ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ VS ಅರುಣ್ ಜೇಟ್ಲಿ

Subscribe to Oneindia Kannada

ನವದೆಹಲಿ,ಡಿಸೆಂಬರ್. 08: ನ್ಯಾಷನಲ್ ಹೆರಾಲ್ಡ್ ಪ್ರಕರಣ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಚೆನ್ನೈನಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಬಿಜೆಪಿ ಪ್ರಕರಣವನ್ನು ಇಟ್ಟುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರೆ, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅರುಣ್ ಜೇಟ್ಲಿ ಬಿಜೆಪಿಗೆ ಅಂಥ ಅಗತ್ಯವೇ ಇಲ್ಲ ಎಂದು ಹೇಳಿದ್ದಾರೆ.

ಚೆನ್ನೈ ನೆರೆ ಸಂತ್ರಸ್ತರ ಸಂಕಷ್ಟವನ್ನು ಮಂಗಳವಾರ ಆಲಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ಇಂಥದಕ್ಕೆ ಹೆದರುವುದಿಲ್ಲ. ಸುಳ್ಳು ಆರೋಪಗಳಿಗೆ ಹೆದರಿ ನಾವು ಯಾರ ಮುಂದೆಯೂ ತಲೆ ತಗ್ಗಿಸಲ್ಲ ಎಂದು ತಿರುಗೇಟು ನೀಡಿದ್ದಾರೆ. [ನಾನು ಇಂದಿರಾಗಾಂಧಿ ಸೊಸೆ ನಾನೇಕೆ ಹೆದರಲಿ]

arun

ಸಂಸತ್ ಕಲಾಪದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ರಾಹುಲ್ ಗಾಂಧಿ ಆರೋಪವನ್ನು ತಳ್ಳಿಹಾಕಿದರು. ಬಿಜೆಪಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಸುಳ್ಳು ಆರೋಪ ಇಟ್ಟುಕೊಂಡು ರಾಜಕಾರಣ ಮಾಡಬೇಕಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಿಯೇ ಆಗುತ್ತದೆ. ಸಂಸತ್ತು ಮತ್ತು ಸಂವಿಧಾನವನ್ನು ಎಲ್ಲರೂ ಗೌರವಿಸಬೇಕಿದೆ ಎಂದು ಹೇಳಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಗಳು ನ್ಯಾಯಾಲಯದಲ್ಲಿದೆ. ಅದರ ಬಗ್ಗೆ ನಾನು ಮಾತನಾಡುವ ಅಗತ್ಯವೇ ಇಲ್ಲ. ಆದರೆ ದ್ವೇಷದ ರಾಜಕಾರಣ ಮಾಡುತ್ತಿದ್ದೇವೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು ಎಂದು ಹೇಳಿದರು.[ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾಗೆ ಹಿನ್ನಡೆ]

ಕಲಾಪ ಬಲಿ ಪಡೆದ ನ್ಯಾಷನಲ್ ಹೆರಾಲ್ಡ್ ಪ್ರಕರಣ
ಕಾಂಗ್ರೆಸ್ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದದ ಹಿನ್ನೆಲೆಯಲ್ಲಿ ಕಲಾಪ ಮುಂದೂಡಲಾಯಿತು. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಕುರಿತಂತೆ ದೆಹಲಿಯ ಪಟಿಯಾಲಾ ಕೋರ್ಟ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಡಿಸೆಂಬರ್ 19ರಂದು ಖುದ್ದು ಹಾಜರಾಗಲು ಸೂಚನೆ ನೀಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Union Finance Minister Arun Jaitley on Tuesday said the National Herald case was a matter of serious corruption and the government had nothing to do with the matter. He said the Congress should fight the case in court and not stall parliamentary proceedings. "It' a matter of serious corruption as funds collected for political purposes are being used for commercial activity," Jaitley told reporters outside parliament house. Congress Vice-President Rahul Gandhi on Tuesday, Dec 8 alleged a "political vendetta" by the ruling BJP into the National Herald case, and insisted that he will not be cowed down and will continue asking questions to put pressure on NDA at Centre.
Please Wait while comments are loading...