ರಾಷ್ಟ್ರೀಯ ತಂತ್ರಜ್ಞಾನ ದಿನ: 5,800 ಕೋಟಿ ರೂ ಮೊತ್ತದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ, ಮೇ. 11: ರಾಷ್ಟ್ರೀಯ ತಂತ್ರಜ್ಞಾನ ದಿನದಂದು (ಮೇ 11) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಲೇಸರ್ ಇಂಟರ್‌ಫೆರೋಮೀಟರ್ ಗ್ರಾವಿಟೇಷನಲ್ ವೇವ್ ಅಬ್ಸರ್ವೇಟರಿ (ಲಿಜೋ ಇಂಡಿಯಾ) ಮತ್ತು 5800 ಕೋಟಿ ರೂಪಾಯಿ ಮೌಲ್ಯದ ವೈಜ್ಞಾನಿಕ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.

ರಾಷ್ಟ್ರೀಯ ತಂತ್ರಜ್ಞಾನ ದಿನದ ಸಂದರ್ಭದಲ್ಲಿ ಕೋಟ್ಯಾಂತರ ಮೌಲ್ಯದ ವೈಜ್ಞಾನಿಕ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ, "ರಾಷ್ಟ್ರೀಯ ತಂತ್ರಜ್ಞಾನ ದಿನವು ನಮ್ಮ ದೇಶಕ್ಕೆ ದೊಡ್ಡ ದಿನವಾಗಿದೆ. ಭಾರತದ ವೈಜ್ಞಾನಿಕ ಪ್ರಗತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಈ ದೇಶದ ವಿಜ್ಞಾನಿಗಳನ್ನು ನಾವು ಅಭಿನಂದಿಸುತ್ತೇವೆ ಮತ್ತು ಪ್ರಶಂಸಿಸುತ್ತೇವೆ" ಎಂದು ನೆನಪು ಮಾಡಿಕೊಂಡಿದ್ದಾರೆ.

PM Modi launches projects worth ₹5,800 crore

"ಕಳೆದ ಒಂಬತ್ತು ವರ್ಷಗಳಲ್ಲಿ, ನಾವು ಭಾರತವು ಮುಂದುವರಿಯಲು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲು ಬಲವಾದ ಅಡಿಪಾಯವನ್ನು ಹಾಕಿದ್ದೇವೆ" ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.

ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗಾಗಿ ಶ್ರಮಿಸಿದ ಮತ್ತು ಮೇ 1998 ರಲ್ಲಿ ಪೋಖ್ರಾನ್ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆದಿದ್ದನ್ನು ಖಚಿತಪಡಿಸಿದ ಭಾರತೀಯ ವಿಜ್ಞಾನಿಗಳು, ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ಗೌರವಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1999 ರಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನದ ಆಚರಣೆಯನ್ನು ಪ್ರಾರಂಭಿಸಿದರು.

PM Modi launches projects worth ₹5,800 crore

ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಹಿಂಗೋಲಿಯಾದಲ್ಲಿ ಲಿಜೋ (LIGO) ಇಂಡಿಯಾ, ಒಡಿಶಾದ ಜತ್ನಿಯಲ್ಲಿ ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮತ್ತು ಮುಂಬೈ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಪ್ಲಾಟಿನಂ ಜುಬಿಲಿ ಬ್ಲಾಕ್‌ಗೆ ಅಡಿಪಾಯ ಹಾಕಿದ್ದಾರೆ.

