ರಾಜ್ಯಸಭೆː ಕಾಂಗ್ರೆಸ್ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಬಿಜೆಪಿ

By: ವಿಕಾಸ್ ನಂಜಪ್ಪ
Subscribe to Oneindia Kannada

ನವದೆಹಲಿ, ಆಗಸ್ಟ್ 04:ರಾಜ್ಯಸಭೆಯಲ್ಲಿ ಬಿಜೆಪಿ ತನ್ನ ಸದಸ್ಯರ ಬಲವನ್ನು ಹೆಚ್ಚಿಸಿಕೊಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷವನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದೆ.

ಮೋದಿ ಅವರ ಕನಸಿನಂತೆ ಉಭಯ ಸದನಗಳಲ್ಲಿ ಆಡಳಿತಾರೂಢ ಎನ್ ಡಿಎ ಅಗ್ರಸ್ಥಾನಕ್ಕೇರಿದೆ. ಬಿಜೆಪಿ ಈಗ 58 ಸದಸ್ಯರ ಪಡೆದಿದ್ದು, 57 ಸದಸ್ಯರನ್ನು ಕಾಂಗ್ರೆಸ್ ಹೊಂದಿದೆ.

BJP makes history, overtakes Congress to become largest party in Rajya Sabha

ಹೇಗೆ ಸಾಧ್ಯವಾಯ್ತು?: ಮಧ್ಯಪ್ರದೇಶದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಸಂಪಾತಿಯಾ ಯುಕಿ ಅವರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಬಲ ಹೆಚ್ಚಳವಾಯಿತು. ಅನಿಲ್ ಮಾಧವ್ ದವೆ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆಸಲಾಗಿತ್ತು.

2014ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಬಿಜೆಪಿ ಅತ್ಯಂತ ಹೆಚ್ಚು ಸದಸ್ಯ ಬಲ ಹೊಂದಿರುವ ಪಕ್ಷವಾಗಿ ಹೊರಹೊಮ್ಮಿದೆ.

245 ಸದಸ್ಯ ಬಲದ ಮೇಲ್ಮನೆಯಲ್ಲಿ ಒಂದು ಸ್ಥಾನದಿಂದ ಅಗ್ರಸ್ಥಾನ ತಪ್ಪಿಸಿಕೊಂಡಿದ್ದ ಬಿಜೆಪಿ 2018ರ ತನಕ ಕಾಯಬೇಕಾಗಿತ್ತು. ಆದರೆ, ಉಪ ಚುನಾವಣೆಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ತನ್ನ ಬಲ ಹೆಚ್ಚಿಸಿಕೊಂಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The BJP with 58 members has now overtaken the Congress as the largest political party in the Rajya Sabha. The Congress has 57 members in the upper house of Parliament.
Please Wait while comments are loading...