ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್, ಜೆಇಇ ಪರೀಕ್ಷೆ ವಿರೋಧಿಸಿ 6 ಬಿಜೆಪಿಯೇತರ ರಾಜ್ಯಗಳಿಂದ ಸುಪ್ರೀಂಕೋರ್ಟ್ ಗೆ ಅರ್ಜಿ

|
Google Oneindia Kannada News

ನವದೆಹಲಿ, ಆಗಸ್ಟ್.28: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಮತ್ತು ಜಂಟಿ ಪ್ರವೇಶ ಪರೀಕ್ಷೆ(JEE)ಗಳನ್ನು ನಡೆಸಲು ಮುಂದಾಗಿರುವ ಕೇಂದ್ರದ ವಿರುದ್ಧ ಆರು ರಾಜ್ಯಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ.

ಸಪ್ಟೆಂಬರ್ ತಿಂಗಳಿನಲ್ಲೇ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಬಾರದು. ಬದಲಿಗೆ ಈ ದಿನಾಂಕವನ್ನು ಮುಂದೂಡುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ.

LIVE Updates: ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಸುಪ್ರೀಂಕೋರ್ಟ್ ಮೊರೆLIVE Updates: ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಸುಪ್ರೀಂಕೋರ್ಟ್ ಮೊರೆ

ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ. ಇದರ ಜೊತೆಗೆ ದೇಶಾದ್ಯಂತ ಹಲವೆಡೆ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಜೆಇಇ ಮತ್ತು ನೀಟ್ ವಿರುದ್ಧ ರಾಹುಲ್ ಗಾಂಧಿ ಟ್ವೀಟ್

ಕೊರೊನಾವೈರಸ್ ಸೋಂಕು ಹರಡುವಿಕೆ ನಡುವೆಯೂ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವುದಕ್ಕೆ ತೀರ್ಮಾನಿಸಲಾಗುತ್ತಿದೆ. ದೇಶದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ನಾವೆಲ್ಲರೂ ಧ್ವನಿ ಎತ್ತಬೇಕಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಬೆಳಗ್ಗೆ 10 ಗಂಟೆಗೆ ಪ್ರತಿಭಟನೆಗೆ ಕರೆ ನೀಡಿದ್ದರು.

ದೆಹಲಿಯಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಹೋರಾಟ

ದೆಹಲಿಯಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಹೋರಾಟ

ಜೆಇಇ ಮತ್ತು ನೀಟ್ ಪರೀಕ್ಷೆ ವಿರೋಧಿಸಿ ನವದೆಹಲಿಯ ಶಾಸ್ತ್ರಿ ಭವನದ ಎದುರಿನಲ್ಲಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೊವಿಡ್-19 ನಡುವೆ ಪರೀಕ್ಷೆ ನಡೆಸಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜಸ್ಥಾನದ ಜೈಪುರ್ ನಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಜಿಇಇ ಮತ್ತು ನೀಟ್ ಪರೀಕ್ಷೆ ದಿನಾಂಕ ಮುಂದೂಡಿಕೆ ಆಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಸಚಿನ್ ಪೈಲಟ್ ಎಚ್ಚರಿಕೆ ನೀಡಿದರು.

ಸಿಲಿಕಾನ್ ಸಿಟಿಯಲ್ಲೂ ನೀಟ್ ಮತ್ತು ಜೆಇಇ ವಿರುದ್ಧ ಪ್ರತಿಭಟನೆ

ಸಿಲಿಕಾನ್ ಸಿಟಿಯಲ್ಲೂ ನೀಟ್ ಮತ್ತು ಜೆಇಇ ವಿರುದ್ಧ ಪ್ರತಿಭಟನೆ

ನೀಟ್ ಮತ್ತು ಜೆಇಇ ಪರೀಕ್ಷೆ ವಿರೋಧಿಸಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ಕುಳಿತಿದ್ದರು. ಸಾಂಕ್ರಾಮಿಕ ಪಿಡುಗಿನ ನಡುವೆ ಯಾವುದೇ ಪರೀಕ್ಷೆಗಳನ್ನು ನಡೆಸಕೂಡದು ಎಂದು ಆಗ್ರಹಿಸಿದರು. ಇನ್ನೊಂದೆಡೆ ತಮಿಳುನಾಡಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸದಂತೆ ಧಿಕ್ಕಾರ ಕೂಗಿದರು.

ನೀಟ್, ಜಿಇಇ ವಿದ್ಯಾರ್ಥಿಗಳು ಮತ್ತು ಕೇಂದ್ರಗಳ ಮಾಹಿತಿ

ನೀಟ್, ಜಿಇಇ ವಿದ್ಯಾರ್ಥಿಗಳು ಮತ್ತು ಕೇಂದ್ರಗಳ ಮಾಹಿತಿ

ಜೆಇಇ ಮುಖ್ಯ ಪರೀಕ್ಷಗಳನ್ನು ಸಪ್ಟೆಂಬರ್ 1 ರಿಂದ 6ರವರೆಗೆ ನಡೆಯಲಿದ್ದು, 9.53 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಸಪ್ಟೆಂಬರ್.13ರಂದು ನೀಟ್ ಪರೀಕ್ಷೆಗಾಗಿ 15.97 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 8.58 ಲಕ್ಷ ಅಭ್ಯರ್ಥಿಗಳ ಪೈಕಿ 7.5 ಲಕ್ಷ ಅಭ್ಯರ್ಥಿಗಳು ಜೆಇಇ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ನೀಟ್‌ನಲ್ಲಿ 24 ಗಂಟೆಗಳಲ್ಲಿ 15.97 ಲಕ್ಷ ಅಭ್ಯರ್ಥಿಗಳ ಪೈಕಿ 10 ಲಕ್ಷ ಮಂದಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ಇದರ ನಡುವೆ ಜೆಇಇ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 570ರಿಂದ 660ಕ್ಕೆ ಏರಿಕೆ ಮಾಡಲಾಗಿದೆ. 3842 ನೀಟ್ ಪರೀಕ್ಷಾ ಕೇಂದ್ರಗಳಿವೆ.

English summary
NEET JEE 2020 Row: Six Non BJP Ruled States File Review Petition Against SC Order To Hold Exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X