Narendra Modi: 3 ನೇ ಬಾರಿ ಪ್ರಧಾನಿ ಹುದ್ದೆ ಅಲಂಕರಿಸಲು ವೇದಿಕೆ ರೆಡಿ; ಮೋದಿಯನ್ನೇ ನಾಯಕರಾಗಿ ಆಯ್ಕೆ ಮಾಡಿದ ಮೈತ್ರಿಕೂಟ

ದೆಹಲಿ, ಜೂನ್‌ 05: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಹಿರಿಯ ನಾಯಕರು ಸರ್ಕಾರ ರಚನೆ ಕುರಿತು ಬುಧವಾರ ನವದೆಹಲಿಯಲ್ಲಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. 2024 ರ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ನಡೆಸಿದ ಮೊದಲ ಸಭೆಯಾಗಿದೆ.

ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದರು. ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದ ವಂಚಿತ ವರ್ಗಗಳ ಸೇವೆಗೆ ಮೈತ್ರಿ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುವ ನಿರ್ಣಯವನ್ನು ಎನ್‌ಡಿಎ ನಾಯಕರು ಅಂಗೀಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

NDA leaders formally elected Prime Minister Narendra Modi as the alliance leader

ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್, ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಬುಧವಾರದ ನಂತರದಲ್ಲಿ ಅಧ್ಯಕ್ಷರಾದದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ ಎಂದು ಹಲವು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೂರನೇ ಬಾರಿ ಆ ಹುದ್ದೆಯನ್ನು ಅಲಂಕರಿಸಲು ವೇದಿಕೆ ಆಲ್ಮೋಸ್ಟ್ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟ ಸರ್ಕಾರ ರಚಿಸುವ ಪ್ರಸ್ತಾಪವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಲು ಅಣಿಯಾಗಿದ್ದು, ಮೋದಿ ಅವರು ಮೈತ್ರಿಕೂಟ ಸದಸ್ಯ ಪಕ್ಷಗಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದಾರೆ. ಟಿಡಿಪಿ, ಜೆಡಿಯು, ಶಿಂಧೆ ನೇತೃತ್ವದ ಶಿವಸೇನಾ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಕ್ರಮವಾಗಿ 16, 12, 7 ಮತ್ತು 5 ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ.

ಇನ್ನೂ ಈ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಭಾಗವಹಿಸಿದ್ದರು. ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದು, ಮೂರನೇ ಬಾರಿಗೆ ಎನ್‌ಡಿಎಗೆ ಈ ಜನಾದೇಶಕ್ಕಾಗಿ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶೀಘ್ರದಲ್ಲೇ ರಚನೆಯಾಗಲಿದ್ದು, ಶೀಘ್ರದಲ್ಲಿಯೇ ಎಲ್ಲ ಸಂಸದರ ಸಭೆ ನಡೆಯಲಿದೆ ಎಂದು ಜೆಡಿಯು ಸಂಸದ ಸಂಜಯ್ ಕುಮಾರ್ ಝಾ ಹೇಳಿದ್ದಾರೆ.

543 ಸದಸ್ಯರ ಲೋಕಸಭೆಯಲ್ಲಿ ಎನ್‌ಡಿಎ ಬಹುಮತದ 272 ಕ್ಕಿಂತ ಆರಾಮವಾಗಿ ಇದೆ, 240 ಸ್ಥಾನಗಳನ್ನು ಗೆದ್ದ ಬಿಜೆಪಿ, 2014 ರಿಂದ ಮೊದಲ ಬಾರಿಗೆ ಮ್ಯಾಜಿಕ್ ಸಂಖ್ಯೆಗಿಂತ ಕಡಿಮೆಯಾಗಿದ್ದು ಇದು ಮಿತ್ರಪಕ್ಷಗಳ ಮೇಲೆ ಅವಲಂಬಿತವಾಗಿದೆ. ಇದು ನಡೆದ ಸಭೆಯಲ್ಲಿ ಜೆಡಿಯುನ ನೀತಿಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಭಾಗಿಯಾಗಿದ್ದಾರೆ. ಈ ಇಬ್ಬರು ನಾಯಕರನ್ನ ಇಂಡಿಯಾ ಮೈತ್ರಿಕೂಟ ಸಂಪರ್ಕಿಸಿತ್ತು. ಆದರೆ, ಈ ನಾಯಕರು ಎನ್‌ ಡಿಎ ಜೊತೆಗೆ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+