ಸೋನಿಯಾಗೆ ಹುಟ್ಟುಹುಬ್ಬದ ಶುಭಾಶಯ ಕೋರಿದ ಮೋದಿ

Posted By:
Subscribe to Oneindia Kannada

ನವದೆಹಲಿ, ಡಿಸೆಂಬರ್ 09 : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ಜನ್ಮ ದಿನದ ಸಂಭ್ರಮ. 69ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.

ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮಾಡಿದ್ದು, ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.'ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು, ಅವರ ಆರೋಗ್ಯ ಚೆನ್ನಾಗಿರಲಿ' ಎಂದು ಮೋದಿ ಟ್ವಿಟ್ ಮಾಡಿದ್ದಾರೆ. [68ನೇ ಕ್ಯಾಂಡಲ್ ಹಚ್ಚಿದ ಸೋನಿಯಾಗೆ ಮೋದಿ ವಿಷ್]

sonia gandhi

ಸೋನಿಯಾ ಗಾಂಧಿ ಅವರು ತಮ್ಮ 68ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಜಮ್ಮ ಮತ್ತು ಕಾಶ್ಮೀರದಲ್ಲಿನ ಉಗ್ರರ ದಾಳಿ ಮತ್ತು ಛತ್ತೀಸ್‌ಗಢ್‌ನಲ್ಲಿ ನಡೆದ ನಕ್ಸಲರ ದಾಳಿ ಹಿನ್ನಲೆಯಲ್ಲಿ ಕಳೆದ ವರ್ಷ ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದರು. [ಸೋನಿಯಾಜಿಗೆ ಬರ್ಥ್ ಡೇ ಗಿಫ್ಟ್, ಪ್ರೊಫೈಲ್ ಪುಟದಲ್ಲಿ ಪೋರ್ನ್]

ಶುಭ ಕೋರಿದ ಸಿದ್ದರಾಮಯ್ಯ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ದೆಹಲಿಯಲ್ಲಿರುವ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ ಜನಪಥ್ ರಸ್ತೆಯಲ್ಲಿರುವ ಸೋನಿಯಾ ನಿವಾಸಕ್ಕೆ ಭೇಟಿ ನೀಡಿದ್ದರು. [ಪಿಟಿಐ ಚಿತ್ರ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Prime Minister Narendra Modi on Wednesday, December 9th greeted Congress president Sonia Gandhi on her 69th birthday.
Please Wait while comments are loading...