ಗೂಢಲಿಪಿ ಕಾಯ್ಡೆ ಕರಡು ಹಿಂಪಡೆದ ಮೋದಿ ಸರ್ಕಾರ
ನವದೆಹಲಿ, ಸೆ.22: ರಾಷ್ಟ್ರೀಯ ಗೂಢಲಿಪಿ ಕಾಯ್ದೆ(National Encryption Policy) ಕರಡನ್ನು ವಾಪಸ್ ಪಡೆಯಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಗಳವಾರ ನಿರ್ಧರಿಸಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸರ್ಕಾರ ಎಂದಿಗೂ ಅಡ್ಡಿ ಬರುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಹಲವಾರು ವಿವಾದಾತ್ಮಕ ಅಂಶಗಳನ್ನು ಒಳಗೊಂಡಿದ್ದ ರಾಷ್ಟ್ರೀಯ ಗೂಢಲಿಪಿ ಕಾಯ್ದೆಯ ಕರಡು ಪ್ರತಿಯನ್ನು ತಿದ್ದುಪಡಿ ಮಾಡಿಕೊಂಡು ಮತ್ತೊಂದು ಬಗೆಯಲ್ಲಿ ಜಾರಿಗೊಳಿಸುವ ಸುಳಿವು ಕೂಡಾ ಸಿಕ್ಕಿದೆ.
ಅದರೆ, ಯಾವುದೇ ಕಾರಣಕ್ಕೂ ಜನಪ್ರಿಯ ಸಾಮಾಜಿಕ ಜಾಲ ತಾಣಗಳಾದ ವಾಟ್ಸಪ್, ಜೀ ಮೇಲ್, ಫೇಸ್ ಬುಕ್, ಟ್ವಿಟ್ಟರ್, ವೀಚಾಟ್ ಮುಂತಾದವುಗಳನ್ನು ಬಳಸುವ ಸಾರ್ವಜನಿಕರ ಸ್ವಾತಂತ್ರ್ಯ ಹರಣವಾಗುವುದಿಲ್ಲ ಎಂಬ ಭರವಸೆಯಂತೂ ಸಿಕ್ಕಿದೆ. [ನಿಯಮ ಜಾರಿಗೊಂಡರೆ ಏನಾಗಲಿದೆ?]
ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆ ಆಧಾರದ ಮೇಲೆ ಹೊಸ ಗೂಢಲಿಪಿ ಕಾಯ್ದೆ (ನ್ಯಾಷನಲ್ ಎನ್ಕ್ರಿಪ್ಷನ್ ಪಾಲಿಸಿ) ಜಾರಿಗೆ ತರಲು ಮೋದಿ ಸರ್ಕಾರ ಮುಂದಾಗಿತ್ತು.

ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಹಿವಾಟು ಹೆಚ್ಚಾಗುತ್ತಿದೆ. ಜತೆಗೆ ಸೈಬರ್ ಅಪರಾಧಗಳು ಕೂಡ ಹೆಚ್ಚಾಗುತ್ತಿವೆ. ಈ ಕಾರಣದಿಂದಾಗಿ ಅವುಗಳನ್ನು ನಿಯಂತ್ರಿಸಲು ಒಂದು ಕಾಯ್ದೆ ರೂಪಿಸಲು ಸರ್ಕಾರ ಮುಂದಾಗಿತ್ತು. ಜೊತೆಗೆ ಗೂಢಲಿಪಿ ಬಳಸುವ ಎಲ್ಲಾ ಸಂದೇಶಗಳನ್ನು 90 ದಿನ ಕಾಯ್ದಿಟ್ಟುಕೊಳ್ಳುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಕಾಯ್ದೆಯ ಕರಡು ಪ್ರತಿಯಲ್ಲಿ ತಿಳಿಸಲಾಗಿತ್ತು.
ಸಾರ್ವಜನಿಕರ ಖಾಸಗಿತನಕ್ಕೆ ಬೆಲೆ ನೀಡುತ್ತೇವೆ. ಸಾಮಾಜಿಕ ಜಾಲ ತಾಣಗಳ ಸದ್ಬಳಕೆ ಬಗ್ಗೆ ಪ್ರಧಾನಿ ಮೋದಿ ಅವರೇ ಮಾದರಿಯಾಗಿದ್ದಾರೆ.
ಪ್ರಸ್ತುತ ಕಾಯ್ದೆಯ ಕರಡಿನಲ್ಲಿರುವ ಹಲವಾರು ಅಂಶಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಅದನ್ನು ವಾಪಸು ಪಡೆಯುವಂತೆ ಸಲಹೆ ನೀಡಿದೆ ಎಂದು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಭಾರತದ ಹೊರಗಿನಿಂದ ಗೂಢಲಿಪಿ ಬಳಕೆ ಮಾಡಿ ಕಾರ್ಯನಿರ್ವಹಿಸುತ್ತಿರುವ ಸಂದೇಶವಾಹಕ ಸಂಸ್ಥೆಗಳೂ ಭಾರತದಲ್ಲಿ ಕಾರ್ಯಾಚರಣೆ ಪ್ರಾರಂಭಿಸುವ ಮುನ್ನ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿತ್ತು. ಆದರೆ, ಈ ನಿಯಮಕ್ಕೆ ಅನೇಕ ಸಂಸ್ಥೆಗಳು ಒಪ್ಪದ ಕಾರಣ ಕರಡು ಹಿಂಪಡೆಯುವುದು ಅನಿವಾರ್ಯ ಎಂದು ಸೈಬರ್ ಕಾನೂನು ತಜ್ಞ ಪವನ್ ದುಗ್ಗಾಲ್ ಅವರು ಅಭಿಪ್ರಾಯಪಟ್ಟಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications