ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

NEET PG ಪರೀಕ್ಷೆ 2021; ಸೆಪ್ಟೆಂಬರ್ 11ಕ್ಕೆ ದಿನಾಂಕ ನಿಗದಿ

|
Google Oneindia Kannada News

ನವದೆಹಲಿ, ಜುಲೈ 13: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆಯುವ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ -ನೀಟ್ ಪಿಜಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ.

ಇದೇ ಸೆಪ್ಟೆಂಬರ್ 11ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮೂಲಕ ತಿಳಿಸಿದ್ದಾರೆ.

NEET 2021; ಪರೀಕ್ಷಾ ದಿನಾಂಕ ಘೋಷಿಸಿದ ಶಿಕ್ಷಣ ಸಚಿವNEET 2021; ಪರೀಕ್ಷಾ ದಿನಾಂಕ ಘೋಷಿಸಿದ ಶಿಕ್ಷಣ ಸಚಿವ

ಈ ಮುನ್ನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏಪ್ರಿಲ್ 18ರಂದು ನೀಟ್ ಪರೀಕ್ಷೆ ನಿಗದಿಯಾಗಿತ್ತು. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಮುಂದೂಡಿತ್ತು. ಇದೀಗ ಇದೀಗ ಸೆಪ್ಟೆಂಬರ್ 11ಕ್ಕೆ ಪರೀಕ್ಷೆ ದಿನಾಂಕ ನಿಗದಿಗೊಳಿಸಲಾಗಿದೆ.

NEET PG 2021 Exams To Be Held On Sept 11

ಸೋಮವಾರವಷ್ಟೇ NEET (UG) ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿತ್ತು. ಸೆಪ್ಟೆಂಬರ್ 12ರಂದು ನೀಟ್ ಯುಜಿ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದರು. ಜುಲೈ 13ರಿಂದಲೇ ಅರ್ಜಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದರು. ಈ ಬೆನ್ನಲ್ಲೇ ಪಿಜಿ ವಿದ್ಯಾರ್ಥಿಗಳಿಗೂ ಪರೀಕ್ಷಾ ದಿನಾಂಕ ನಿಗದಿಗೊಳಿಸಲಾಗಿದೆ.

ಅವಶ್ಯಕ ಕೊರೊನಾ ನಿಯಮಗಳ ಪಾಲನೆಯೊಂದಿಗೆ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ.

English summary
Health and family welfare minister Mansukh mandaviya on tuesday announced NEET PG Exams 2021 Date. Here is detail...,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X