ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿಗೆ ಚಾಲನೆ ನೀಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ನವದೆಹಲಿ, ಅಕ್ಟೋಬರ್ 20: ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು(NCF) 2022 ಅನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಾರಂಭಿಸಿದ್ದಾರೆ. ಪ್ರಾಥಮಿಕ ಹಂತಕ್ಕಾಗಿ ಎನ್‌ಸಿಎಫ್ 2022 ಅನ್ನು ಶಿಕ್ಷಣ ಸಚಿವರು ಪ್ರಾರಂಭಿಸಿದ್ದು, ಇದರ ಜೊತೆಗೆ ಅಕ್ಟೋಬರ್ 20ರ ಗುರುವಾರ ಕೇಂದ್ರೀಯ ವಿದ್ಯಾಲಯದಲ್ಲಿ ಬಾಲವಾಟಿಕಾ ಅನ್ನು ಶುರು ಮಾಡಲಾಗಿದೆ.
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2022 ಅನ್ನು ರಾಷ್ಟ್ರೀಯ ಶಿಕ್ಷಣ ನೀತಿ(NEP) 2020ರ ಸಲಹೆಗಳ ಆಧಾರದ ಮೇಲೆ ರೂಪಿಸಲಾಗಿದೆ. ಇದರ ಪ್ರಕಾರ, ಪಠ್ಯಕ್ರಮವು ಶಾಲಾ ಶಿಕ್ಷಣ, ಬಾಲ್ಯ ಮತ್ತು ಶಿಕ್ಷಣ, ಶಿಕ್ಷಕ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಎಂಬ 4 ಕ್ಷೇತ್ರಗಳನ್ನು ಒಳಗೊಂಡಿರುತ್ತದೆ.
ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಪೋರ್ಟ್‌ಫೋಲಿಯೊವನ್ನು ಹೊಂದಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಾಥಮಿಕ ಹಂತಕ್ಕಾಗಿ NCF 2022 ಅನ್ನು ಪ್ರಾರಂಭಿಸಿದ್ದಾರೆ. ಎನ್‌ಸಿಎಫ್ 2022 ರ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ರಾಜ್ಯ ಸಚಿವರು, ಅನ್ನಪೂರ್ಣ ದೇವಿ, ಸುಭಾಸ್ ಸರ್ಕಾರ್ ಮತ್ತು ಡಾ ರಾಜ್‌ಕುಮಾರ್ ರಂಜನ್ ಸಿಂಗ್ ಸಹ ಉಪಸ್ಥಿತರಿದ್ದರು.

ಬಾಲವಾಟಿಕಾ ಉದ್ಘಾಟಿಸಿದ ಸಚಿವ ಧರ್ಮೇಂದ್ರ ಪ್ರಧಾನ್:
ಎನ್‌ಸಿಎಫ್ 2022 ಅನ್ನು ಪ್ರಾರಂಭಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಬಾಲವಾಟಿಕಾ ಉದ್ಘಾಟನೆಗಳನ್ನೂ ಉದ್ಘಾಟಿಸಿದರು. ಕೇಂದ್ರೀಯ ವಿದ್ಯಾಲಯಗಳಲ್ಲಿನ ಬಾಲವಾಡಿ, ಅಂಗನವಾಡಿ ಕೇಂದ್ರಗಳ ಕಾರ್ಯದಂತೆಯೇ ಇರುತ್ತವೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದು ಇದರ ಉದ್ದೇಶವಾಗಿದೆ.
ಎನ್‌ಸಿಎಫ್ 2022 ಅಡಿ ಪ್ರಾಥಮಿಕ ಹಂತದಲ್ಲಿ 0 ರಿಂದ 8 ವರ್ಷ ವಯಸ್ಸಿನ ಮಕ್ಕಳ ಶಿಕ್ಷಣವನ್ನು ನೀಡಲಾಗುತ್ತದೆ. ಈ ಎನ್‌ಸಿಎಫ್ 2022ರ ಮುಖ್ಯ ಗುರಿಯೇ ಬಾಲ್ಯದಲ್ಲಿ ಇರುವ ಮಕ್ಕಳಿಗೆ ಆರೈಕೆ ಮತ್ತು ಶಿಕ್ಷಣವನ್ನು ನೀಡುವುದಾಗಿಗಿದೆ.
ನಾಲ್ಕು ಪಠ್ಯಕ್ರಮವಾಗಿ ವಿಂಗಡಣೆ:
ಎನ್‌ಸಿಎಫ್ 2022 ಅನ್ನು 4 ಪಠ್ಯಕ್ರಮದ ಚೌಕಟ್ಟುಗಳಾಗಿ ವಿಂಗಡಿಸಲಾಗಿದೆ. ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (NCFSE), ಪ್ರಾರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (NCFECCE), ಶಿಕ್ಷಕರ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (NCFTE) ಮತ್ತು ವಯಸ್ಕರ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು NCFAE) ಎಂದು ವಿಂಗಡಣೆ ಮಾಡಲಾಗಿದೆ.
ಎನ್‌ಸಿಎಫ್ 2022 ಗಾಗಿ ರಾಷ್ಟ್ರೀಯ ಮಟ್ಟದಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(NCERT) ಸಮೀಕ್ಷೆಯನ್ನು ನಡೆಸಿತು. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಎನ್‌ಸಿಎಫ್‌ಗೆ ಸಂಬಂಧಿಸಿದ ಸಮೀಕ್ಷೆಗಳನ್ನು ಕೈಗೊಳ್ಳಲು ಕೇಳಲಾಯಿತು. ಎನ್‌ಸಿಎಫ್ 2022 ಮತ್ತು ಅದರ 4 ಭಾಗಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ರೂಪಿಸಲಾಗಿದೆ.
-
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
ಹನುಮ ಜಯಂತಿ ಮುನ್ನವೇ ಅಯೋಧ್ಯೆಗೆ ಗೌತಮ್ ಅದಾನಿ ಭೇಟಿ: ಪ್ರಾಚೀನ ಗುರುಕುಲಕ್ಕೆ AI ಲ್ಯಾಬ್ ಘೋಷಣೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications