• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದ ಬ್ಯಾಂಕಿಂಗ್ ವ್ಯವಸ್ಥೆಗೆ ಐತಿಹಾಸಿಕ ಘೋಷಣೆ; ವಿವಿಧ ಬ್ಯಾಂಕ್ ಗಳ ವಿಲೀನ

|
   Live : Finance Minister Nirmala Sitharaman addresses the media (2)

   ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಮಹತ್ವವಾದ ಘೋಷಣೆಯೊಂದನ್ನು ಶುಕ್ರವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳ ವಿಲೀನವನ್ನು ಘೋಷಣೆ ಮಾಡಿದ್ದಾರೆ. ಸರಕಾರಿ ಸ್ವಾಮ್ಯದ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ.

   ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನಗೊಳ್ಳಲಿವೆ. ಇನ್ನು ಇತರ ಮೂರು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ವಿಲೀನದ ಯೋಜನೆಗಳನ್ನು ಸಹ ಘೋಷಣೆ ಮಾಡಲಾಗಿದೆ.

   ವಿಲೀನದ ಬಳಿಕ ಯಾವ ಬ್ಯಾಂಕಿನ ಮಾರುಕಟ್ಟೆ ಮೌಲ್ಯ ಎಷ್ಟಾಗಲಿದೆ?

   ಕೆನರಾ ಬ್ಯಾಂಕ್ ಹಾಗೂ ಸಿಂಡಿಕೇಟ್ ಬ್ಯಾಂಕ್, ಅದೇ ರೀತಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರಾ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್, ಇನ್ನು ಇಂಡಿಯನ್ ಬ್ಯಾಂಕ್ ಅನ್ನು ಅಲಹಾಬಾದ್ ಬ್ಯಾಂಕ್ ಜತೆಗೆ ವಿಲೀನ ಮಾಡುವ ಪ್ರಸ್ತಾವ ಇದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

   ಸಾರ್ವಜನಿಕ ವಲಯದ ಬ್ಯಾಂಕ್ ಗಳಿಗೆ ಬಲ ತುಂಬುವ ಕಾರಣಕ್ಕೆ ಈ ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಬ್ಯಾಂಕ್ ಗಳ ಮಂಡಳಿಯ ಸಮಿತಿ ಜನರಲ್ ಮ್ಯಾನೇಜರ್ ಗಳು ಮತ್ತು ಅದಕ್ಕಿಂತ ಮೇಲಿನ ಹಂತದ ಅಧಿಕಾರಿಗಳ ಮೌಲ್ಯಮಾಪನವನ್ನು ಆ ಸಮಿತಿಯಿಂದ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

   English summary
   Including Oriental Bank of Commerce and other nationalised bank merger bank announced by union finance minister Nirmala Sitaraman on Friday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X