ಅಲ್ಲಿ ಬಾನಿಗೆ ಚಿತ್ತಾರ:ಇಲ್ಲಿ ಹೋರಿ ಅಬ್ಬರ, ಇದಪ್ಪಾ ಸಂಕ್ರಾಂತಿ ಸಡಗರ
ನವದೆಹಲಿ, ಜನವರಿ.15: ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಸೂರ್ಯ ತನ್ನ ಪಥವನ್ನು ಬದಲಿಸುವ ಕಾಲವನ್ನು ಕೃಷಿಕರು ಸುಗ್ಗಿ ಹಬ್ಬವಾಗಿ ಆಚರಣೆ ಮಾಡುತ್ತಾರೆ.
ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಇದೇ ಸಂಕ್ರಾಂತಿ ಹಬ್ಬವನ್ನು ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಸಂಕ್ರಾಂತಿ, ತಮಿಳುನಾಡಿನಲ್ಲಿ ಪೊಂಗಲ್, ಅಸ್ಸಾಂನಲ್ಲಿ ಬಿಹು, ಪಂಜಾಬ್ ನಲ್ಲಿ ಲೋಹ್ರಿ ಎಂಬ ಹೆಸರನಲ್ಲಿ ಆಚರಣೆ ಮಾಡಲಾಗುತ್ತದೆ.
ಮಕರ ಸಂಕ್ರಾಂತಿ ದಿನ ದಕ್ಷಿಣಾಯನ ಮುಗಿದು ಉತ್ತರಾಯಣ ಆರಂಭವಾಗುತ್ತದೆ. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ..ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ. ದೇಶಾದ್ಯಂತ ಈ ಸುಗ್ಗಿಯ ಹಬ್ಬವನ್ನು ವಿವಿಧ ಹೆಸರಿನಲ್ಲಿ ವಿವಿಧ ರೀತಿಯಲ್ಲಿ ಆಚರಿಸುತ್ತಾರೆ.

ಎಳ್ಳು-ಬೆಲ್ಲ ಹಂಚುತ್ತಾ ಸಂಭ್ರಮಿಸಿದ ಕರುನಾಡು
ಕರ್ನಾಟಕದಲ್ಲಿ ಈ ಸಂಕ್ರಾಂತಿ ಹಬ್ಬಕ್ಕೆ ವಿಶೇಷವಾಗಿ ಆಚರಿಸುತ್ತಾರೆ. ಬೆಳೆದ ಬೆಳೆಯು ಕಟಾವಿಗೆ ಬರುವ ಈ ಕಾಲವನ್ನು ಕೃಷಿಕರು ಸುಗ್ಗಿಯ ಕಾಲ ಎಂದು ಕರೆಯುತ್ತಾರೆ. ಪರಸ್ಪರ ಎಳ್ಳು-ಬೆಲ್ಲ ಹಂಚುತ್ತಾ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ.

ಕನ್ನಡದಲ್ಲಿ ಸಂಕ್ರಾಂತಿ ಶುಭ ಕೋರಿದ ಪ್ರಧಾಮಂತ್ರಿ ಮೋದಿ
ದೇಶದ ಹಲವು ರಾಜ್ಯಗಳಲ್ಲಿ ಸಂಕ್ರಾಂತಿ ಹಬ್ಬವನ್ನು ವಿವಿಧ ಹೆಸರಿನಲ್ಲಿ ಆಚರಣೆ ಮಾಡಲಾಗುತ್ತದೆ. ಎಲ್ಲ ರಾಜ್ಯದ ಪ್ರಜೆಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹಬ್ಬದ ಶುಭಾಶಯ ಕೋರಿದ್ದಾರೆ. ವಿಶೇಷವಾಗಿ ಕನ್ನಡಿಗರಿಗೆ ಕನ್ನಡದಲ್ಲೇ ಶುಭ ಕೋರಿ ಮೋದಿ ಟ್ವೀಟ್ ಮಾಡಿದ್ದಾರೆ.

