Breaking: ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ

ನವದೆಹಲಿ, ಜೂನ್ 21: ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು ಜೆಪಿ ನಡ್ಡಾ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ಬುಡಕಟ್ಟು ಜನಾಂಗದ ನಾಯಕಿ ದ್ರೌಪದಿ ಮುರ್ಮು ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು.

ಒಂದು ವೇಳೇ ಮುರ್ಮು ರಾಷ್ಟ್ರಪತಿ ಸ್ಥಾನಕ್ಕೆ ಚುನಾಯಿತರಾದರೆ, ಭಾರತದ ಬುಡಕಟ್ಟು ಜನಾಂಗಕ್ಕೆ ಸೇರಿದ ಮಹಿಳೆ ಮೊದಲ ಬಾರಿಗೆ ರಾಷ್ಟ್ರದ ಮೊದಲ ಪ್ರಜೆಯಾಗುತ್ತಾರೆ. ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ.

"ಪ್ರಥಮ ಬಾರಿಗೆ ಮಹಿಳೆ ಬುಡಕಟ್ಟು ಅಭ್ಯರ್ಥಿಗೆ ಆದ್ಯತೆ ನೀಡಲಾಗಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸುತ್ತೇವೆ"ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಹೇಳಿದ್ದಾರೆ.

 Nda Has Announced Draupadi Murmu As The Presidential Candidate

ರಾಷ್ಟ್ರಪತಿ ಉಮೇದುವಾರಿಕೆಗೆ ಸಂಬಂಧಿಸಿದ ಎನ್‌ಡಿಎ ಸಭೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಮತ್ತು ಇತರರು ಭಾಗವಹಿಸಿದ್ದರು.

ಕಾಂಗ್ರೆಸ್, ಎನ್‌ಸಿಪಿ ಮತ್ತು ಟಿಎಂಸಿ ಸೇರಿದಂತೆ ಹಲವಾರು ಪ್ರಮುಖ ವಿರೋಧ ಪಕ್ಷಗಳು ಮಂಗಳವಾರ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಗೆ ತಮ್ಮ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಕೊಂಡಿವೆ.

 Nda Has Announced Draupadi Murmu As The Presidential Candidate

16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ 14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮನಾಥ್ ಕೋವಿಂದ್ ಜುಲೈ 25, 2017 ರಂದು ಅಧಿಕಾರ ವಹಿಸಿಕೊಂಡಿದ್ದು, ಅವರ ಅವಧಿಯು ಜುಲೈ 24, 2022 ರಂದು ಕೊನೆಗೊಳ್ಳುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+