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಬರಲಿರುವ LIGO-ಇಂಡಿಯಾ, ವಿಶ್ವದ ಬೆರಳೆಣಿಕೆಯಷ್ಟು ಲೇಸರ್ ಇಂಟರ್‌ಫೆರೋಮೀಟರ್ ಗುರುತ್ವಾಕರ್ಷಣೆಯ ತರಂಗ ವೀಕ್ಷಣಾಲಯಗಳಲ್ಲಿ ಒಂದಾಗಿದೆ. ಬೃಹತ್ ಖಗೋಳ ಭೌತಿಕ ವಸ್ತುಗಳ ವಿಲೀನದ ಸಮಯದಲ್ಲಿ ಉಂಟಾಗುವ ಗುರುತ್ವಾಕರ್ಷಣೆಯ ಅಲೆಗಳನ್ನು, ಕಪ್ಪು ಕುಳಿಗಳು, ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಗ್ರಹಿಸುವ ಸಾಮರ್ಥ್ಯವಿರುವ 4 ಕಿಮೀ ಉದ್ದದ ಅತ್ಯಂತ ಸೂಕ್ಷ್ಮ ಇಂಟರ್‌ಫೆರೋಮೀಟರ್ ಆಗಿದೆ.

LIGO - ಭಾರತವು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತಹ ಎರಡು ವೀಕ್ಷಣಾಲಯಗಳೊಂದಿಗೆ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತದೆ. ಅಮೆರಿಕಾದ ವಾಷಿಂಗ್ಟನ್‌ನ ಹ್ಯಾನ್‌ಫೋರ್ಡ್‌ನಲ್ಲಿ ಒಂದು ಮತ್ತು ಇನ್ನೊಂದು ಲೂಯಿಸಿಯಾನದ ಲಿವಿಂಗ್‌ಸ್ಟನ್‌ನಲ್ಲಿ ಇರುವ ವೀಕ್ಷಣಾಲಯಗಳೊಂದಿಗೆ ಕೆಲಸ ನಿರ್ವಹಿಸುತ್ತದೆ.

ಇವುಗಳ ಜೊತೆಗೆ ವಿಶಾಖಪಟ್ಟಣಂನಲ್ಲಿರುವ ಅಪರೂಪದ ಶಾಶ್ವತ ಮ್ಯಾಗ್ನೆಟ್ ಪ್ಲಾಂಟ್ ಅನ್ನು ದೇಶಕ್ಕೆ ಸಮರ್ಪಿಸಿದ್ದಾರೆ. ಈ ಮೂಲಕ ಅಪರೂಪದ ಭೂಮಿಯ ಶಾಶ್ವತ ಆಯಸ್ಕಾಂತಗಳನ್ನು (Rare Earth Permanent Magnet Plant) ಉತ್ಪಾದಿಸುವ ರಾಷ್ಟ್ರಗಳ ಸಾಲಿಗೆ ಭಾರತ ಪ್ರವೇಶಿಸುತ್ತದೆ. ವಿಶಾಖಪಟ್ಟಣಂನಲ್ಲಿರುವ ಭಾಭಾ ಪರಮಾಣು ಸಂಶೋಧನಾ ಕೇಂದ್ರದ ಆವರಣದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಈ ಸೌಲಭ್ಯವನ್ನು ಸ್ಥಳೀಯ ತಂತ್ರಜ್ಞಾನದ ಆಧಾರದ ಮೇಲೆ ಸ್ಥಾಪಿಸಲಾಗಿದೆ ಮತ್ತು ಸ್ಥಳೀಯ ಸಂಪನ್ಮೂಲಗಳಿಂದ ಹೊರತೆಗೆಯಲಾದ ಸ್ಥಳೀಯ ಅಪರೂಪದ ಭೂಮಿಯ ವಸ್ತುಗಳನ್ನು ಬಳಸಲಾಗಿದೆ. ಇನ್ನು, ನವಿ ಮುಂಬೈನಲ್ಲಿರುವ ಟಾಟಾ ಮೆಮೋರಿಯಲ್ ಸೆಂಟರ್‌ನ ನ್ಯಾಷನಲ್ ಹ್ಯಾಡ್ರಾನ್ ಬೀಮ್ ಥೆರಪಿ ಫೆಸಿಲಿಟಿಗೂ ಪ್ರಧಾನಿ ಮೋದಿ ಅಡಿಪಾಯ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+