ಮಹಾರಾಷ್ಟ್ರ: EVM ಲೋಪದ ವಿರುದ್ಧ ಶರದ್ ಪವಾರ್ ಮಹಾ ಅಭಿಯಾನ, ಶೀಘ್ರವೇ ಕೋರ್ಟ್ ಮೊರೆ
ಮುಂಬೈ, ನವೆಂಬರ್ 26: ಮಹಾರಾಷ್ಟ್ರ ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನಾ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ನಿರೀಕ್ಷಿತ ಬಹುಮತ ಲಭಿಸಿದೆ. ಇದರ ವಿರುದ್ಧ ಮಹಾ ವಿಕಾಸ್ ಅಘಾಡಿಗೆ ಸೋಲಾಗಿದೆ. ಈ ಸೋಲಿನ ಬಳಿಕ ಪರಾಭವ ಅಭ್ಯರ್ಥಿಗಳು ಇವಿಎಂ ಮತಯಂತ್ರಗಳು ಸರಿ ಇಲ್ಲ. ಇವಿಎಂ ಮೇಲೆ ವಿಪಕ್ಷಗಳೂ ಆರೋಪ ಮಾಡಿವೆ. ಹೀಗಾಗಿ ಎನ್‌ಸಿಪಿ ನಾಯಕ ಶರದ್ ಪವಾರ್ ನೇತೃತ್ವದಲ್ಲಿ ಮಹಾ ಅಭಿಯಾಣ (ಚಳವಳಿ) ನಡೆಸಲು ಪ್ಲಾನ್ ನಡೆದಿದೆ ಎಂದು ತಿಳಿದು ಬಂದಿದೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ-ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸದರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಕಡಿಮೆ ಮತಗಳನ್ನು ಪಡೆಯುವ ಮೂಲಕ ಕಳಪೆ ಪ್ರದರ್ಶನ ನೀಡಿದ್ದಾರೆ. ಅದರ ಬೆನ್ನಲ್ಲೆ ಇವಿಎಂ ಮಷಿನ್ ಗಳ ಮೇಲೆ ಪರಾಭವ ಅಭ್ಯರ್ಥಿಗಳು ಆರೋಪಿಸಿದ್ದಾರೆ. ಹೆಚ್ಚು ಮತಗಳನ್ನು ಪಡೆದು ಗೆದ್ದಿರುವ ಶಾಸಕ ಜಿತೇಂದ್ರ ಅವ್ಹಾದ್ ಅವರು ಮತಗಳ ವ್ಯತ್ಯಾಸ ಕುರಿತು ಪೋಸ್ಟ್ ಹಂಚಿಕೊಂಡಿದ್ದರು.

ಇದೆಲ್ಲ ಬೆಳವಣಿಗೆ ಮಧ್ಯೆ ಶರ್ ಪವಾರ್ ಅವರು ಮಂಗಳವಾರ ಪಕ್ಷದ ನೂತನವಾಗಿ ಚುನಾವಣೆಯಲ್ಲಿ ಗೆದ್ದ ಶಾಸಕರ ಜೊತೆಗೆ ಹಾಗೂ ಸೋತ ಅಭ್ಯರ್ಥಿಗಳ ಜೊತೆಗೆ ಪ್ರಮುಖ ಸಭೆ ನಡೆಸಿದರು. ಮುಂಬೈನ ಯಶವಂತರಾವ್ ಚವಾಣ್ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಸೋತ ಅಭ್ಯರ್ಥಿಗಳು ಇವಿಎಂ ಯಂತ್ರಗಳ ಸರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ಆಡಳಿತ ಪಕ್ಷದ ಕೈವಾಡದ ಬಗ್ಗೆ ಶಂಕೆ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾದ ಇವಿಎಂ ಸರಿಯಾಗಿಲ್ಲ. ಅವವುಗಳ ಸಮರ್ಪಕ ಕಾರ್ಯಗಳಿಂದಾಗಿ ಎನ್‌ಸಿಪಿ ಪಕ್ಷದ ಅಭ್ಯರ್ಥಿಗಳು ಸೋಲುವಂತಾಗಿದೆ. ಇವಿಎಂಗಳ ಬಗ್ಗೆ ವಿವಿಧ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾನೂನು ಹೋರಾಟ ನಡೆಸುವ ಬಗ್ಗೆ ಶರದ್ ಪವಾರ್ ಅವರು ಸಭೆಗೆ ತಿಳಿಸಿದರು ಎನ್ನಲಾಗಿದೆ.
