NEET Protest: ದೇಶದ ಯುವಕರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ, ಮಹತ್ವದ ನಿರ್ಧಾರ ಪ್ರಕಟಿಸಿದ ಮೋದಿ - ಅಮಿತ್ ಶಾ

NEET Protest: ದೆಹಲಿ ಸೇರಿದಂತೆ ದೇಶದಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳು ನಡೆದಿವೆ. ಹಲವು ರಾಜಕೀಯ ನಾಯಕರು ಹಾಗೂ ಸೆಲೆಬ್ರಿಟಿಗಳು ಯುವಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಪ್ರಾರಂಭವಾದ ಪ್ರತಿಭಟನೆಯು ಇದೀಗ ದೇಶವ್ಯಾಪ್ತಿ ವಿಸ್ತರಿಸಿದೆ. ಈ ರೀತಿ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ ಟ್ವೀಟ್ ಮಾಡಿದ್ದಾರೆ.

ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಯುವ ಕಲ್ಯಾಣ ಮೋದಿ ಸರ್ಕಾರದ ಅತ್ಯುನ್ನತ ಆದ್ಯತೆ ಎಂದು ಹೇಳಿದ್ದಾರೆ. ಯುವಕರ ಕಲ್ಯಾಣ ಮತ್ತು ಅವರ ಉಜ್ವಲ ಭವಿಷ್ಯವು ಮೋದಿ ಸರ್ಕಾರದ ಅತ್ಯುನ್ನತ ಆದ್ಯತೆ ಮತ್ತು ದೃಢಸಂಕಲ್ಪವಾಗಿದೆ. ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ವಿಚಾರಣೆಗಳನ್ನು ತ್ವರಿತಗೊಳಿಸಲು ಮತ್ತು ಕಠಿಣ ಕ್ರಮ ಕೈಗೊಳ್ಳಲು ಪ್ರಧಾನಿಯವರು ತೆಗೆದುಕೊಂಡ ನಿರ್ಧಾರವು ಈ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

NEET Protest

ಎಸಿಪಿಗಳಿಗೆ ಗಂಭೀರ ಗಾಯ: ಎಫ್‌ಐಆರ್ ದಾಖಲು

ಇನ್ನು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಯುವ ಸಮೂಹದ ಪ್ರತಿಭಟನೆಯಲ್ಲಿ ಇಬ್ಬರು ಎಸಿಪಿಗಳಿಗೆ ಗಂಭೀರ ಗಾಯಗಳಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬುಧವಾರ ಸಂಸದ್ ಮಾರ್ಗದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ, ಅಲ್ಲಿ ಇಬ್ಬರು ಸಹಾಯಕ ಆಯುಕ್ತರು "ಗಂಭೀರ ಗಾಯ" ಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂಬ ಹರಡಿರುವ ಹೇಳಿಕೆಗಳನ್ನು ಪೊಲೀಸರು ನಿರಾಕರಿಸಿದ್ದಾರೆ, ಇದು ನಕಲಿ ಸುದ್ದಿ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಸಂದೇಶಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಬಳಿಕ, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, "ದೇಶದ ಯುವಕರ ಭವಿಷ್ಯಕ್ಕೆ ಹೆಚ್ಚು ಹಾನಿಯಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟವಾಗಿವೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಬೇಕು. ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು.
ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು

ಇನ್ನು ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ನೀಟ್ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೇನೂ ಮುಖ್ಯವಲ್ಲ!

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸಲು ನಾವು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಮ್ಮ ಕ್ರಮಗಳ ಸರಣಿಯನ್ನು ಇದು ಮುಂದುವರಿಸುತ್ತದೆ. ನಮ್ಮ ಯುವಕರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+