ನ್ಯಾಷನಲ್ ಹೆರಾಲ್ಡ್ ಕೇಸ್ : ಸೋನಿಯಾ ಹಾಗೂ ರಾಹುಲ್ ಗೆ ಹಿನ್ನಡೆ

Posted By:
Subscribe to Oneindia Kannada

ನವದೆಹಲಿ, ಡಿ.07: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಮುಖ ಆರೋಪಿಯಾಗಿರುವ ನ್ಯಾಷನಲ್ ಹೆರಾಲ್ಡ್ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ಪುನರ್ ಆರಂಭಿಸಿದ ಬೆನ್ನಲ್ಲೇ ಮತ್ತೊಂದು ಶಾಕ್ ತಗುಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಗೊಳಿಸದಂತೆ ಸೋನಿಯಾ ಹಾಗೂ ರಾಹುಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿ, ವಿಚಾರಣೆಗೆ ಖುದ್ದು ಹಾಜರಾಗುವಂತೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ಸುನಿಲ್ ಗೌರ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ.[ಸೋನಿಯಾಗೆ ಸಂಕಷ್ಟ, ನ್ಯಾಷನಲ್ ಹೆರಾಲ್ಡ್ ಕೇಸ್ ರೀ ಓಪನ್]

ಈ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿ ಅಲ್ಲದೆ ಕಾಂಗ್ರೆಸ್ ನ ಖಜಾಂಜಿ ಮೋತಿಲಾಲ್ ವೋರಾ, ಗಾಂಧಿ ಕುಟುಂಬದ ಮಿತ್ರ ಸುಮನ್ ದುಬೇ, ಪಕ್ಷದ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಅವರು ಕೂಡಾ ಸಮನ್ಸ್ ಜಾರಿಗೊಳಿಸದಂತೆ ಮನವಿ ಸಲ್ಲಿಸಿದ್ದರು.

ಸೋನಿಯಾ ಮತ್ತು ರಾಹುಲ್ 'ಯಂಗ್ ಇಂಡಿಯನ್' ಹೆಸರಿನ ಖಾಸಗಿ ಕಂಪನಿಯಲ್ಲಿ ತಲಾ ಶೇ. 38ರಷ್ಟು ಷೇರು ಹೊಂದಿದ್ದಾರೆ. ಆ ಕಂಪನಿಯ ಮೂಲಕ ಹೆರಾಲ್ಡ್ ಮಾತೃ ಸಂಸ್ಥೆ 'ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್' ಎಂಬ ಪಬ್ಲಿಕ್ ಕಂಪನಿಯನ್ನು ಖರೀದಿಸಿದ್ದಾರೆ.

ಸುಬ್ರಮಣ್ಯ ಸ್ವಾಮಿ ನೀಡಿರುವ ದೂರು

ಸುಬ್ರಮಣ್ಯ ಸ್ವಾಮಿ ನೀಡಿರುವ ದೂರು

ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರೂ ಅವರು ಸ್ಥಾಪಕ ಸಂಪಾದಕರಾಗಿದ್ದ 'ನ್ಯಾಷನಲ್ ಹೆರಾಲ್ಡ್‌' ಪತ್ರಿಕೆಗೆ ಸೇರಿದ ಸುಮಾರು 2,000 ಕೋಟಿ ರುಪಾಯಿ ಮೌಲ್ಯದ ಆಸ್ತಿ ಕಬಳಿಸಲು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಸಾರ್ವಜನಿಕ ಕಂಪನಿಯನ್ನು ಖಾಸಗಿ ಕಂಪನಿಯಾಗಿ ಮಾರ್ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣ್ಯ ಸ್ವಾಮಿ ಅವರು ದೂರು ನೀಡಿದ್ದರು

ಸಮನ್ಸ್ ಗೆ ಬೆಲೆ ಯಾರು ಕೊಡುತ್ತಾರೆ?

ಸಮನ್ಸ್ ಗೆ ಬೆಲೆ ಯಾರು ಕೊಡುತ್ತಾರೆ? ವಿಚಾರಣೆಗೆ ಖುದ್ದು ಹಾಜರಾಗಲು ಇವರಿಗೆ ಏನು ತೊಂದರೆ.

ಜೈಲಿಗೆ ಹೋಗುವುದರಲ್ಲಿ ತಪ್ಪೇನಿಲ್ಲ

ಜೈಲಿಗೆ ಹೋಗುವುದರಲ್ಲಿ ತಪ್ಪೇನಿಲ್ಲ, ಇಂದಿರಾಗಾಂಧಿ ಅವರು ಕೂಡಾ ಜೈಲಿಗೆ ಹೋಗಿ ಬಂದಿದ್ದರು.

ಭ್ರಷ್ಟಾಚಾರ ವಿರೋಧಿ ನಾಯಕರಿಂದ ಟ್ವೀಟಿಲ್ಲ ಏಕೆ?

ಭ್ರಷ್ಟಾಚಾರ ವಿರೋಧಿ ನಾಯಕ ಅರವಿಂಡ್ ಕೇಜ್ರಿವಾಲ್ ರಿಂದ ಈ ಬಗ್ಗೆ ಒಂದು ಟ್ವೀಟಿಲ್ಲ ಏಕೆ?

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Delhi High Court on Monday dismissed the pleas of Congress president Sonia Gandhi and vice president Rahul Gandhi seeking to quash summons issued to them by a trial court on BJP leader Subramanian Swamy's complaint in the National Herald case.
Please Wait while comments are loading...