Breaking news: NEET-PG: ಮೀಸಲಾತಿ ಕುರಿತಂತೆ ಸುಪ್ರೀಂನಿಂದ ಮಹತ್ವದ ತೀರ್ಪು

ನವದೆಹಲಿ, ಜನವರಿ 07: ನೀಟ್‌ ಸ್ನಾತಕೋತ್ತರ ಪ್ರವೇಶಾತಿ ಸಂದರ್ಭದಲ್ಲಿ ಮೀಸಲಾತಿ ಒದಗಿಸುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿದಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.

ರಾಜ್ಯ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಅಖಿಲ ಭಾರತ ಕೋಟಾ (ಎಐಕ್ಯೂ) ಸೀಟುಗಳಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (ಇಡಬ್ಲ್ಯುಎಸ್) ಶೇ.10 ಮೀಸಲಾತಿ ಒದಗಿಸುವ ಕೇಂದ್ರದ ನಿರ್ಧಾರಕ್ಕೆ ಸಂಬಂಧಿಸಿದ ನೀಟ್‌ ಸ್ನಾತಕೋತ್ತರ ಪ್ರವೇಶಾತಿ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಕಟಿಸಿದೆ.

ಕಕ್ಷೀದಾರರ ವಾದಗಳನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಎ ಎಸ್ ಬೋಪಣ್ಣ ಅವರಿದ್ದ ಪೀಠ "ರಾಷ್ಟ್ರೀಯ ಹಿತಾಸಕ್ತಿ" ಪರಿಗಣಿಸಿ ಆದೇಶ ಪ್ರಕಟಿಸಿದ್ದು, ಅದೇ ದೃಷ್ಟಿಯಿಂದ ನೀಟ್‌ ಕೌನ್ಸೆಲಿಂಗ್ ಆರಂಭಿಸಬೇಕು.

"ಯಾವುದೇ ಪರಿಷ್ಕೃತ ಮಾನದಂಡಗಳನ್ನು ಭವಿಷ್ಯದಲ್ಲಿ ಅನ್ವಯಿಸುವಂತೆ ಮಾಡಬೇಕು ಮತ್ತು ಪ್ರಸ್ತುತ ಪ್ರವೇಶಾತಿಯನ್ನು ಈಗಿನ ಮಾನದಂಡಗಳ ಪ್ರಕಾರ ನಡೆಸಬೇಕು ಎಂದು ಇಂದಿನ ವಿಚಾರಣೆಯ ವೇಳೆ, ಕೇಂದ್ರ ಸರ್ಕಾರ ಸೂಚಿಸಿತು. ಒಬಿಸಿ ಮೀಸಲಾತಿ ಮತ್ತು ಇಡಬ್ಲ್ಯೂಎಸ್‌ ನಿರ್ಧರಿಸಲು ₹8 ಲಕ್ಷ ಆದಾಯದ ಮಾನದಂಡ ಒದಗಿಸಿರುವುದನ್ನು ಅದು ಸಮರ್ಥಿಸಿತು.

NEET-PG: SC allows admissions with 27% quota for OBCs, 10% for EWS

ನ್ಯಾಯಾಲಯ ನಿರ್ದಿಷ್ಟವಾಗಿ ಪರಿಶೀಲಿಸುತ್ತಿರುವ ಅಂಶಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಪ್ರವೇಶಾತಿಗಾಗಿ ಇಡಬ್ಲ್ಯೂಎಸ್‌ ಪಡೆಯಲು ₹8 ಲಕ್ಷ ವಾರ್ಷಿಕ ವೇತನವನ್ನು ಮಿತಿಯಾಗಿ ಬಳಸುವ ಸಾಧ್ಯತೆಯೂ ಒಂದಾಗಿದೆ.

₹ 8 ಲಕ್ಷದ ಮಾನದಂಡ ಮನಸೋಇಚ್ಛೆಯಾಗಿದೆ ಎಂಬ ದಾತಾರ್ ಅವರ ವಾದಕ್ಕೆ ಹಿರಿಯ ವಕೀಲ ಆನಂದ್ ಗ್ರೋವರ್ ಕೂಡ ಸಹಮತ ವ್ಯಕ್ತಪಡಿಸಿದರು. ₹ 8 ಲಕ್ಷ ಮಿತಿಯಿಂದಾಗಿ ಕೆನೆ ಪದರದಲ್ಲಿರುವವರು ಕೂಡ ಮೀಸಲಾತಿಯಡಿ ಬರುವಂತಾಗುತ್ತದೆ. ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದವರ ಪೌಷ್ಟಿಕತೆ, ಭೂರಹಿತತೆ, ಉದ್ಯೋಗ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಅವರು ವಿವರಿಸಿದರು.

