ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿ

ಮುಂಬೈ, ಮೇ 5: ಎನ್‌ಸಿಪಿ ಪಕ್ಷದ ಮುಖ್ಯಸ್ಥ ಸ್ಥಾನಕ್ಕೆ ಶರದ್ ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸುವ ನಿರ್ಣಯವನ್ನು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವು ಶುಕ್ರವಾರ ಅಂಗೀಕರಿಸಿದ್ದು, ಪವಾರ್‌ ಸ್ಥಾಪಿಸಿದ ಪಕ್ಷವನ್ನು ಮುನ್ನಡೆಸುವಂತೆ ವಿನಂತಿಸಿದೆ.

ಮೂಲಗಳ ಪ್ರಕಾರ, ಶರದ್ ಪವಾರ್ ಅವರು ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ಅನುಸರಿಸಿ, ಎನ್‌ಸಿಪಿಯ ಹೊಸ ರಾಷ್ಟ್ರೀಯ ಅಧ್ಯಕ್ಷರ ಬಗ್ಗೆ ನಿರ್ಧರಿಸಲು ಇಂದು ಬೆಳಿಗ್ಗೆ ಪಕ್ಷದ ಕೋರ್ ಕಮಿಟಿ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

NCP Committee Rejects Sharad Pawars Resignation

ಸಭೆಯಲ್ಲಿ ಪಾಲ್ಗೊಳ್ಳಲು ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ ಮತ್ತು ಸುಪ್ರಿಯಾ ಸುಳೆ ಮುಂಬೈನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿದ್ದರು. ಪಕ್ಷದ ಹಲವು ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದು, ಮಹಾರಾಷ್ಟ್ರ ರಾಜಕೀಯ ಮತ್ತು ಎನ್‌ಸಿಪಿಯ ಭವಿಷ್ಯವನ್ನು ಇದು ನಿರ್ಧರಿಸಲಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಸಭೆ ನಡೆಸಿದ 18 ಸದಸ್ಯರ ಸಮಿತಿಯಲ್ಲಿ ಪ್ರಫುಲ್ ಪಟೇಲ್, ಸುನಿಲ್ ತಟ್ಕರೆ, ಕೆಕೆ ಶರ್ಮಾ, ಅಜಿತ್ ಪವಾರ್, ಜಯಂತ್ ಪಾಟೀಲ್, ಸುಪ್ರಿಯಾ ಸುಳೆ, ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ್, ಅನಿಲ್ ದೇಶಮುಖ್, ರಾಜೇಶ್ ಟೋಪೆ, ಜಿತೇಂದ್ರ ಅವ್ಹಾದ್, ಹಸನ್ ಮುಶ್ರಿಫ್, ಧನಂಜಯ್, ಜೈದೇವ್ ಗಾಯಕ್ವಾಡ್, ನರಹರಿ ಜಿರ್ವಾಲ್, ರಾಷ್ಟ್ರೀಯವಾದಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫೌಜಿಯಾ ಖಾನ್, ರಾಷ್ಟ್ರೀಯವಾದಿ ಯುವ ಕಾಂಗ್ರೆಸ್ ಅಧ್ಯಕ್ಷ ಧೀರಜ್ ಶರ್ಮಾ ಇದ್ದರು.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶರದ್ ಪವಾರ್ ಮಂಗಳವಾರ ಘೋಷಿಸಿದ್ದರು. ಆಗ ಶರದ್ ಪವಾರ್ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಎನ್‌ಸಿಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಮುಂದಿನ ಪಕ್ಷದ ಮುಖ್ಯಸ್ಥರು ಶರದ್ ಪವಾರ್ ಅವರ ನೇತೃತ್ವದಲ್ಲಿ ಕೆಲಸ ಮಾಡುತ್ತಾರೆ ಎಂದು ಅವರ ಸೋದರಳಿಯ ಅಜಿತ್ ಪವಾರ್ ಶರದ್‌ ಪವಾರ್‌ ನಿರ್ಧಾರವನ್ನು ಬೆಂಬಲಿಸಿದರು.

ಈ ಹೇಳಿಕೆಗೆ ತಕ್ಷಣವೇ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಂದ ಭಾವನಾತ್ಮಕ ಪ್ರತಿಭಟನೆ ವ್ಯಕ್ತಪಡಿಸಿದರು. ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಹಿರಿಯ ಸಂಸದರನ್ನು ಒತ್ತಾಯಿಸಿದರು. ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಅವರು ಶರದ್ ಪವಾರ್ ಈ ನಿರ್ಧಾರ ಕೈಗೊಂಡಿದ್ದರೂ, ಮಹಾರಾಷ್ಟ್ರ ಮತ್ತು ಇತರ ಪ್ರದೇಶಗಳ ಜನರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

"ನಾನು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸಂದೇಶವನ್ನು ರವಾನಿಸಿದ್ದೇನೆ. ಮಹಾರಾಷ್ಟ್ರದ ಎಲ್ಲಾ ವಿಭಾಗಗಳು ಪವಾರ್ ಸಾಹೇಬ್ ಅವರ ನಿರ್ಧಾರವನ್ನು ಕನಿಷ್ಠ ಮುಂದಿನ ಚುನಾವಣೆಗಾದರೂ ಹಿಂತೆಗೆದುಕೊಳ್ಳುವಂತೆ ವಿನಂತಿಸಿದೆ ಎಂದು ಪಾಟೀಲ್ ಹೇಳಿದರು. ಶರದ್ ಪವಾರ್ ಪಕ್ಷದ ಮುಖ್ಯಸ್ಥರಾಗಿರುವುದರಿಂದ ಹಲವಾರು ಜನರು ಎನ್‌ಸಿಪಿಗೆ ಸೇರಿದ್ದಾರೆ. ನಾವು ಇದನ್ನೆಲ್ಲ ಶರದ್ ಪವಾರ್ ಅವರಿಗೆ ವಿವರಿಸಿದ್ದೇವೆ. ಆದ್ದರಿಂದ ಎಲ್ಲರೂ ಪವಾರ್ ಸಾಹೇಬ್ ಅವರ ನಿರ್ಧಾರವನ್ನು ಹಿಂಪಡೆಯಲು ವಿನಂತಿಸುತ್ತಿದ್ದಾರೆ ಎಂದು ಎನ್‌ಸಿಪಿ ರಾಜ್ಯ ಅಧ್ಯಕ್ಷರು ಹೇಳಿದ್ದಾರೆ.

ಪವಾರ್ ಅವರು ಎನ್‌ಸಿಪಿ ಮುಖ್ಯಸ್ಥ ಸ್ಥಾನವನ್ನು ತ್ಯಜಿಸುವುದಾಗಿ ಘೋಷಿಸಿದ ನಂತರ, ರಾಜ್ಯದ ಕೆಲವು ಪದಾಧಿಕಾರಿಗಳು ತಮ್ಮ ಹುದ್ದೆಯನ್ನು ತ್ಯಜಿಸುವುದಾಗಿ ಹೇಳಿದರು ಮತ್ತು ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಶರದ್‌ ಪವಾರ್‌ ಅವರನ್ನು ಕೇಳಿಕೊಂಡರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+