ಅ. 12 ರಂದು ಹರಿಯಾಣದ ಸಿಎಂ ಆಗಿ ಸೈನಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ಚಂಡಿಗಢ, ಅಕ್ಟೋಬರ್ 09: ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಖಚಿತಪಟ್ಟಿದ್ದು, ಅಕ್ಟೋಬರ್ 12 ರಂದು ನಯಾಬ್ ಸಿಂಗ್ ಸೈನಿ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬಧೋಲಿ ಮತ್ತು ನಾಯಬ್ ಸೈನಿ ಇಂದು ದೆಹಲಿಗೆ ತೆರಳಿದ್ದು, ದೆಹಲಿಯ ವರಿಷ್ಠರೊಂದಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕುರಿತು ಸುದೀರ್ಘ ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಮುಖ್ಯಮಂತ್ರಿ ನಯಾಬ್ ಸೈನಿ ಜೊತೆಗೆ ಒಬ್ಬ ಅಥವಾ ಇಬ್ಬರು ಉಪಮುಖ್ಯಮಂತ್ರಿಗಳೂ ಇರಬಹುದು ಎಂದು ಹೇಳಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಸರ್ಕಾರ ರಚನೆಗೂ ಮುನ್ನ ಬಿಜೆಪಿಯ ಕೇಂದ್ರ ನಾಯಕತ್ವವು ಶಾಸಕರೊಂದಿಗೆ ಸಭೆ ನಡೆಸಲು ಹರಿಯಾಣಕ್ಕೆ ವೀಕ್ಷಕರನ್ನು ಕಳುಹಿಸುತ್ತದೆ, ಇದರಿಂದಾಗಿ ಪಕ್ಷವು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ಸರಿಯಾದ ಅಭ್ಯರ್ಥಿಯನ್ನು ಅಧಿಕೃತವಾಗಿ ಆಯ್ಕೆ ಮಾಡುತ್ತದೆ ಎಂದು ತಿಳಿದು ಬಂದಿದೆ.
ಲಾಡ್ವಾ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಸಮೀಪದ ಕಾಂಗ್ರೆಸ್ ಪ್ರತಿಸ್ಪರ್ಧಿ ಮೇವಾ ಸಿಂಗ್ ವಿರುದ್ಧ 16,054 ಮತಗಳ ಅಂತರದಿಂದ ಗೆದ್ದಿರುವ ನಯಾಬ್ ಸಿಂಗ್ ಸೈನಿ ಅವರು ಗೆಲುವು ಸಾಧಿಸಿದ್ದಾರೆ. ಹರ್ಯಾಣದಲ್ಲಿ ಗೆಲುವಿನ ನಂತರ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಹರ್ಯಾಣದಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿಗೆ ಅಧಿಕಾರ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ ಎಂದು ಶುಭ ಹಾರೈಸಿದ್ದಾರೆ.
2019ರಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ಇದು ಮೊದಲನೆಯ ಚುನಾವಣೆಯಾಗಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯ ರದ್ದತಿಯ ಬಳಿಕ ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಂಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಎರಡನೇ ಹಂತದ ಚುನಾವಣೆ ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆದರೆ, ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ಜನರು ಮತ ಚಲಾಯಿಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಂದು ಮೊದಲ ಹಂತದಲ್ಲಿ 61.38 ಶೇಕಡಾ ಮತದಾನವಾಗಿದೆ, ನಂತರ ಸೆಪ್ಟೆಂಬರ್ 25 ರಂದು ಎರಡನೇ ಹಂತದಲ್ಲಿ 57.31 ಶೇಕಡಾ ಮತ್ತು ಅಕ್ಟೋಬರ್ 1ರಂದು ಅಂತಿಮ ಹಂತದಲ್ಲಿ 65.48ರಷ್ಟು ಮತದಾನವಾಗಿದೆ.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಈ ಬಾರೀ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ ನಾಲ್ಕು ಚುನಾವಣಾ ಸಭೆಯನ್ನು ನಡೆಸಿದ್ದರು. ಮೋದಿ ಹೆಸರನ್ನು ಹೇಳದೇ, ಸ್ಥಳೀಯ ನಾಯಕರ ಪ್ರಭಾವದಿಂದಲೇ ಚುನಾವಣೆ ಗೆಲ್ಲುವಂತಾಗಬೇಕು ಎನ್ನುವ ಇವರ ಮುಂದಾಲೋಚನೆ ವರ್ಕೌಟ್ ಆಗಿದೆ ಎಂದು ವಿಶ್ಲೇಷಿಸಲಾಗಿದೆ. ಜೊತೆಗೆ, ಜ್ಯಾಟ್ ಸಮುದಾಯದ ಹೊರತಾದವರ ವಿಶ್ವಾಸ ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.












Click it and Unblock the Notifications