ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುದ್ಧ ನೌಕೆಗೆ ಇಬ್ಬರು ಮಹಿಳಾ ಪೈಲಟ್‌ಗಳ ನೇಮಕ: ಇತಿಹಾಸದಲ್ಲೇ ಮೊದಲು

|
Google Oneindia Kannada News

ಕೊಚ್ಚಿ, ಸೆಪ್ಟೆಂಬರ್ 21: ಭಾರತೀಯ ಯುದ್ಧನೌಕೆಗೆ ಇಬ್ಬರು ಮಹಿಳಾ ಪೈಲಟ್‌ಗಳನ್ನು ನೇಮಕ ಮಾಡಲಾಗಿದೆ. ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹದ್ದೊಂದು ಅವಕಾಶ ಕಲ್ಪಿಸಲಾಗಿದೆ.

ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಹಾಗೂ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಅವರು ಸೋಮವಾರ ಕೊಚ್ಚಿಯ ನೌಕಾ ನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಐಎನ್‌ಎಸ್ ಗರುಡ ಪಡೆಯನ್ನು ಅಧಿಕೃತವಾಗಿ ಸೇರ್ಪಡೆಗೊಂಡರು. ಈ ಮೂಲಕ ಲಿಂಗ ಸಮಾನತೆಗೆ ದಾರಿ ಮಾಡಿಕೊಡಲಾಗಿದೆ.

ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

ನಿನ್ನೆಯಷ್ಟೇ ಭಾರತೀಯ ವಾಯುಸೇನೆ ತನ್ನ ರಫೇಲ್ ಯುದ್ಧ ವಿಮಾನದಲ್ಲಿ ಕಾರ್ಯ ನಿರ್ವಹಿಸಲು ಮಹಿಳಾ ಫೈಟರ್ ಪೈಲಟ್‌ವೋರ್ವರನ್ನು ನೇಮಕ ಮಾಡಿತ್ತು, ಇದರ ಬೆನ್ನಲ್ಲೇ ನೌಕಾಪಡೆ ಸಹ ತನ್ನ ಯುದ್ಧ ನೌಕೆಯಲ್ಲಿ ಕರ್ತವ್ಯ ನಿರ್ವಹಿಸಲು ಇಬ್ಬರು ಮಹಿಳಾ ಅಧಿಕಾರಿಗಳನ್ನು ನೇಮಿಸಿದೆ.

Navys First Women Combat Aviators To Be Deployed On Warships

ಎಂಎಚ್ -60 ಆರ್ ಹೆಲಿಕಾಪ್ಟರ್‌ಗಳನ್ನು ಶತ್ರು ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ. ಈ ಹೆಲಿಕಾಪ್ಟರ್‌ಗಳಲ್ಲಿ ಈ ಇಬ್ಬರೂ ಮಹಿಳಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.

ನೌಕಾಪಡೆಯ ಮಲ್ಟಿ-ರೋಲ್ ಹೆಲಿಕಾಪ್ಟರ್‌ಗಳಲ್ಲಿ ಸೋನಾರ್ ಕನ್ಸೋಲ್‌ಗಳು ಮತ್ತು ಇಂಟೆಲಿಜೆನ್ಸ್, ಕಣ್ಗಾವಲು ಮತ್ತು ಮರುಪರಿಶೀಲನೆ (ಐಎಸ್‌ಆರ್) ತರಬೇತಿ ಪಡೆಯುತ್ತಿರುವ ಈ ಇಬ್ಬರೂ ಮಹಿಳಾ ಅಧಿಕಾರಿಗಳನ್ನು ಐಎನ್‌ಎಸ್ ಗರುಡ ಹಡಗಿಗೆ ಸ್ವಾಗತ ನೀಡಲಾಯಿತು.

English summary
In a move that will redefine gender equality in the Indian Navy, Sub Lieutenant Kumudini Tyagi and Sub Lieutenant Riti Singh will be the first women combatants who will operate as specialists on board Navy helicopters which operate from the deck of warships.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X