್ಮಾರ್ಕ್, ಸ್ವೀಡನ್, ಫಿನ್‌ಲ್ಯಾಂಡ್ ಮತ್ತು ಐಸ್‌ಲ್ಯಾಂಡ್ ನಾಯಕರು ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಮೋದಿ ಸಭೆ ಮೇಲೆ ಕಣ್ಣು; ಭಾರತ ಆಗುತ್ತಾ ಮತ್ತೆ ಲಾಕ್ ಡೌನ್!? ಪ್ರಧಾನಿ ಮೋದಿ ಸಭೆ ಮೇಲೆ ಕಣ್ಣು; ಭಾರತ ಆಗುತ್ತಾ ಮತ್ತೆ ಲಾಕ್ ಡೌನ್!?

Narendra Modi Will Visit Germany Denmark France On May 2 To 4

ಫ್ರಾನ್ಸ್‌ಗೆ ಭೇಟಿ ನೀಡಲಿರುವ ಮೋದಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಜೊತೆ ದಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ. ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್‌ ಭೇಟಿ ಮಾಡಲಿದ್ದಾರೆ.

ಸೋಮವಾರ ಫ್ರೆಂಚ್ ಅಧ್ಯಕ್ಷರಾಗಿ ಎಮ್ಯಾನುಯೆಲ್ ಮ್ಯಾಕ್ರಾನ್ ಆಯ್ಕೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದರು.

English summary
Prime minister of India Narendra Modi will visit Germany, Denmark and France on May 2 to 4. This is his first visit to abroad in 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X