ಬಾನಲ್ಲಿ ಬಣ್ಣದ ಚಿತ್ತಾರ ಬರೆದ ಗಾಳಿಪಟಗಳು
ಇನ್ನು, ರಾಜಸ್ಥಾನದ ರಾಜಧಾನಿ ಜೈಪುರ್ ನಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಸಂಕ್ರಾಂತಿಗೂ ಮುನ್ನ ದಿನ ಎಂದರೆ ಜನವರಿ.14ರಂದೇ ಬಾನಿನಲ್ಲಿ ಬಣ್ಣದ ಚಿತ್ತಾರ ಬರೆದರು. ನೀಲಿ ಆಕಾಶದಲ್ಲಿ ಬಣ್ಣ ಬಣ್ಣದ ಗಾಳಿಪಟುಗಳು ರಾರಾಜಿಸಿದವು.

ಪೊಂಗಲ್ ಹಬ್ಬದಲ್ಲಿ ಸಂಭ್ರಮಿಸಿದ ಜನರು
ತಮಿಳುನಾಡಿನಲ್ಲಿ ಥಾಯ್ ಪೊಂಗಲ್ ಎಂಬ ಹೆಸರಿನಲ್ಲಿ ನಾಲ್ಕು ದಿನ ಆಚರಿಸುತ್ತಾರೆ. ಮೊದಲನೇ ದಿನ ಭೋಗಿ ಪಂಡಿಗೈ, ಎರಡನೇ ದಿನ ಥಾಯ್ ಪೊಂಗಲ್, ಮೂರನೇ ದಿನವನ್ನು ಮಾಟ್ಟು ಪೊಂಗಲ್ ಮತ್ತು ಕೊನೆ ದಿನವನ್ನು ಕಾನುಂ ಪೊಂಗಲ್ ಎಂಬ ಹೆಸರಿನಿಂದ ಆಚರಿ ಸುತ್ತಾರೆ. ಕೊನೆ ದಿನ ಸೂರ್ಯೋದಯಕ್ಕೂ ಮುನ್ನವೇ ಪೊಂಗಲ್ ತಯಾರಿಸಿ ದೇವರಿಗೆ ಅರ್ಪಿಸಲಾಗುತ್ತದೆ.

ಜಲ್ಲಿಕಟ್ಟು ಆಚರಣೆಯಲ್ಲಿ ಹೋರಿಗಳ ಅಬ್ಬರ
ಪ್ರತಿವರ್ಷವು ಪೊಂಗಲ್ ಹಬ್ಬದ ಸಂಭ್ರಮವನ್ನು ಆಚರಿಸಲು ಮೂರು ದಿನಗಳ ಕಾಲ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜನವರಿ.15ರಂದು ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆ ನಡೆಯಲಿದ್ದು ಅದಕ್ಕಾಗಿ 750 ಹೋರಿಗಳು ಭಾಗವಹಿಸಲಿವೆ. ಜನವರಿ.16ರಂದು ಪಲಮೇಡುನಲ್ಲಿ ಜಲ್ಲಿಕಟ್ಟು ಸ್ಪರ್ಧೆಗಾಗಿ 650 ಹೋರಿಗಳು ಭಾಗಿಯಾಗಲಿವೆ. ಇನ್ನು, 17ರಂದು ಅಲಂಕನಲ್ಲೂರ ಗ್ರಾಮದಲ್ಲಿ ಜರುಗುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 700 ಹೋರಿಗಳು ಭಾಗವಹಿಸಲಿದೆ.

ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ ಭಕ್ತರು
ಉತ್ತರ ಪ್ರದೇಶದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ವಾರಣಾಸಿಯಲ್ಲಿ ಬೆಳ್ಳಂಬೆಳಗ್ಗೆ ಗಂಗಾ ನದಿ ತೀರದಲ್ಲಿ ನೆರೆದ ಸಾವಿರಾರು ಭಕ್ತಾದಿಗಳು ಗಂಗೆಯಲ್ಲಿ ಪುಣ್ಯಸ್ನಾನ ಮಾಡಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications