ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಲನಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ: ಸುಪ್ರಿಂ ಕೋರ್ಟ್

By Sachhidananda Acharya
|
Google Oneindia Kannada News

ನವದೆಹಲಿ, ಜನವರಿ 9: ಸಿನಿಮಾ ಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಸುಪ್ರಿಂ ಕೋರ್ಟ್ ತನ್ನ ಆದೇಶವನ್ನು ಪರಿಷ್ಕರಣೆ ಮಾಡಿದೆ.

ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ ಎಂದು ಸುಪ್ರಿಂ ಕೋರ್ಟ್ ಇಂದು ಆದೇಶ ನೀಡಿದೆ.

ರಾಷ್ಟ್ರಗೀತೆ ಕಡ್ಡಾಯ: ಸುಪ್ರಿಂ ಆದೇಶ ಬದಲಾವಣೆಗೆ ಕೇಂದ್ರ ಮನವಿರಾಷ್ಟ್ರಗೀತೆ ಕಡ್ಡಾಯ: ಸುಪ್ರಿಂ ಆದೇಶ ಬದಲಾವಣೆಗೆ ಕೇಂದ್ರ ಮನವಿ

ಸೋಮವಾರವಷ್ಟೇ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸುವಂತೆ ಸುಪ್ರಿಂ ಕೋರ್ಟ್ ಗೆ ಕೇಂದ್ರ ಸರಕಾರ ಮನವಿ ಮಾಡಿಕೊಂಡಿತ್ತು.

National Anthem is not mandatory in cinema halls: Supreme Court

ಈ ಹಿಂದೆ 2016ರ ನವೆಂಬರ್ 30ರಂದು ಚಿತ್ರ ಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕು. ಈ ವೇಳೆ ಎಲ್ಲರೂ ಎದ್ದು ನಿಲ್ಲಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿತ್ತು.

ನಂತರ ವಿಚಾರಣೆಯೊಂದರ ವೇಳೆ ದೇಶಪ್ರೇಮದ ಹೆಸರಿನಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವುದು ನೈತಿಕ ಪೊಲೀಸ್ ಗಿರಿ ಆಗುತ್ತದೆ. ಹಾಗಾಗಿ ತನ್ನ ಆದೇಶ ಮಾರ್ಪಾಡಿಗೆ ಸಿದ್ದವೆಂಬ ಸುಳಿವನ್ನು ಸುಪ್ರಿಂ ಕೋರ್ಟ್ ನೀಡಿತ್ತು. ಈ ಸಂಬಂಧ ಮಾರ್ಗದರ್ಶಿ ಸೂತ್ರ ರಚಿಸುವಂತೆಯೂ ಅದು ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದೀಗ ಕೇಂದ್ರ ಸರಕಾರ ರಾಷ್ಡ್ರಗೀತೆ ಕಡ್ಡಾಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ಜು ರೂಪಿಸಲು ಸಮಿತಿಯನ್ನು ರಚಿಸಿದೆ. ಹೀಗಾಗಿ ಸಮಿತಿ ವರದಿ ನೀಡುವವರೆಗೆ ಆದೇಶದಲ್ಲಿ ಬದಲಾವಣೆ ಮಾಡುವಂತೆ ಸುಪ್ರಿಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು.

ಕೇಂದ್ರದ ಮನವಿಯನ್ನು ಪುರಸ್ಕರಿಸಿರುವ ಸುಪ್ರಿಂ ಕೋರ್ಟ್ ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಪ್ರಸಾರ ಕಡ್ಡಾಯವಲ್ಲ ಎಂಬ ಆದೇಶ ನೀಡಿದೆ.

English summary
In a change of stand, the Supreme Court today modifies its order on National Anthem, says it is not mandatory in cinema halls. Earlier the apex court made it mandatory for cinema halls to play the national anthem before screening of a feature film.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X