ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್ ಪರೀಕ್ಷೆಗೆ ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಮಾರ್ಚ್ 7: 2018ರ ನೀಟ್ ಪರೀಕ್ಷೆಗೆ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆಧಾರ್ ಬದಲಿಗೆ ಬೇರೆ ಯಾವುದೇ ಗುರುತಿನ ಚೀಟಿಗಳನ್ನು ದಾಖಲೆಗಾಗಿ ಬಳಸಬಹುದು ಎಂದು ನ್ಯಾಯಾಲಯ ಹೇಳಿದೆ.

2018ರ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಕಡ್ಡಾಯ ಮಾಡಬಾರದು ಎಂದು ಕೋರಿ ಗುಜರಾತ್ ಹೈಕೋರ್ಟ್ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ವಿಚಾರಣೆ ವೇಳೆ ಕೇಂದ್ರ ಸರಕಾರ ನ್ಯಾಯಾಲಯಕ್ಕೆ ನೀಟ್ 2018ರ ಪರೀಕ್ಷೆಗೆ ಆಧಾರ್ ಕಾರ್ಡ್ ಬೇಕಾಗಿಲ್ಲ ಎಂದು ಹೇಳಿದೆ. "ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಹೊಂದಿರಲೇಬೇಕು ಎಂದು ನಾವು ಸಿಬಿಎಸ್ಇಗೆ ಸೂಚಿಸಿಲ್ಲ," ಎಂಬುದಾಗಿ ಕೇಂದ್ರ ಪ್ರತಿಕ್ರಿಯೆ ನೀಡಿದೆ.

NEET 2018: Aadhaar not mandatory says Supreme Court

ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ಮತ್ತು ಅಸ್ಸಾಂನಲ್ಲಿರುವಂತೆ ಬೇರೆ ಗುರುತಿನ ಚೀಟಿಗಳನ್ನು ಸಾಕ್ಷ್ಯವಾಗಿ ನೀಡಬಹುದು ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ವಿಚಾರಣೆ ವೇಳೆ ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ ಈ ವರ್ಷದ ನೀಟ್ ಪರೀಕ್ಷೆಗೆ ಆಧಾರ್ ಕಡ್ಡಾಯಗೊಳಿಸಿದ ಸಿಬಿಎಸ್ಐ ಸುತ್ತೋಲೆ ಹೊರಡಿಸಿತ್ತು.

ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ ಗಳಿಗಾಗಿ ನೀಟ್ ಪರೀಕ್ಷೆ ಇದೇ ಮೇ 6ರಂದು ನಡೆಯಲಿದೆ. ಈ ಹಿಂದೆ ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ ಹಾಗೂ ಮೇಘಾಲಯ ರಾಜ್ಯಗಳ ವಿದ್ಯಾರ್ಥಿಗಳಿಗೆ ಆಧಾರ್ ಕಡ್ಡಾಯದಿಂದ ವಿನಾಯಿತಿ ನೀಡಲಾಗಿತ್ತು. ಇದೀಗ ದೇಶದಾದ್ಯಂತ ಈ ಸಡಿಲಿಕೆಯನ್ನು ವಿಸ್ತರಣೆ ಮಾಡಲಾಗಿದೆ.

English summary
The Supreme Court has said that Aadhaar is not mandatory for NEET 2018. The court said that any other form of identification proof can be used instead of Aadhaar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X