ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅವಿಶ್ವಾಸ ಗೊತ್ತುವಳಿಯನ್ನು ಎದುರಿಸಲು ಎನ್‍ಡಿಎ ಸನ್ನದ್ದ: ಅನಂತಕುಮಾರ್

By Mahesh
|
Google Oneindia Kannada News

ನವದೆಹಲಿ ಜುಲೈ 19: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ, ಪ್ರತಿಪಕ್ಷಗಳ ಅವಿಶ್ವಾಸ ಗೊತ್ತುವಳಿಯನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಹೇಳಿದ್ದಾರೆ.

ಮುಂಗಾರು ಅಧಿವೇಶನದ ಮೊದಲ ದಿನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎನ್ ಡಿ ಎ ಪಕ್ಷಗಳು ಒಗ್ಗಟ್ಟಾಗಿದ್ದು, ನಾವೆಲ್ಲರೂ ಅವಿಶ್ವಾಸ ಗೊತ್ತುವಳಿಯನ್ನು ಎದುರಿಸಲು ಸಜ್ಜಾಗಿದ್ದೇವೆ, ಅಲ್ಲದೆ, ಎನ್ ಡಿ ಎ ಹೊರತುಪಡಿಸಿ ಇನ್ನುಳಿದ ಪಕ್ಷಗಳ ಬೆಂಬಲವನ್ನೂ ಪಡೆಯಲಿದ್ದೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಸಂಸತ್ತಿನ ಉಭಯ ಸದನಗಳ ಸಂಖ್ಯಾಬಲ ಎಷ್ಟಿದೆ?

ಬಜೆಟ್ ಅಧಿವೇಶನದ ವೇಳೆ ಅವಿಶ್ವಾಸ ಗೊತ್ತುವಳಿಯನ್ನು ಏಕೆ ಸ್ವೀಕರಿಸಿರಲಿಲ್ಲಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವಿಶ್ವಾಸ ಗೊತ್ತುವಳಿಯನ್ನು ಸ್ವೀಕರಿಸುವ ಮೊದಲ ಮಾನದಂಡ ಸದನ ಸಮರ್ಪಕವಾಗಿ ನಡೆಯುವುದು.

Government Ready To Face No-Confidence Motion, Says Ananth Kumar

ಆದರೆ ಕಳೆದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಸದನ ಸರಿಯಾಗಿ ನಡೆಯಲು ಬಿಡಲಿಲ್ಲಾ. ಈ ಹಿನ್ನಲೆಯಲ್ಲಿ ಕಳೆದ ಬಾರಿಯ ಅಧಿವೇಶನದಲ್ಲಿ ಈ ಗೊತ್ತುವಳಿಯನ್ನು ಸಭಾಪತಿಗಳು ಸ್ವೀಕರಿಸಿರಲಿಲ್ಲ. ಬಿಜೆಪಿ ನೇತೃತ್ವದ ಎನ್ ಡಿ ಎ ಕಳೆದ ಬಾರಿಯೂ ಈ ಪರೀಕ್ಷೆಗೆ ಸಿದ್ದವಾಗಿತ್ತು, ಈ ಬಾರಿಯೂ ಈ ಗೊತ್ತುವಳಿಯನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಉತ್ತರಿಸಿದರು.

2003ರ ಬಳಿಕ ಮೊದಲ ಬಾರಿಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ! 2003ರ ಬಳಿಕ ಮೊದಲ ಬಾರಿಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ!

ಅತಿಹೆಚ್ಚು ಮತಗಳಿಂದ ಈ ಅವಿಶ್ವಾಸ ಗೊತ್ತುವಳಿಯನ್ನು ಸೋಲಿಸುವ ಮೂಲಕ ಪ್ರತಿಪಕ್ಷಗಳಿಗೆ ಸರಿಯಾದ ಉತ್ತರ ನೀಡಲಿದ್ದೇವೆ ಎಂದರು.

ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆ ಉಪಾಧ್ಯಕ್ಷರ ಆಯ್ಕೆ ಕುತೂಹಲ! ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆ ಉಪಾಧ್ಯಕ್ಷರ ಆಯ್ಕೆ ಕುತೂಹಲ!

ರಾಜ್ಯಸಭೆಯ ಉಪಸಭಾಪತಿ ಸ್ಥಾನದ ಚುನಾವಣೆಯ ದಿನಾಂಕ ಹಾಗೂ ಸಮಯವನ್ನು ನಿರ್ಧರಿಸುವುದು ರಾಜ್ಯಸಭೆಯ ಸಭಾಪತಿ ಅವರ ನಿರ್ಧಾರಕ್ಕೆ ಬಿಟ್ಟಿದ್ದು, ಅವರು ಸರಿಯಾದ ಸಮಯದಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಿದ್ದಾರೆ ಎಂದರು.

English summary
"The BJP and the NDA will face the no-confidence motion, which the opposition wants to bring, under the leadership of Prime Minister Narendra Modi," Union Minister of Parliamentary Affairs Ananth Kumar on Tuesday told media after a meeting of the National Democratic Alliance (NDA).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X