2ನೇ ಸುತ್ತಿನ ಇಡಿ ವಿಚಾರಣೆಗೆ ಬಂದ ರಾಹುಲ್ ಗಾಂಧಿ

ನವದೆಹಲಿ, ಜೂನ್ 13: ನ್ಯಾಷನಲ್ ಹೆರಾಲ್ಡ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯದ ತೀವ್ರ ವಿಚಾರಣೆಗೊಳಪಡಿಸಿದೆ.

ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಸಮನ್ಸ್ ಜಾರಿ ಹಿನ್ನೆಲೆ ವಿಚಾರಣೆಗೆ ಹಾಜರಾಗುವುದಕ್ಕೂ ಪೂರ್ವದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಕಚೇರಿಯಿಂದ ಇಡಿ ಕಚೇರಿವರೆಗೂ ಕಾಲ್ನಡಿಗೆ ಶುರು ಮಾಡಿದ್ದರು. ಸ್ವಲ್ಪ ದೂರ ತೆರಳುತ್ತಿದ್ದಂತೆ ಕಾರ್ಯಕರ್ತರು ಮುಗಿ ಬೀಳುತ್ತಿದ್ದಂತೆ ಕಾರು ಏರಿ ಇಡಿ ಕಚೇರಿಗೆ ತಲುಪಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಕುರಿತು ಮೊದಲ ಹಂತದಲ್ಲಿ ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ಮೂರು ಗಂಟೆಗಳವರೆಗೂ ಪ್ರಶ್ನೆೆ ಮಾಡಿದರು. ಊಟದ ವಿರಾಮದ ನಂತರದಲ್ಲಿ ಮಧ್ಯಾಹ್ನ 3 ಗಂಟೆ ನಂತರದಲ್ಲಿ ಎರಡನೇ ಹಂತದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿದ್ದರು. ಮನಿ ಲಾಂಡರಿಂಗ್ ಪ್ರಕರಣದ ಹಿನ್ನೆಲೆ ಜಾರಿ ನಿರ್ದೇಶನಾಲಯದಿಂದ ರಾಹುಲ್‌ ಗಾಂಧಿಯವರಿಗೆ ನೋಟಿಸ್‌ ನೀಡಿದ್ದು, ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಯಿತು.

National Herald case: Congress MP Rahul Gandhi returns to ED office for 2nd round of questioning

ಅವ್ಯವಹಾರದ ಆರೋಪ: ದೇಶದಲ್ಲಿ ತದನಂತರ ಪ್ರಕಟಗೊಂಡ ಇತರ ಪತ್ರಿಕೆಗಳಿಗೆ ಪೈಪೋಟಿ ನೀಡುವುದುಕ್ಕೆ ಸಾಧ್ಯವಾಗದೇ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗದೇ ತೀವ್ರ ವೈಫಲ್ಯವನ್ನು ಅನುಭವಿಸಿತು. ಇದರ ಪರಿಣಾಮವಾಗಿ ಜಾಹೀರಾತು ಆದಾಯದ ಕೊರತೆ ಸೃಷ್ಟಿಯಾಯಿತು. ಕಳೆದ 2008ರಲ್ಲಿ ಮೂರೂ ಆವೃತ್ತಿಯ ಪ್ರಕಟಣೆ ಸ್ಥಗಿತಗೊಳಿಸುತ್ತಿರುವುದಾಗಿ ಪತ್ರಿಕೆ ಘೋಷಿಸಿತು. 29.09.2010ರ ವೇಳೆಗೆ ಷೇರು ಹೋಲ್ಡರುಗಳ ಸಂಖ್ಯೆ 1057ಕ್ಕೆ ಇಳಿದಿತ್ತು. ಆ ಸಮಯದಲ್ಲಿ ಸಂಸ್ಥೆಯು 90.25 ಕೋಟಿ ರೂಪಾಯಿ ಸಾಲವನ್ನು ಹೊಂದಿತ್ತು.

ನ್ಯಾಷನಲ್ ಹೆರಾಲ್ಡ್ ಮತ್ತು ಕಾಂಗ್ರೆಸ್ ನಡುವಿನ ನಂಟು: ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ವೈಐಎಲ್ 90.25 ಕೋಟಿ ರೂಪಾಯಿ ಬಡ್ಡಿರಹಿತ ಸಾಲವನ್ನು ನೀಡಿತ್ತು. ಇದರಲ್ಲಿ ಎಐಸಿಸಿ ಖಜಾನೆಯಿಂದ ಐವತ್ತು ಲಕ್ಷ ರೂಪಾಯಿ ನೇರವಾಗಿ ವರ್ಗಾವಣೆಯಾಗಿತ್ತು ಎಂಬ ಆರೋಪವಿದೆ. ಅಲ್ಲದೇ, ಹೆರಾಲ್ಡ್ ಒಡೆತನದಲ್ಲಿದ್ದ 'ಹೆರಾಲ್ಡ್‌ ಹೌಸ್‌' ನವೀಕರಣಕ್ಕೆ ಒಂದು ಕೋಟಿ ರೂಪಾಯಿ ನೀಡಿತ್ತು ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+