ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ವಿಟರಿಗರ ಕೆಂಗಣ್ಣಿಗೆ ಗುರಿಯಾದ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ

|
Google Oneindia Kannada News

ನವದೆಹಲಿ, ಅಕ್ಟೋಬರ್ 21: ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಮುಖ್ಯಸ್ಥೆ ರೇಖಾ ಶರ್ಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರು ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿಹಾಕಿದ್ದಾರೆ.

ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವುದು ಮತ್ತು ಕೀಳುಮಟ್ಟದ ಸೆಕ್ಸಿಸ್ಟ್ ಜೋಕ್‌ಗಳನ್ನು ಹಂಚಿಕೊಂಡಿರುವುದು ಟ್ವಿಟ್ಟಗರ ಕೆಂಗಣ್ಣಿಗೆ ಗುರಿಯಾಗಿತ್ತು. ಅವರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಹಿಳಾ ಅಭ್ಯರ್ಥಿ ಕುರಿತಾದ ಕಮಲ್ ನಾಥ್ ಹೇಳಿಕೆಗೆ ರಾಹುಲ್ ಗಾಂಧಿ ಖಂಡನೆಮಹಿಳಾ ಅಭ್ಯರ್ಥಿ ಕುರಿತಾದ ಕಮಲ್ ನಾಥ್ ಹೇಳಿಕೆಗೆ ರಾಹುಲ್ ಗಾಂಧಿ ಖಂಡನೆ

2012ರಿಂದ 2014ರವರೆಗೆ ಅವರು ಮಾಡಿದ್ದ ಟ್ವೀಟ್‌ಗಳು ವೈರಲ್ ಆಗಿವೆ. ಇದರಲ್ಲಿ ಅವರು ಮಹಿಳೆಯರನ್ನು ಲೇವಡಿ ಮಾಡುವ, ಪ್ರಧಾನಿ ನರೇಂದ್ರ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ರಾಜಕಾರಣಿಗಳನ್ನು ಅಣಕಿಸುವ ಟ್ವೀಟ್‌ಗಳನ್ನು ಮಾಡಿದ್ದರು.

NCW Chief Rekha Sharma Under Fire Over Old Tweets

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಮುಂಬೈನಲ್ಲಿ ಮಂಗಳವಾರ ಭೇಟಿ ಮಾಡಿದ್ದ ರೇಖಾ ಶರ್ಮಾ, 'ಲವ್ ಜಿಹಾದ್' ಹೆಚ್ಚಳವಾಗಿರುವ ಬಗ್ಗೆ ಹಾಗೂ ರಾಜ್ಯದ ಇತರೆ ಸಮಸ್ಯೆಗಳ ಕುರಿತು ಚರ್ಚಿಸಿದ್ದರು. ಒಪ್ಪಿತ ಅಂತರ್ ಧರ್ಮೀಯ ಮದುವೆಗೂ ಲವ್ ಜಿಹಾದ್‌ಗೂ ತುಂಬಾ ವ್ಯತ್ಯಾಸವಿದೆ ಎಂದು ರೇಖಾ ಶರ್ಮಾ ಹೇಳಿಕೆ ನೀಡಿದ್ದರು. ಲವ್ ಜಿಹಾದ್ ಕುರಿತಾದ ಹೇಳಿಕೆಗೆ ಅವರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ಅವರ ಹಳೆಯ ಟ್ವೀಟ್‌ಗಳು ಮುನ್ನೆಲೆಗೆ ಬಂದಿವೆ.

NCW Chief Rekha Sharma Under Fire Over Old Tweets

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿರುವ ರೇಖಾ ಶರ್ಮಾ ಈ ಹಿಂದೆ ಸೋನಿಯಾ ಗಾಂಧಿ ಸೇರಿದಂತೆ ಅನೇಕ ಮಹಿಳೆಯರ ವಿರುದ್ಧ ತುಚ್ಛವಾಗಿ ಮಾತನಾಡಿರುವುದು ಅನೇಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ ಎಂದು ರೇಖಾ ಶರ್ಮಾ ಸಮಜಾಯಿಷಿ ನೀಡಿದ್ದಾರೆ.

English summary
NCW chief Rekha Sharma is under fire over her old tweets goes viral after she met Maharashtra governor BS Koshyari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X