ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ

Posted By:
Subscribe to Oneindia Kannada

ನವದೆಹಲಿ, ನವೆಂಬರ್ 30: ದೇಶದ ಎಲ್ಲಾ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯಗೊಳಿಸಿ ಸುಪ್ರೀಂಕೋರ್ಟ್ ಬುಧವಾರ(ನವೆಂಬರ್ 30) ಮಹತ್ವದ ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಇನ್ಮುಂದೆ ಚಿತ್ರಮಂದಿರಗಳಲ್ಲಿ ಚಿತ್ರ ಆರಂಭಕ್ಕೂ ಮುನ್ನ ರಾಷ್ಟ್ರಧ್ವಜ ಪ್ರದರ್ಶಿಸಬೇಕು ಹಾಗೂ ರಾಷ್ಟ್ರಗೀತೆ ಮೊಳಗಿಸಿ ಗೌರವ ಸಲ್ಲಿಸಬೇಕಿದೆ. [ರಾಷ್ಟ್ರಗೀತೆಯನ್ನು ಸುತ್ತಿಕೊಂಡಿರುವ ವಿವಾದಗಳು?]

National Anthem compulsory in movie theatres rules Supreme Court

ರಾಷ್ಟ್ರಗೀತೆ ಜನ ಗಣ ಮನ ಮೊಳಗುವ ಸಂದರ್ಭದಲ್ಲಿ ಚಿತ್ರಮಂದಿರದಲ್ಲಿರುವ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಬೇಕು. ಈ ಕುರಿತಂತೆ ಕೇಂದ್ರ ಸರ್ಕಾರ ಕೂಡಲೇ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.[ಮುಸ್ಲಿಂ ಕುಟುಂಬವನ್ನು ಪಿವಿಆರ್ ನಿಂದ ಹೊರ ಹಾಕಿದ್ದೇಕೆ?]

ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಸೂಚನೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಅಧಿಸೂಚನೆಯನ್ನು ಮುದ್ರಣ ಹಾಗೂ ಇಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಕಟಿಸತಕ್ಕದ್ದು ಎಂದು ಸುಪ್ರೀಂಕೋರ್ಟ್ ನ್ಯಾ. ದೀಪಕ್ ಮಿಶ್ರಾ ಅವರು ತಮ್ಮ ಆದೇಶದಲ್ಲಿ ಹೇಳಿದ್ದಾರೆ. [ರಾಷ್ಟ್ರಗೀತೆಯನ್ನು ಸುತ್ತಿಕೊಂಡಿರುವ ವಿವಾದ ಒಂದೆ ಎರಡೆ?]

ರಾಷ್ಟ್ರಗೀತೆಯನ್ನು ಮೊಟಕುಗೊಳಿಸುವಂತಿಲ್ಲ, ಪೂರ್ಣಗೀತೆಯನ್ನು ಹಾಕಬೇಕು ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡುವಂತಿಲ್ಲ. ಒಂದೇ ರಾಷ್ಟ್ರದಲ್ಲಿ ನೆಲೆಸಿದ್ದೇವೆ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯ ಎಂಬ ಭಾವನೆ ಜನರಲ್ಲಿ ಮೂಡಬೇಕಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. (ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In a major decision, the Supreme Court today said that it was mandatory for movie theatres to play the National Anthem before a movie starts. The SC also made it mandatory that all theatre owners must display the National Flag on the screen before the start of a movie.
Please Wait while comments are loading...