ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಬ್‌ಮೆರಿನ್ ರಹಸ್ಯ ಬಿಚ್ಚಿಟ್ಟ ನೌಕಾ ಕಮಾಂಡರ್ ಸೆರೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 27: ದೇಶದ ಭವಿಷ್ಯದ ಜಲಾಂತರ್ಗಾಮಿ ಆಧುನೀಕರಣದ ಯೋಜನೆಗಳ ಕುರಿತ ಮಹತ್ವದ ಮಾಹಿತಿಗಳನ್ನು ಸೋರಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿ ನೌಕಾಪಡೆಯ ಕಮಾಂಡರ್‌ ರಾರ‍ಯಂಕ್‌ ಅಧಿಕಾರಿ ಸೇರಿದಂತೆ ಐವರು ಆರೋಪಿಗಳನ್ನು ಸಿಬಿಐ ಬಂಧಿಸಿದೆ.

ಕಳೆದ ತಿಂಗಳು ಈ ಬಗ್ಗೆ ತನಿಖೆ ಕೈಗೊಂಡ ಸಿಬಿಐ ಅಧಿಕಾರಿಗಳು ಈವರೆಗೆ ದೆಹಲಿ, ಮುಂಬೈ, ಹೈದರಾಬಾದ್‌ ಮತ್ತು ವಿಶಾಖಪಟ್ಟಣಂ ಸೇರಿದಂತೆ ಇನ್ನಿತರ 19 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಈ ಪ್ರಕರಣ ಸಂಬಂಧ ಮುಖ್ಯವಾದ ದಾಖಲೆಗಳು ಮತ್ತು ಡಿಜಿಟಲ್‌ ಸಾಕ್ಷ್ಯಾಧಾರಗಳನ್ನು ವಶಕ್ಕೆ ಪಡೆದಿದೆ.

ಅನುಮತಿಯಿಲ್ಲದೆ ಸಮರಾಭ್ಯಾಸ: ಭಾರತ-ಅಮೆರಿಕ ಬಿಕ್ಕಟ್ಟುಅನುಮತಿಯಿಲ್ಲದೆ ಸಮರಾಭ್ಯಾಸ: ಭಾರತ-ಅಮೆರಿಕ ಬಿಕ್ಕಟ್ಟು

ಹಣಕ್ಕಾಗಿ ಭಾರತೀಯ ನೌಕಾಪಡೆ ಕುರಿತಾದ ಸೂಕ್ಷ್ಮ ವಿಚಾರಗಳು ಪಟ್ಟಭದ್ರ ಹಿತಾಸಕ್ತಿಯ ವ್ಯಕ್ತಿಗಳಿಗೆ ಹಸ್ತಾಂತರವಾಗಿದೆಯೇ ಎಂಬ ಬಗ್ಗೆ ವಿಧಿ-ವಿಜ್ಞಾನಗಳ ಮುಖಾಂತರ ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೆ ಬಂಧಿತರ ಜತೆ ನಿರಂತರ ಸಂಪರ್ಕ ಹೊಂದಿರುವ ಹಲವು ಅಧಿಕಾರಿಗಳು ಮತ್ತು ನಿವೃತ್ತ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Navy Officer Among 5 Arrested By CBI For Leaking Confidential Info About Submarine Project

ಮುಂಬೈನಲ್ಲಿರುವ ಪಶ್ಚಿಮ ನೌಕಾ ಕಮಾಂಡ್‌ನಲ್ಲಿ ಕಮಾಂಡರ್‌ ಆಗಿರುವ ಬಂಧಿತ ಪ್ರಮುಖ ಆರೋಪಿಯು, ಕಿಲೋ ಕ್ಲಾಸ್‌ ಜಲಾಂತರ್ಗಾಮಿ ನೌಕೆಗಳ ಆಧುನಿಕರಣ ಕುರಿತಾದ ಮಹತ್ವದ ಮಾಹಿತಿಗಳನ್ನು ಹಣಕ್ಕಾಗಿ ಮಾರಿಕೊಳ್ಳುವ ಬಗ್ಗೆ ಇಬ್ಬರು ನಿವೃತ್ತ ಅಧಿಕಾರಿಗಳ ಬಳಿ ಚರ್ಚಿಸಿದ್ದಾನೆ.

ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ತ್ವರಿತ ಕಾರ್ಯಾಚರಣೆ ಕೈಗೊಂಡು ಈ ಕೃತ್ಯದಲ್ಲಿ ಭಾಗಿಯಾದ ಇಬ್ಬರು ನಿವೃತ್ತ ನೌಕಾ ಸಿಬ್ಬಂದಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

ಮತ್ತೊಂದೆಡೆ ಈ ಆರೋಪದ ಸಂಬಂಧ ನೌಕಾಪಡೆಯು ನೌಕಾ ಸೇನಾಧಿಪತಿ ನೇತೃತ್ವದಲ್ಲಿ ಉನ್ನತ ಹಂತದ ತನಿಖಾ ಸಮಿತಿಯನ್ನು ರಚನೆ ಮಾಡಿದ್ದು, ಮಾಹಿತಿಗಳು ಹೇಗೆ ಸೋರಿಕೆಯಾಗಿದೆ ಮತ್ತು ಆರೋಪಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸೂಚಿಸಲಾಗಿದೆ.

ಶೋಧ ಕಾರ್ಯಾಚರಣೆ ವೇಳೆ ದಾಖಲೆಪತ್ರಗಳು, ಡಿಜಿಟಲ್ ಸಾಕ್ಷ್ಯಗಳು ಸಿಬಿಐ ಅಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ನೌಕಾದಲ ತಿಳಿಸಿದೆ. ಅಲ್ಲದೆ ಆಂತರಿಕ ತನಿಖಾ ಸಮಿತಿಯನ್ನು ರಚನೆ ಮಾಡಲಾಗಿದ್ದು ರಕ್ಷಣಾ ಮಾಹಿತಿ ಸೋರಿಕೆಯಾದುದರ ಕುರಿತು ಪರಿಶೀಲನೆ ನಡೆಸಲಿದೆ.

ಇಬ್ಬರು ನಿವೃತ್ತ ನೌಕಾದಳ ಸಿಬ್ಬಂದಿ ಹಾಗೂ ಓರ್ವ ವ್ಯಕ್ತಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಸೋವಿಯತ್ ನೌಕಾಪಡೆಗಾಗಿ ಸೋವಿಯತ್ ಒಕ್ಕೂಟದಲ್ಲಿ ವಿನ್ಯಾಸಗೊಳಿಸಿದ ಹಾಗೂ ನಿರ್ಮಿಸಲಾದ ಕಿಲೋ ವರ್ಗದ ಜಲಾಂತರ್ಗಾಮಿ ನೌಕೆಗಳು ಪ್ರಪಂಚದ ಸಾಮಾನ್ಯವಾದ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳಲ್ಲಿ ಸೇರಿವೆ ಹಾಗೂ ಪ್ರಸ್ತುತ ಹಲವಾರು ದೇಶಗಳ ನೌಕಾಪಡೆಗಳಲ್ಲಿ ಸೇವೆಯಲ್ಲಿವೆ.

ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಬಂಧನದ ಸಾಧ್ಯತೆ ಇದೆ, ಮಾಹಿತಿ ಸೋರಿಕೆಯಲ್ಲಿ ವಿದೇಶಿ ಗುಪ್ತಚರ ಸಂಸ್ಥೆಗಳು ಭಾಗಿಯಾಗಿವೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ.

ಈ ವಿಷಯವನ್ನುವೈಸ್ ಅಡ್ಮಿರಲ್ ಹಾಗೂ ರಿಯಲ್ ಅಡ್ಮಿರಲ್ ತನಿಖೆ ನಡೆಸುತ್ತಿದ್ದಾರೆ ಎಂದು ನೌಕಾಪಡೆಯ ಮೂಲಗಳು ಖಚಿತಪಡಿಸಿವೆ.

English summary
The CBI has arrested five persons including a commander-rank Navy officer for allegedly leaking confidential information related to an ongoing submarines project in return for illegal gratification, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X