ಎನ್‌ಡಿಎ ವಶಕ್ಕೆ ಪುದುಚೇರಿ; ಗೆದ್ದ ಪ್ರಮುಖ ಅಭ್ಯರ್ಥಿಗಳು
ನವದೆಹಲಿ, ಮೇ 03; ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 30 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯನ್ನು ಮಾಡಲಿದೆ.
ಪುದುಚೇರಿಯಲ್ಲಿ 2016ರ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ 17 ಸ್ಥಾನಗಳಲ್ಲಿ ಗೆದ್ದಿತ್ತು. ವಿ. ನಾರಾಯಣಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಚುನಾವಣೆ ಘೋಷಣೆಗೂ ಕೆಲವು ದಿನಗಳ ಹಿಂದೆ ಶಾಸಕರ ರಾಜೀನಾಮೆಯಿಂದಾಗಿ ಸರ್ಕಾರ ಬಹಮತ ಕಳೆದುಕೊಂಡಿತ್ತು.
ಬಳಿಕ ಯಾವುದೇ ಪಕ್ಷ ಸರ್ಕಾರ ರಚನೆ ಮಾಡಲು ಮುಂದಾಗದ ಕಾರಣ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿತ್ತು. ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂಬ ವಿಶ್ಲೇಷಣೆಗಳು ನಡೆದಿದ್ದವು.

ವಿಧಾನಸಭೆ ಚುನಾವಣೆ ಫಲಿತಾಂಶ; 2021ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 6 ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ ಮೈತ್ರಿಕೂಟದಲ್ಲಿನ ಎಐಎನ್‌ಆರ್‌ಸಿ ಪಕ್ಷ 10 ಸ್ಥಾನದಲ್ಲಿ ಗೆಲುವು ಸಾಧಿಸಿದೆ.
ಕಾಂಗ್ರೆಸ್ ಮೈತ್ರಿಕೂಟದಲ್ಲಿ ಡಿಎಂಕೆ 6, ಕಾಂಗ್ರೆಸ್ 2 ಸ್ಥಾನದಲ್ಲಿ ಗೆಲುವು ಸಾಧಿಸಿವೆ. ಚುನಾವಣೋತ್ತರ ಸಮೀಕ್ಷೆಗಳು ಸಹ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು.
ಯಾರು ಮುಖ್ಯಮಂತ್ರಿ?; ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಮುಖ್ಯಸ್ಥ ಎನ್. ರಂಗಸ್ವಾಮಿ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು. ತಟ್ಟಂಚವಾಡಿ ಕ್ಷೇತ್ರದಲ್ಲಿ ಸಿಪಿಐನ ಕೆ. ಸೇತು ಸೇಲ್ವಂ ಅವರ ವಿರುದ್ಧ 5,456 ಮತಗಳ ಅಂತರದಲ್ಲಿ ಅವರು ಗೆಲುವು ಸಾಧಿಸಿದ್ದಾರೆ.
ಎನ್. ರಂಗಸ್ವಾಮಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಎಐಎನ್‌ಆರ್‌ಸಿ ಪಕ್ಷ 10 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡುವುದು ಅನಿವಾರ್ಯವಾಗಿದೆ.
ಗೆಲುವು ಸಾಧಿಸಿದ ಪ್ರಮುಖರು; ನೆಟ್ಟಪಕ್ಕಂ ಕ್ಷೇತ್ರದಲ್ಲಿ ಮಾಜಿ ಸಚಿವ ಮತ್ತು ಎಐಎನ್‌ಆರ್‌ಸಿ ಅಭ್ಯರ್ಥಿ ಪಿ. ರಾಜವೇಲು, ಮಂಗಲಂ ಕ್ಷೇತ್ರದಲ್ಲಿ ಮಾಜಿ ಸಚಿವ ಮತ್ತು ಎಐಎನ್‌ಆರ್‌ಸಿಯ ಸಿ. ದೇಜುಕುಮಾರ್ ಗೆಲುವು ಸಾಧಿಸಿದ್ದಾರೆ.
ಕಾರೈಕಲ್ ಉತ್ತರ ಮತ್ತು ಮೀಸಲಿ ಕ್ಷೇತ್ರವನ್ನು ಎಐಎನ್‌ಆರ್‌ಸಿ ಉಳಿಸಿಕೊಂಡಿದೆ. ಕಾರೈಕಲ್ ಉತ್ತದಲ್ಲಿ ಕ್ಷೇತ್ರದಲ್ಲಿ ಪಿ. ಆರ್. ಎನ್. ತಿರುಮರುಗನ್ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇವಲ 135 ಮತಗಳ ಅಂತದಲ್ಲಿ ಗೆದ್ದಿದ್ದಾರೆ.
ಕಾಂಗ್ರೆಸ್ ತೊರೆದು ಎಐಎನ್‌ಆರ್‌ಸಿ ಸೇರಿದ್ದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣನ್ ರಾಜ್ ಭವನ್ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಎಐಎನ್‌ಆರ್‌ಸಿ ಆರ್. ಭಾಸ್ಕರ್ ಅರಿನ್‌ಕುಪ್ಪನ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 6418 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications