ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

NEET, JEE News LIVE Updates: ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಸುಪ್ರೀಂಕೋರ್ಟ್ ಮೊರೆ

|
Google Oneindia Kannada News

ನವದೆಹಲಿ, 29: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.

ಕೊವಿಡ್-19 ಆತಂಕದ ನಡುವೆ ವಿದ್ಯಾರ್ಥಿಗಳಿಗೆ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವುದು ಸೂಕ್ತ ನಡೆಯಲ್ಲ ಎಂದು ಪೋಷಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಮತ್ತು ಜಂಟಿ ಪ್ರವೇಶ ಪರೀಕ್ಷೆಗಳನ್ನು ಸಪ್ಟೆಂಬರ್ ನಲ್ಲಿ ನಡೆಸುವುದಕ್ಕೆ ತೀರ್ಮಾನಿಸಲಾಗಿದೆ.

ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿದ ಅರ್ಜಿಯನ್ನು ಈಗಾಗಲೇ ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಇದರ ನಡುವೆ ದೇಶದ ಹಲವು ವಿಶ್ವವಿದ್ಯಾಲಯಗಳ 150ಕ್ಕೂ ಹೆಚ್ಚು ಅಕಾಡೆಮಿಗಳು ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದು ಮನವಿ ಸಲ್ಲಿಸಿದ್ದಾರೆ.

NEET, JEE ಪರೀಕ್ಷೆ ಆಯೋಜನೆ ಈಗ ಏಕೆ? ಸ್ವಾಮಿ ಪ್ರಶ್ನೆNEET, JEE ಪರೀಕ್ಷೆ ಆಯೋಜನೆ ಈಗ ಏಕೆ? ಸ್ವಾಮಿ ಪ್ರಶ್ನೆ

ದೇಶದಲ್ಲಿ ಕೆಲವರು ತಮ್ಮ ರಾಜಕೀಯಕ್ಕಾಗಿ ವಿದ್ಯಾರ್ಥಿಗಳ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಸಂಸದ ರಾಹುಲ್ ಗಾಂಧಿ, ಸುಬ್ರಮಣಿಯಂ ಸ್ವಾಮಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಪರೀಕ್ಷೆಗಳನ್ನು ಮುಂದೂಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇದರ ನಡುವೆ ಕೇಂದ್ರ ಸರ್ಕಾರ, ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಮತ್ತು ಪೋಷಕರ ಅಭಿಪ್ರಾಯವೇನು. ದೇಶದಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆಗಳ ಬಗ್ಗೆ ನಡೆಯುತ್ತಿರುವ ಕ್ಷಣಕ್ಷಣದ ಅಪ್ ಡೇಟ್ ಗಳು ಇಲ್ಲಿ ಲಭ್ಯ.

NEET, JEE News Live Updates and Highlights in Kannada

Newest FirstOldest First
3:14 PM, 29 Aug

ಪುದುಚೇರಿ ಸರ್ಕಾರದ ಪರವಾಗಿ ನಾವು ನೀಟ್ ಪರೀಕ್ಷೆಯನ್ನು ಸ್ಥಗಿತಗೊಳಿಸುವಂತೆ ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದೇವೆ. ನನ್ನ ಹೆಸರಿನಲ್ಲಿ ಪ್ರಕರಣ ದಾಖಲಾಗಿದೆ. ಅರ್ಜಿಯನ್ನು ಮುಂದಿನ ವಾರದೊಳಗೆ ವಿಚಾರಣೆ ನಡೆಸಲಾಗುವುದು. ವಿದ್ಯಾರ್ಥಿ ಸಮುದಾಯವನ್ನು ಕಾಪಾಡಲು ಸುಪ್ರೀಂಕೋರ್ಟ್‌ನಿಂದ ಉತ್ತಮ ತೀರ್ಪು ಸಿಗಲಿ ಎಂದು ನಾವು ಭಾವಿಸುತ್ತೇವೆ: ಪುದುಚೇರಿ ಶಾಸಕ ಆರ್ ಕೆ ಆರ್ ಅನಂತರಾಮನ್
10:40 AM, 29 Aug

ಜೆಇಇ, ನೀಟ್ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸುವುದಾಗಿ ಒಡಿಶಾ ಸರ್ಕಾರ ತಿಳಿಸಿದೆ.
9:02 AM, 29 Aug

ಜೆಇಇ ಮತ್ತು ನೀಟ್ ಪರೀಕ್ಷೆಗಳು ನಡೆಯುವ ನಗರಗಳಲ್ಲಿ ಲಾಕ್ ಡೌನ್ ಇರುವುದಿಲ್ಲ ಎಂದು ಒಡಿಶಾ ತಿಳಿಸಿದೆ.
10:50 PM, 28 Aug

ನೀಟ್ ಹಾಗೂ ಜೆಇಇ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಎಬಿವಿಪಿ ಸಹಾಯವಾಣಿಯನ್ನು ತೆರೆದಿದೆ.
8:41 PM, 28 Aug

ನೀಟ್, ಜೆ ಇಇ ಪರೀಕ್ಷೆ ಆಯೋಜನೆ ಕುರಿತ ಕೇಂದ್ರ ಸರ್ಕಾರ ಹಠಮಾರಿ ಧೋರಣೆ ವಿರುದ್ಧ ಬಿಜೆಪಿಯೇತರ ರಾಜ್ಯಗಳು ತಿರುಗಿಬಿದ್ದಿದ್ದು, ಪರೀಕ್ಷೆ ಮೂಂದೂಡುವಂತೆ ಸುಪ್ರೀಂ ಕೋರ್ಟ್ 6 ರಾಜ್ಯ ಸರ್ಕಾರಗಳು ಅರ್ಜಿ ಸಲ್ಲಿಸಿವೆ. ಕೊರೊನಾ ಸೋಂಕು ಹರಡುವಿಕೆ, ಮತ್ತು ಕೆಲವು ರಾಜ್ಯಗಳಲ್ಲಿ ಪ್ರವಾಹ ಭೀತಿ, ತೊಂದರೆಯ ಕಾರಣ 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆ ಇಇ) ನಡೆಸಲು ಮುಂದಾಗಿರುವ ಕೇಂದ್ರದ ವಿರುದ್ಧ 6 ಆರು ರಾಜ್ಯಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ.
5:54 PM, 28 Aug

ಸರ್ಕಾರದ ವೈಫಲ್ಯಗಳಿಗೆ ನೀಟ್ ಮತ್ತು ಜೆಇಇ ಆಕಾಂಕ್ಷಿಗಳ ಹಿತವನ್ನು ಬಲಿಕೊಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
4:14 PM, 28 Aug

ನೀಟ್ ಹಾಗೂ ಜೆಇಇ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಬಿಗಿಪಟ್ಟು ಹಾಕಿ ಕುಳಿತಿದೆ . ಈ ಗೊಂದಲವನ್ನು ಬಿಜೆಪಿ ಮುಖಂಡ ಡಾ. ಸುಬ್ರಮಣ್ಯಂ ಸ್ವಾಮಿ ಅವರು ದ್ರೌಪದಿ- ಕೃಷ್ಣ ಪಾತ್ರಗಳಿಗೂ ಜೊತೆಗೆ ತಮ್ಮನ್ನು ಮಹಾಭಾರತದ ವಿದುರನ ಪಾತ್ರಕ್ಕೆ ಹೋಲಿಕೆ ಮಾಡಿಕೊಂಡಿದ್ದಾರೆ.
Advertisement
12:35 PM, 28 Aug

ದೇಶದ ಆರು ಬಿಜೆಪಿ ಸರ್ಕಾರೇತರ ರಾಜ್ಯಗಳಿಂದ ಜೆಇಇ ಮತ್ತು ನೀಟ್ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ ಮೊರೆ. ಪಶ್ಚಿಮ ಬಂಗಾಳ, ಪಂಜಾಬ್, ರಾಜಸ್ಥಾನ, ಮಹಾರಾಷ್ಟ್ರ, ಛತ್ತೀಸ್ ಘರ್, ಜಾರ್ಖಂಡ್ ರಾಜ್ಯಗಳಿಂದ ಮರುಪರಿಶೀಲನಾ ಅರ್ಜಿ ಸಲ್ಲಿಕೆ.
12:32 PM, 28 Aug

ಜಿಇಇ ಮತ್ತು ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಧ್ವನಿಯಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಕಾಂಗ್ರೆಸ್ ನ ಸಚಿನ್ ಪೈಲಟ್ ತಿಳಿಸಿದ್ದಾರೆ.
12:29 PM, 28 Aug

ಅಹ್ಮದಾಬಾದ್ ನಲ್ಲಿ ಜೆಇಇ ಮತ್ತು ನೀಟ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
12:27 PM, 28 Aug