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳಿಗೆ ಸಂಬಂಧಿಸಿದ ದೂರುಗಳ ಸಮೇತವಾಗಿ ತಾವು ನ್ಯಾಯಾಲಯ ಮೆಟ್ಟಿಲೇರಲು ಸಜ್ಜಾಗಿರುವುದಾಗಿ ಎನ್‌ಸಿಪಿ-ಎಸ್‌ಪಿ ನಾಯಕರು ಒಕ್ಕೋರಲಿನಿಂದ ತಿಳೀಸಿದರು. ಈ ಕುರಿತು ಸೂಕ್ತ ವಕೀಲರ ತಂಡ ನೇಮಕ ಮಾಡಲಾಗುವುದು ಎಂದು ಸಭೆಯಲ್ಲಿ ಶರದ್ ಪವಾರ್ ತಿಳಿಸಿದರು.
ಸಭೆಯ ನಂತರ ಶಾಸಕ ಜಿತೇಂದ್ರ ಅವ್ಹಾದ್ ಅವರು ಮಾತನಾಡಿ, ಇವಿಎಂ ವಿಚಾರವಾಗಿ ಪಕ್ಷವು ಸಾರ್ವಜನಿಕ ಆಂದೋಲನ ಪ್ರಾರಂಭಿಸಲು ಚಿಂತನೆ ನಡೆಸಿದೆ. ಈ ಆಂದೋಲನದ ನೇತೃತ್ವ ವಹಿಸಲು ಶರದ್ ಪವಾರ್ ಅವರನ್ನು ವಿನಂತಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಎರಡು ಬಣಗಳಲ್ಲಿ ಮಹಾಯುತಿಗೆ ಅತ್ಯಧಿಕ ಸೀಟು
ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಶಿವಸೇನೆ (ಯುಬಿಟಿ), ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ, ಬಣ, ಉದ್ಧವ್ ಠಾಕ್ರೆ ಎಲ್ಲರೂ ಕೂಡಿಕೊಂಡು ಮಹಾವಿಕಾಸ್ ಅಘಾಡಿ ಮೈತ್ರಿಕೂಟ ರಚಿಸಿಕೊಂಡಿದ್ದರು.
ಇತ್ತ ಬಿಜೆಪಿ ಹಾಗೂ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ- ಅಜಿತ್ ಪವಾರ್ ಬಣ-), ಶಿವಸೇನಾ (ಏಕ್‌ನಾಥ್ ಶಿಂಧೆ ಬಣ) ನೇತೃತ್ವದಲ್ಲಿ ಮಹಾಯುತಿ ರಚಿಸಲಾಗಿತ್ತು. ಚುನಾವಣೆಯಲ್ಲಿ ಒಟ್ಟು 288 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು 235 ಸೀಟು ಪಡೆದರೆ, ಮಹಾವಿಕಾಸ್ ಅಘಾಡಿ (ಇಂಡಿಯಾ) ಕೂಟವು ಕೇವಲ 49 ಸೀಟು ಪಡೆದುಕೊಂಡು ಹೀನಾಯ ಸೋಲುಂಡಿತು. ಹೀಗಾಗಿಯೇ ಪರಾಜಿತ ಅಭ್ಯರ್ಥಿಗಳು ಇವಿಎಂ ಮೇಲೆ ದೂರುತ್ತಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications