ಭಾರತದಲ್ಲಿ 8 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಏಪ್ರಿಲ್ 05: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ನಡುವೆ ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ದಾಖಲೆ ಬರೆದಿದೆ. ದೇಶಾದ್ಯಂತ ಈವರೆಗೂ 8 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಒಂದೇ ದಿನದಲ್ಲಿ 12 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 79ನೇ ದಿನದ ಸಂಜೆ 7 ಗಂಟೆ ವೇಳೆಗೆ ದೇಶದಲ್ಲಿ 12.31 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶಾದ್ಯಂತ ಈವರೆಗೂ 7,91,05,163 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 90,09,353 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 53,43,493 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 97,37,850 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 41,33,961 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

Nearly 8 Crore Beneficiaries Got Vaccinated Against Coronavirus Across India

45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ:

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,99,31,635 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 9,48,871 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಎರಡು ಮಾದರಿ ಲಸಿಕೆ ವಿತರಣೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+