ತಮಿಳುನಾಡಿನಲ್ಲೂ ಜೆಇಇ ಮತ್ತು ನೀಟ್ ಪರೀಕ್ಷೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ.
12:27 PM, 28 Aug

ಸಪ್ಟೆಂಬರ್ ತಿಂಗಳಿನಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ನವದೆಹಲಿಯ ಶಾಸ್ತ್ರಿ ಭವನದ ಎದುರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.
Advertisement
12:24 PM, 28 Aug

ಕೊರೊನಾವೈರಸ್ ಸೋಂಕು ಹರಡುವಿಕೆ ಅಪಾಯದ ನಡುವೆ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸಲು ತೀರ್ಮಾನಿಸಿದ ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್ ಗೆ ಮೊರೆ ಹೋಗಲು ವಿರೋಧ ಪಕ್ಷಗಳ ತೀರ್ಮಾನ. ಬುಧವಾರ ನಡೆದ ವಿಪಕ್ಷ ನಾಯಕರ ತೀರ್ಮಾನಕ್ಕೆ ಡಿಎಂಕೆ ಮತ್ತು ಆಮ್ ಆದ್ಮಿ ಪಕ್ಷಗಳು ಕೂಡಾ ಕೈ ಜೋಡಿಸಿವೆ.
12:21 PM, 28 Aug

ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ವಿರೋಧಿಸಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟವು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿತು.
11:32 AM, 28 Aug

ಶಾಲಾ-ಕಾಲೇಜು ಆರಂಭಿಸುವ ಬಗ್ಗೆ ಮತ್ತು ಪರೀಕ್ಷೆಗಳನ್ನು ನಡೆಸುವುದಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಆಗುವುದನ್ನು ಎದುರು ನೋಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
11:29 AM, 28 Aug

ಜೆಇಇ ಮತ್ತು ನೀಟ್ ಪರೀಕ್ಷೆ ವಿರೋಧ ವ್ಯಕ್ತಪಡಿಸುತ್ತಿರುವ ವಿದ್ಯಾರ್ಥಿಗಳ ಪರವಾಗಿ ಸಂಸದ ರಾಹುಲ್ ಗಾಂಧಿ ಟ್ವೀಟ್.
9:44 PM, 27 Aug

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ನೀಟ್ ಹಾಗೂ ಜೆಇಇ ಪರೀಕ್ಷೆ ಮುಂದೂಡುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
6:14 PM, 27 Aug

ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸಲು ತಮ್ಮ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳು "ಪರೀಕ್ಷೆಗಳನ್ನು ತೆಗೆದುಕೊಳ್ಳಲು ತಮ್ಮ ಪ್ರಾಣವನ್ನು ಪಣಕ್ಕಿಡಬೇಕೆ?" ಎಂದು ಪ್ರಶ್ನಿಸಿದ್ದಾರೆ. ಭಾರತದ ಪ್ರಧಾನ ಶೈಕ್ಷಣಿಕ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸಿದ್ದರಾಮಯ್ಯ ವಿರೋಧ ಪಕ್ಷಗಳ ಮಾತಿಗೆ ದನಿಗೂಡಿಸಿದ್ದಾರೆ.
5:44 PM, 27 Aug

ಜೆಇಇ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 570ರಿಂದ 660ಕ್ಕೆ ಏರಿಕೆ ಮಾಡಲಾಗಿದೆ. 3842 ನೀಟ್ ಪರೀಕ್ಷಾ ಕೇಂದ್ರಗಳಿವೆ.
5:27 PM, 27 Aug

8.58 ಲಕ್ಷ ಅಭ್ಯರ್ಥಿಗಳ ಪೈಕಿ 7.5 ಲಕ್ಷ ಅಭ್ಯರ್ಥಿಗಳು ಜೆಇಇ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ನೀಟ್‌ನಲ್ಲಿ 24 ಗಂಟೆಗಳಲ್ಲಿ 15.97 ಲಕ್ಷ ಅಭ್ಯರ್ಥಿಗಳ ಪೈಕಿ 10 ಲಕ್ಷ ಮಂದಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ.
5:09 PM, 27 Aug

ಕೊರೊನಾವೈರಸ್ ಸೋಂಕು ಹರಡುವಿಕೆ ನಡುವೆ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೋತ್ಸ್ರಾ ತಿಳಿಸಿದ್ದಾರೆ.
3:46 PM, 27 Aug

