ಸೋನಿಯಾ, ರಾಹುಲ್‌ಗೆ ಜೈಲೋ..ಜಾಮೀನೋ?
ನವೆದೆಹಲಿ, ಡಿಸೆಂಬರ್ 19 : ದೇಶದ ಜನರ ಕಣ್ಣು ದೆಹಲಿಯ ಪಟಿಯಾಲ ಕೋರ್ಟ್ ನತ್ತ ನೆಟ್ಟಿದೆ. ನ್ಯಾಷನಲ್ ಹೆರಾಲ್ಡ್ ಆಸ್ತಿಯ ಅಕ್ರಮ ಪರಭಾರೆ ಆರೋಪ ಎದುರಿಸುತ್ತಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜೈಲೋ ಅಥವ ಜಾಮೀನೋ ಎಂದು ಇಂದು ತೀರ್ಮಾನವಾಗಲಿದೆ. ಮಧ್ಯಾಹ್ನ 3 ಗಂಟೆಗೆ ಕೋರ್ಟ್‌ಗೆ ಹಾಜರಾಗಲಿದ್ದು, ಕೋರ್ಟ್ ಸುತ್ತಮತ್ತ ಭಾರೀ ಭದ್ರತೆ ಒದಗಿಸಲಾಗಿದೆ. [ಏನಿದು ನ್ಯಾಷನಲ್ ಹೆರಾಲ್ಡ್ ಹಗರಣ?]

ನ್ಯಾಷನಲ್ ಹೆರಾಲ್ಡ್ ಆಸ್ತಿಯ ಅಕ್ರಮ ಪರಭಾರೆ ಬಗ್ಗೆ ದೂರು ನೀಡಿರುವುದು ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ. ಆದ್ದರಿಂದ, ಈ ಪ್ರಕರಣದ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರಕ್ಕೂ ಕಾರಣವಾಗಿದೆ. ಇದೇ ಮೊದಲ ಬಾರಿಗೆ ಈ ಪ್ರಕರಣದ ವಿಚಾರಣೆಗೆ ಸೋನಿಯಾ ಮತ್ತು ರಾಹುಲ್ ಆಗಮಿಸುತ್ತಿದ್ದಾರೆ. [ನ್ಯಾಷನಲ್ ಹೆರಾಲ್ಡ್ ಕೇಸ್ ರೀ ಓಪನ್]
ಯಾರು-ಯಾರು ಬರ್ತಾರೆ? : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಗಳಾದ ಸೋನಿಯಾ ಗಾಂಧಿ, ರಾಹುಲ್ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸ್ಯಾಮ್ ಪಿತ್ರೋಡಾ ಹಾಗೂ ಸುಮನ್ ದುಬೆ ಅವರು ಪಟಿಯಾಲಾ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಕೋರ್ಟ್ ಹೊರಗೆ ಭಾರೀ ಭದ್ರತೆ : ಎಸ್ಪಿಜಿ ಭದ್ರತೆ ಹೊಂದಿರುವ ಸೋನಿಯಾ, ರಾಹುಲ್ ಇದೇ ಮೊದಲ ಬಾರಿಗೆ ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಆವರಣದಲ್ಲಿ ಹೆಚ್ಚುವರಿಯಾಗಿ 16 ಸಿಸಿಟಿವಿಗಳನ್ನು ಅಳವಡಿಸಲಾಗಿದೆ.
My goal is not only to eliminate corruption but instill courage in ordinary citizen and fear in the high and mighty.
— Subramanian Swamy (@Swamy39) December 19, 2015 











Click it and Unblock the Notifications