ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಶಿವ ದೇವಾಲಯದಲ್ಲಿ ನೆಲ ಗುಡಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ

|
Google Oneindia Kannada News

ನವದೆಹಲಿ, ಜೂನ್ 22: ಭಾರತದ ರಾಷ್ಟ್ರಪತಿ ಚುನಾವಣೆಯಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಎನ್‌ಡಿಎ ಮತ್ತು ಯುಪಿಎ ಒಕ್ಕೂಟಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಅಂತಿಮವಾಗಿ ಘೋಷಿಸಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಯ ಒಂದೇ ಒಂದು ಕೆಲಸ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿ ಆಗುತ್ತಿದೆ.

Recommended Video

Draupadi Murmu ಭಾರತದ ಮೊದಲ ಮಹಿಳಾ ಬುಡಕಟ್ಟು ರಾಷ್ಟ್ರಪತಿ ಆಗ್ತಾರಾ? | *Politics | OneIndia Kannada

ಎನ್‌ಡಿಎ ಅಭ್ಯರ್ಥಿ ಆಗಿರುವ ದ್ರೌಪದಿ ಮುರ್ಮು ಒಡಿಶಾ ರಾಯರಂಗಪುರದ ಶಿವನ ದೇವಸ್ಥಾನದಲ್ಲಿ ನೆಲ ಗುಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದಕ್ಕೂ ಪೂರ್ವದಲ್ಲಿ ನೆಲ ಗುಡಿಸುವ ಮೂಲಕ ಸರಳತೆ ತೋರಿದರು.

Breaking: ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿBreaking: ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ

ಶಿವನ ದೇವಾಲಯದಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನೆಲ ಗುಡಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಘೋಷಣೆ: ದೇಶದಲ್ಲಿ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮುರನ್ನು ಘೋಷಿಸಿದೆ. ಮಂಗಳವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಧಿಕೃತವಾಗಿ ಮಾಹಿತಿ ನೀಡಿದರು. ಜಾರ್ಖಂಡ್‌ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ದ್ರೌಪದಿ ಮುರ್ಮು ಬುಡಕಟ್ಟು ಜನಾಂಗ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ದೇಶದ ಎರಡನೇ ಮಹಿಳಾ ಮತ್ತು ಮೊದಲ ಬುಡಕಟ್ಟು ಜನಾಂಗ ಮಹಿಳಾ ರಾಷ್ಟ್ರಪತಿ ಎನ್ನುವ ಖ್ಯಾತಿಗೆ ದ್ರಾಪದಿ ಮುರ್ಮು ಪಾತ್ರರಾಗಲಿದ್ದಾರೆ.

NDAs Presidential Candidate Draupadi Murmu Sweeps the Floor at Rairangpur Shiv Temple

ರಾಷ್ಟ್ರಪತಿ ಚುನಾವಣೆ ನಡೆಯುವುದು ಯಾವಾಗ?: ರಾಷ್ಟ್ರಪತಿ ಚುನಾವಣೆಗೆ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. 16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ 14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮನಾಥ್ ಕೋವಿಂದ್ ಜುಲೈ 25, 2017 ರಂದು ಅಧಿಕಾರ ವಹಿಸಿಕೊಂಡಿದ್ದು, ಅವರ ಅವಧಿಯು ಜುಲೈ 24, 2022 ರಂದು ಕೊನೆಗೊಳ್ಳುತ್ತದೆ.

English summary
Video: NDA's presidential Candidate Draupadi Murmu sweeps the floor at Shiv temple in Rairangpur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X