2020ನೇ ಸಾಲಿನ ನೀಟ್ ಪರೀಕ್ಷೆಗೆ 9,94,198 ವಿದ್ಯಾರ್ಥಿಗಳಿಂದ ಅರ್ಜಿ ಮತ್ತು ಜೆಇಇ ಪರೀಕ್ಷೆಗೆ 7,49,408 ವಿದ್ಯಾರ್ಥಿಗಳು ಹೆಸರು ದಾಖಲಿಸಿಕೊಂಡಿದ್ದಾರೆ.
3:44 PM, 27 Aug

ಕೊವಿಡ್-19 ನಡುವೆ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವುದಕ್ಕೆ ವಿರೋಧಿಸಿ ಪ್ರತಿಭಟನೆ. ರಾಷ್ಟ್ರವ್ಯಾಪಿ 17 ಲಕ್ಷ ವಿದ್ಯಾರ್ಥಿಗಳಿಂದ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
2:33 PM, 27 Aug

ಜೆಇಇ ಮತ್ತು ನೀಟ್ ಪರೀಕ್ಷೆ ವಿರೋಧಿಸಿ ಲಕ್ನೋದ ರಾಜ್ಯಪಾಲದ ಕಚೇರಿ ಎದುರು ಸಮಾಜವಾದಿ ಪಕ್ಷದ ಕಾರ್ಯಕರ್ತರ ಪ್ರತಿಭಟನೆ.
1:50 PM, 27 Aug

ನೀಟ್ ಮತ್ತು ಜೆಇಇ ಪರೀಕ್ಷೆಗಳು ಕೇವಲ ಮೂರು ಮತ್ತು ನಾಲ್ಕನೇ ಹಂತದ ಪರೀಕ್ಷೆಗಳಲ್ಲ. ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಪರೀಕ್ಷೆಗಳು ಅತ್ಯಗತ್ಯವಾಗಿದೆ ಎಂದು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
1:42 PM, 27 Aug

ಕೊವಿಡ್-19 ಅಪಾಯದ ನಡುವೆ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸುವುದನ್ನು ವಿರೋಧಿಸಿ ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
1:41 PM, 27 Aug

ಕೊರೊನಾವೈರಸ್ ಸೋಂಕು ಹರಡುತ್ತಿರುವಂತಾ ಸಂದಿಗ್ಧ ಪರಿಸ್ಥಿತಿಯಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವುದು ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಸವಾಲಿನ ಕೆಲಸವಾಗಿದೆ ಎಂದು ಐಐಟಿ ಖರಗ್ಪುರ್ ನಿರ್ದೇಶಕ ವಿರೇಂದ್ರ ತಿವಾರಿ ತಿಳಿಸಿದ್ದಾರೆ.
12:10 PM, 27 Aug

ಜೆಇಇ ಮತ್ತು ನೀಟ್ ಪರೀಕ್ಷೆ ಮುಂದೂಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಮನವಿ ಮಾಡಿದ್ದಾರೆ. ಕೊರೊನಾವೈರಸ್ ಸೋಂಕು ಹರಡುವಿಕೆ ಮತ್ತು ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯಿದ್ದು, ಇಂತದರ ನಡುವೆ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಲ್ಲ ಎಂದು ದೂರವಾಣಿ ಮೂಲಕ ಮನವಿ ಮಾಡಿಕೊಂಡಿದ್ದಾರೆ.
11:55 AM, 27 Aug

ಕೇಂದ್ರ ಸರ್ಕಾರದ ನಡೆಗೆ ವಿರೋಧ ಪಕ್ಷಗಳು ಕಿಡಿ ಕಾರಿವೆ. ಬುಧವಾರ ಈ ಸಂಬಂಧ ವಿರೋಧ ಪಕ್ಷದ ನಾಯಕರು ವಿಡಿಯೋ ಸಂವಾದ ನಡೆಸಿದರು.
11:52 AM, 27 Aug

ಕೊರೊನಾವೈರಸ್ ಸೋಂಕಿನ ಹರಡುವಿಕೆ ಭೀತಿ ಹಿನ್ನೆಲೆ ಈಗಾಗಲೇ ಎರಡು ಬಾರಿ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
READ MORE

English summary
NEET 2020, JEE Main 2020 Postponement News Live Updates in Kannada: Will the government postpone JEE Main and NEET exams? Check out the latest news, highlights in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X