ಹೋಳಿ ಗಿಫ್ಟ್ : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
ನವದೆಹಲಿ, ಮಾರ್ಚ್ 23: ಕೇಂದ್ರ ಸರ್ಕಾರಿ ನೌಕರರಿಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹೋಳಿ ಹಬ್ಬದ ಗಿಫ್ಟ್ ನೀಡಿದೆ. ತುಟ್ಟಿ ಭತ್ಯೆ(ಡಿಎ) ಹೆಚ್ಚಳವನ್ನು ಶೇ 119 ರಿಂದ ಶೇ 125ಕ್ಕೆ ಏರಿಸಲಾಗಿದೆ.
ಕೈಗಾರಿಕಾ ಕಾರ್ಮಿಕರಿಗೆ ಸಂಬಂಧಿಸಿದ ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕದ (CPI-IW data) ಆಧಾರದಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗುತ್ತದೆ. [ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಯಾವಾಗ ಆಗಿತ್ತು?]
ಜನವರಿ-ಡಿಸೆಂಬರ್ 2015 ರತನಕ ಸೂಚ್ಯಂಕ ಶೇ6.73ರಷ್ಟಿತ್ತು. ಹೀಗಾಗಿ ಶೇ 6 ಅಂಕಗಳಿಂದ 125% ತನಕ ಏರಿಕೆ ನಿರೀಕ್ಷಿಸಬಹುದು ಎಂದು ಕೇಂದ್ರ ಸರ್ಕಾರಿ ನೌಕರರು ಹಾಗೂ ಉದ್ಯೋಗಿಗಳ ಒಕ್ಕೂಟದ ಅಧ್ಯಕ್ಷ ಕೆಕೆಎನ್ ಕುಟ್ಟಿ ಹೇಳಿದ್ದಾರೆ.

ಪರಿಷ್ಕೃತ dearness allowance(ಡಿಎ) ದರಗಳು ಜನವರಿ 01, 2016ರಿಂದ ಜಾರಿಗೆ ಬರಲಿದ್ದು 48 ಲಕ್ಷ ಉದ್ಯೋಗಿಗಳು ಹಾಗೂ 55 ಲಕ್ಷ ಪಿಂಚಣಿದಾರರಿಗೆ ಉಪಯೋಗವಾಗಲಿದೆ. ಕಳೆದ ಸೆಪ್ಟೆಂಬರ್ 2015ರಲ್ಲಿ ಡಿಎ ದರವನ್ನು ಶೇ 113ರಿಂದ ಶೇ 119ಕ್ಕೆ (ಜುಲೈ 1, 2015ರಿಂದ ಅನ್ವಯವಾಗುವಂತೆ) ಹೆಚ್ಚಿಸಲಾಗಿತ್ತು.
ತುಟ್ಟಿ ಭತ್ಯೆ (dearness allowance): ತುಟ್ಟಿ ಭತ್ಯೆಯನ್ನು 12 ತಿಂಗಳಿನ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇರೆಗೆ ನಿಗದಿಪಡಿಸಲಾಗುತ್ತದೆ. ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.(ಒನ್ ಇಂಡಿಯಾ ಸುದ್ದಿ)
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications