ತಕ್ಕ ಉತ್ತರ ನೀಡಬೇಕಿದೆ: ಉದಯನಿಧಿ 'ಸನಾತನ' ಹೇಳಿಕೆಗೆ ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

ನವದೆಹಲಿ, ಸೆಪ್ಟೆಂಬರ್‌ 06: ತಮಿಳುನಾಡು ಸಚಿವ ಹಾಗೂ ಸಿಎಂ ಸ್ಟಾಲಿನ್‌ ಅವರ ಪುತ್ರ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಈಗ ದೇಶದಾದ್ಯಂತ ಕಲ್ಲೋಲ ಸೃಷ್ಟಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಭಾರಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, 'ನಾವು ಸರಿಯಾಗಿ ಉತ್ತರ ನೀಡಬೇಕಿದೆ' ಎಂದು ಬಿಜೆಪಿ ಸಚಿವರಿಗೆ ಸೂಚಿಸಿದ್ದಾರೆ.

ಮೂಲಗಳ ಪ್ರಕಾರ, ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಎಂಕೆ ನಾಯಕನಿಗೆ ತಕ್ಕ ಉತ್ತರ ನೀಡುವಂತೆ ಪ್ರಧಾನಿ ಮೋದಿ ಬಿಜೆಪಿ ಸಚಿವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

 ‘Need to give proper response’: PM Modi’s first reaction to Udhayanidhi’s ‘Sanatan Dharma’ remarks

ತಮಿಳುನಾಡು ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಅವರು, 'ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕಿದೆ' ಎಂದು ಹೇಳಿಕೆ ನೀಡಿದ್ದಾರೆ.

ಸನಾತನ ಧರ್ಮವು ಮಲೇರಿಯಾ, ಡೆಂಗ್ಯೂ ಮತ್ತು ಕೊರೊನಾ ವೈರಸ್‌ನಂತೆ ಕೆಲಸ ಮಾಡುತ್ತದೆ. ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಇದನ್ನು ನಿರ್ಮೂಲನೆ ಮಾಡಬೇಕಿದೆ ಎಂದು ಕರೆ ನೀಡಿದ್ದಾರೆ.

ಪ್ರಗತಿಪರರು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಉದಯನಿಧಿ, 'ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಮಲೇರಿಯಾ, ಸೊಳ್ಳೆ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದರಂತೆ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು. ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು' ಎಂದು ತಿಳಿಸಿದ್ದಾರೆ.

ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು, 'ಉದಯನಿಧಿ ಸ್ಟಾಲಿನ್‌ ಅವರು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ' ಎಂದು ಆರೋಪಿಸಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 'ಮತಬ್ಯಾಂಕ್ ಹಾಗೂ ತುಷ್ಟೀಕರಣ ರಾಜಕೀಯಕ್ಕಾಗಿ 'ಸನಾತನ ಧರ್ಮ'ವನ್ನು ಉದಯನಿಧಿ ಅವಮಾನಿಸಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದಯನಿಧಿ ಸ್ಟಾಲಿನ್‌ ಹೇಳಿಕೆಯನ್ನು ಬೆಂಬಲಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಮನುಷ್ಯನ ಘಟನೆ ಹಾಗೂ ಸಮಾನತೆಯನ್ನು ಪ್ರತಿಪಾದಿಸದೇ ಇರುವುದು ಧರ್ಮವೇ ಅಲ್ಲ ಎಂದು ಹೇಳಿದ್ದಾರೆ.

ಉದಯನಿಧಿ ಸ್ಟಾಲಿನ್‌ ಹಾಗೂ ಪ್ರಿಯಾಂಕ್‌ ಖರ್ಗೆ ಅವರ ವಿರುದ್ಧ ದೇಶದ ಹಲವು ಕಡೆಗಳಲ್ಲಿ ದೂರು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+