ರಾಷ್ಟ್ರೀಯ ಶಿಕ್ಷಣ ದಿನ: ದೇಶದ ಮೊದಲ ಶಿಕ್ಷಣ ಸಚಿವರ ಬಗ್ಗೆ ತಿಳಿದಿರಬೇಕಾದ ಅಂಶಗಳು

ನವದೆಹಲಿ, ನ. 11: ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ನೆನಪಿಗಾಗಿ ನವೆಂಬರ್ 11 ರಂದು ದೇಶಾದ್ಯಂತ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಶಿಕ್ಷಣ ವ್ಯವಸ್ಥೆಗೆ ಮೌಲಾನಾ ಆಜಾದ್ ಅವರ ಕೊಡುಗೆಯನ್ನು ಸ್ಮರಿಸಲು ಮತ್ತು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಸೆಪ್ಟೆಂಬರ್ 11, 2008 ರಂದು ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸುವುದಾಗಿ ಘೋಷಿಸಿತು.

2022 ರ ರಾಷ್ಟ್ರೀಯ ಶಿಕ್ಷಣ ದಿನದ ಥೀಮ್ "ಕೋರ್ಸ್ ಬದಲಾಯಿಸುವುದು, ಶಿಕ್ಷಣವನ್ನು ಪರಿವರ್ತಿಸುವುದು" ಎಂಬುದಾಗಿದೆ.

ದೇಶದ ಮೊದಲ ಶಿಕ್ಷಣ ಸಚಿವ ಅಬುಲ್ ಕಲಾಂ ಆಜಾದ್

ದೇಶದ ಮೊದಲ ಶಿಕ್ಷಣ ಸಚಿವ ಅಬುಲ್ ಕಲಾಂ ಆಜಾದ್

ಅಬುಲ್ ಕಲಾಂ ಗುಲಾಮ್ ಮುಹಿಯುದ್ದೀನ್ ಅಹ್ಮದ್ ಬಿನ್ ಖೈರುದ್ದೀನ್ ಅಲ್ ಹುಸೇನಿ ಆಜಾದ್ ಅವರು ನವೆಂಬರ್ 18, 1888 ರಂದು ಜನಿಸಿದರು. ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಶಿಕ್ಷಣತಜ್ಞರಾಗಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರಾಗಿ ಮಹತ್ವದ ಪಾತ್ರವನ್ನು ವಹಿಸಿದ್ದರು.

ಮೌಲಾನಾ ಅಬುಲ್ ಕಲಾಂ ಆಜಾದ್ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮರುರೂಪಿಸಲು ಕಂಕಣ ಬದ್ಧರಾಗಿದ್ದರು. ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಆಜಾದ್ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಆಧುನಿಕ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದ ಶ್ರೇಯಸ್ಸು ಅವರಿಗೂ ಸಲ್ಲುತ್ತದೆ.

ರಾಷ್ಟ್ರೀಯ ಶಿಕ್ಷಣ ದಿನ 2022: ಇತಿಹಾಸ ಮತ್ತು ಮಹತ್ವ

ರಾಷ್ಟ್ರೀಯ ಶಿಕ್ಷಣ ದಿನ 2022: ಇತಿಹಾಸ ಮತ್ತು ಮಹತ್ವ

ದೇಶದ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವಲ್ಲಿ ಈ ದಿನವು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣ ಸಚಿವರಾಗಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಹೆಣ್ಣುಮಕ್ಕಳ ಶಿಕ್ಷಣ ಮತ್ತು 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣಕ್ಕೆ ಒತ್ತು ನೀಡಿದ್ದರು.

ಆಜಾದ್ ಮೂಲಭೂತ ಶಿಕ್ಷಣದತ್ತ ಗಮನ ಹರಿಸಿದ್ದರು. ಎಲ್ಲಾ ಮಕ್ಕಳಿಗೆ ವೃತ್ತಿಪರ ತರಬೇತಿಯನ್ನು ಒಳಗೊಂಡಿರುವ ತಾಂತ್ರಿಕ ಶಿಕ್ಷಣದ ಅಗತ್ಯತೆ ಬಗ್ಗೆ ಯೋಚಿಸಿದ್ದರು.

ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವು ರಾಷ್ಟ್ರೀಯ ಶಿಕ್ಷಣ ದಿನ 2022ರ ಥೀಮ್ ಆಗಿ 'ಕೋರ್ಸ್ ಬದಲಾಯಿಸುವುದು, ಶಿಕ್ಷಣವನ್ನು ಪರಿವರ್ತಿಸುವುದು' ಎಂಬುದನ್ನು ನೀಡಿದೆ.

ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡಿದ್ದ ಆಜಾದ್

ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡಿದ್ದ ಆಜಾದ್

ಶಿಕ್ಷಣವು ದೇಶದ ಭವಿಷ್ಯದ ಪೀಳಿಗೆಯ ಜೀವನವನ್ನು ರೂಪಿಸುವ ಪ್ರಮುಖ ಅಂಶ ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಆರರಿಂದ ಹದಿನಾಲ್ಕು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಒದಗಿಸುವುದು ಮೂಲಭೂತ ಹಕ್ಕು.

ಶಿಕ್ಷಣದ ಹಕ್ಕನ್ನು ಮಾನವ ಹಕ್ಕು ಎಂದು ಪರಿಗಣಿಸಲಾಗಿದೆ. ಪ್ರಪಂಚದಾದ್ಯಂತ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲು ಹಲವಾರು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.

ಶಿಕ್ಷಣ ಕ್ಷೇತ್ರಕ್ಕೆ ಮೌಲಾನಾ ಅಬುಲ್ ಕಲಾಂ ಆಜಾದ್ ಕೊಡುಗೆ

ಶಿಕ್ಷಣ ಕ್ಷೇತ್ರಕ್ಕೆ ಮೌಲಾನಾ ಅಬುಲ್ ಕಲಾಂ ಆಜಾದ್ ಕೊಡುಗೆ

ದೇಶದ ಮೊದಲ ಶಿಕ್ಷಣ ಸಚಿವರಾದ ಆಜಾದ್ ನೇತೃತ್ವದಲ್ಲಿ ಶಿಕ್ಷಣ ಸಚಿವಾಲಯುವು ದೇಶದ ಮೊದಲ ಐಐಟಿ ಅನ್ನು 1951 ರಲ್ಲಿ ಸ್ಥಾಪಿಸಿತ್ತು. ನಂತರ 1953 ರಲ್ಲಿ ವಿಶ್ವವಿದ್ಯಾನಿಲಯ ಅನುದಾನ ಆಯೋಗವನ್ನು (UGC) ರಚಿಸಲಾಯಿತು. ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (AICTE) ಅನ್ನು ಸ್ಥಾಪಿಸುವ ಮೂಲಕ ಶಿಕ್ಷಣ ವ್ಯವಸ್ಥೆಗೆ ಮಹತ್ವದ ಯೋಜನೆಗಳನ್ನು ಜಾರಿ ಮಾಡಿದ್ದಾರೆ.

ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ (ICCR), ಸಾಹಿತ್ಯ ಅಕಾಡೆಮಿ, ಲಲಿತ ಕಲಾ ಅಕಾಡೆಮಿ, ಸಂಗೀತ ನಾಟಕ ಅಕಾಡೆಮಿ, ಮತ್ತು ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಂತಹ ಭಾರತದ ಸಾಂಸ್ಕೃತಿಕ ಸಂಸ್ಥೆಗಳಿಗೆ ಅವರು ಕೊಡುಗೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+