ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಶಸ್ವಿಯಾಗಿ ಪೂರ್ಣಗೊಂಡ ನೀಟ್‌ ಪಿಜಿ 2022 ಪರೀಕ್ಷೆ

|
Google Oneindia Kannada News

ನವದೆಹಲಿ, ಮೇ 22: ಸ್ನಾತಕೋತ್ತರ ಪದವಿಗಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) 2022 ಪರೀಕ್ಷೆ ಶನಿವಾರ ನಡೆಯಿತು. ವೈದ್ಯಕೀಯ ವಿಜ್ಞಾನದ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಬಿಇಎಂಎಸ್‌) ದೇಶದ 267 ನಗರಗಳ 849 ಪರೀಕ್ಷಾ ಕೇಂದ್ರಗಳಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ನೀಟ್‌ 2022 ಪರೀಕ್ಷೆಯನ್ನು ಆಯೋಜಿಸಿತ್ತು.

ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ನೀಟ್‌ ಪರೀಕ್ಷೆಯನ್ನು ಮುಂದೂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ವಿವಾದಗಳ ನಡುವೆಯೂ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ಪರೀಕ್ಷೆ ನಡೆದಿದೆ ಎಂದು ಎನ್‌ಬಿಇಎಂಎಸ್‌ನ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಪರೀಕ್ಷೆ ಬರೆಯಲು 2,06,301 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. 1,82,318 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷಾ ಕೇಂದ್ರದಲ್ಲಿ ಪರಿಶೀಲನೆ ನಡೆಸಲು, ಸುಗಮವಾಗಿ ಪರೀಕ್ಷೆ ನಡೆಸಲು 1800 ಸ್ವತಂತ್ರ ಅಧ್ಯಾಪಕರನ್ನು ನೇಮಕ ಮಾಡಲಾಗಿತ್ತು.

NEET PG Exam Successfully Conducted Across India

ಟಿಸಿಎಸ್‌ನ ಸುಮಾರು 18,000 ಇನ್ವಿಜಿಲೇಟರ್‌ಗಳು ಪರೀಕ್ಷೆಗೆ ಹಾಜರಾಗಿದ್ದರು. ಎನ್‌ಬಿಇಎಂಎಸ್‌ ಕೇಂದ್ರ ವೀಕ್ಷಕರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದರು.

ಭಾರಿ ಮಳೆಯ ಕಾರಣ ಅಸ್ಸಾಂನ ಸಿಲ್ಚಾರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸುವುದು ಸವಾಲಾಗಿತ್ತು. ಆದರೆ ಅಭ್ಯರ್ಥಿಗಳಿಗೆ ತೊಂದರೆಯಾಗಬಾರದು ಎಂದು ಸ್ಥಳೀಯ ಆಡಳಿತ ಮತ್ತು ಸಿಬ್ಬಂದಿಯ ಸಹಾಯದಿಂದ ತಾತ್ಕಾಲಿಕ ಸೇತುವೆ ನಿರ್ಮಿಸಿ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಬಸ್ ವ್ಯವಸ್ಥೆ ಮಾಡಲಾಗಿತ್ತು.

ಎನ್‌ಬಿಇಎಂಎಸ್‌ ಕಚೇರಿಯಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು. ಎನ್‌ಬಿಇಎಂಎಸ್‌ ಮತ್ತು ಟಿಸಿಎಸ್‌ ತಾಂತ್ರಿಕ ತಂಡಗಳು ಸಂಪೂರ್ಣ ಪರೀಕ್ಷೆಯನ್ನು ಆಯೋಜಿಸಿದ್ದವು.

NEET PG Exam Successfully Conducted Across India

ದೇಶಾದ್ಯಂತ ನಡೆದ ನೀಟ್ ಪರೀಕ್ಷೆಯಲ್ಲಿ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿತ್ತು. ಅಭ್ಯರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿ ಮಾಸ್ಕ್‌ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಿದರು.

ಕಂಪ್ಯೂಟರ್ ಮೂಲಕ ನಡೆದ ಪರೀಕ್ಷೆ; ಕಂಪ್ಯೂಟರ್ ಮೂಲಕ ಪರೀಕ್ಷೆ ಆಯೋಜಿಸಿದ್ದರಿಂದ ಮೊಬೈಲ್ ಫೋನ್‌, ಸ್ಮಾರ್ಟ್‌ ವಾಚ್‌, ಕ್ಯಾಲ್ಕುಲೇಟರ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ವಸ್ತಗಳು ಹಾಗೂ ಪೆನ್ನು, ಪೆನ್ಸಿಲ್‌, ಇತ್ಯಾದಿ ವಸ್ತುಗಳನ್ನು ತೆಗೆದುಕೊಂಡು ಹೋಗಲು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವಂತಿರಲಿಲ್ಲ.

ನೀಟ್ ಪಿಜಿ 2022 ಅನ್ನು ಮುಂದೂಡುವಂತೆ ಅಖಿಲ ಭಾರತ ವೈದ್ಯಕೀಯ ವಿದ್ಯಾರ್ಥಿಗಳ ಸಂಘ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. 2021ನೇ ಸಾಲಿನ ನೀಟ್ ಪಿಜಿ ಕೌನ್ಸೆಲಿಂಗ್ ವಿಳಂಬವಾಗುತ್ತಿದೆ. ನೀಟ್ ಪಿಜಿ ಪರೀಕ್ಷೆ ದಿನ ಮತ್ತು ಕೌನ್ಸೆಲಿಂಗ್ ನಡೆಸುವ ದಿನಗಳ ನಡುವೆ ಅಂತರ ಕಡಿಮೆ ಇರುವ ಕಾರಣ ಪರೀಕ್ಷೆ ಮುಂದೂಡಲು ಸರ್ಕಾರವನ್ನು ಒತ್ತಾಯಿಸಿದ್ದರು.

ಆದರೆ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಸಚಿವಾಲಯದ ಮೂಲಗಳು ಹೇಳಿದ್ದವು. ಪರೀಕ್ಷೆಯ ವೇಳಾಪಟ್ಟಿಯಂತೆ ಮೇ 21ರಂದು ಪರೀಕ್ಷೆ ನಡೆಸಲಾಗಿದೆ.

English summary
NEET PG 2022 was completed on Saturday, May 21. The National Board Of Examinations In Medical Sciences (NBEMS) hold the NEET PG 2022 at 849 examination centres in 267 cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X