Recommended Video

      ನೈಟ್ ಕರ್ಫ್ಯೂ !! ಏನಿರತ್ತೆ ? ಏನಿರಲ್ಲಾ ? | Oneindia Kannada

      ವಿಚಾರಣೆಯಲ್ಲಿ ಕಂಡು ಬಂದ ಅಂಶಗಳು:
      ಸ್ಥಾನಿಕ ವೈದ್ಯರನ್ನು ಪ್ರತಿನಿಧಿಸಿದ್ದ ವಕೀಲೆ ಅರ್ಚನಾ ಪಾಠಕ್ ದವೆ, ಇಡಬ್ಲ್ಯೂಎಸ್ ಮಾನದಂಡ ಕುರಿತು ನಂತರ ನಿರ್ಧರಿಸಬಹುದಾಗಿದ್ದು ತಕ್ಷಣ ಕೌನ್ಸೆಲಿಂಗ್‌ ಪ್ರಾರಂಭಕ್ಕೆ ಆದ್ಯತೆ ನೀಡಬೇಕು ಎಂದು ನ್ಯಾಯಾಲಯವನ್ನು ಮನವಿ ಮಾಡಿದರು.

      "3ನೇ ವರ್ಷದ ಸ್ಥಾನಿಕ ವೈದ್ಯರು ಇನ್ನು 4 ತಿಂಗಳಲ್ಲಿ ಉತ್ತೀರ್ಣರಾಗಲಿರುವ ಕಾರಣ ಕೌನ್ಸೆಲಿಂಗ್ ಅನ್ನು ತಕ್ಷಣವೇ ಪ್ರಾರಂಭಿಸಬೇಕು. ಈಗ 33% ಉದ್ಯೋಗಿಗಳು ಮಾತ್ರ ಉಳಿಯುತ್ತಾರೆ. ಕೋವಿಡ್‌ ಮೂರನೇ ಅಲೆ ಹಿನ್ನೆಲೆಯಲ್ಲಿ ನಮಗೆ ವೈದ್ಯರ ಅಗತ್ಯವಿದೆ. 8 ಲಕ್ಷ ಅಥವಾ 5 ಲಕ್ಷ ಮಿತಿ ಕುರಿತು ನಂತರ ತೀರ್ಮಾನ ಮಾಡಬಹುದು," ಎಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಇದು ಜನರಿಗೆ ಅನುಕೂಲಕರ ಎಂದು ಅಭಿಪ್ರಾಯಪಟ್ಟಿದೆ.

      "ಬಡವರು ಯಾರು ಎಂಬುದನ್ನು ನಾವು ಪತ್ತೆ ಹಚ್ಚುತ್ತಿಲ್ಲ. ಬಳಸಿದ ಪದ ʼಆರ್ಥಿಕವಾಗಿ ದುರ್ಬಲʼ ಎಂಬುದಾಗಿದೆ. ಇದು ಬಡತನ ರೇಖೆಗಿಂತ (ಬಿಪಿಎಲ್) ಕೆಳಗೆ ಇರಬೇಕಾಗಿಲ್ಲ, ಅದು ಬಡತನ ರೇಖೆಗಿಂತ ಸ್ವಲ್ಪ ಮೇಲಿರಬಹುದು" ಎಂದು ಅವರು ಹೇಳಿದರು.

      ನಾವು ಇಡಬ್ಲ್ಯೂಎಸ್‌ ಬಗ್ಗೆ ಗಮನಹರಿಸಿದ್ದೇವೆಯೇ ವಿನಾ ಬಡವರ ಬಗ್ಗೆ ಅಲ್ಲ. ಆದಾಯ ತೆರಿಗೆ ಮಿತಿಯನ್ನು ರೂಪಿಸುವಾಗಲೂ, ಸರ್ಕಾರ ಒಳಗೊಳ್ಳುವಿಕೆ ಕುರಿತು ಒಲವು ತೋರುತ್ತದೆ. ಉಳಿತಾಯ ಮಾಡಿದ್ದಾರೆ ಎಂದು ಭಾವಿಸುವವರನ್ನು ಕೂಡ ಇದು ಒಳಗೊಳ್ಳುತ್ತದೆ" ಎಂದು ಎಸ್‌ಜಿ ವಾದಿಸಿದರು. (ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+