ನೀಟ್ ಪರೀಕ್ಷೆ ತಪ್ಪಿಸಿಕೊಂಡಿದ್ದವರಿಗೆ ಮೇ 20ಕ್ಕೆ ಪುನರ್‌ ಪರೀಕ್ಷೆ

ನವದೆಹಲಿ, ಮೇ 10: ಹಂಪಿ ಎಕ್ಸ್‌ಪ್ರೆಸ್ ರೈಲು ವಿಳಂಬದಿಂದಾಗಿ ಮೇ 05 ರಂದು ನಡೆದಿದ್ದ, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶ ಪರೀಕ್ಷೆ 'ನೀಟ್' ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪುನರ್‌ ಪರೀಕ್ಷೆಯು ಮೇ 20 ರಂದು ನಡೆಯಲಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕೇವಲ ಕರ್ನಾಟಕದ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಒಡಿಸ್ಸಾದಲ್ಲಿ ಫೋನಿ ಚಂಡಮಾರುತದಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದ ವಿದ್ಯಾರ್ಥಿಗಳಿಗೆ ಹಾಗೂ ಪಶ್ಚಿಮ ಬಂಗಾಳದ ಸಿಲಿಗುರಿಯ ವಿದ್ಯಾರ್ಥಿಗಳಿಗೆ ಮೇ 20 ರಂದೇ ಒಟ್ಟಿಗೆ ನೀಟ್ ಪರೀಕ್ಷೆ ನಡೆಯಲಿದೆ.

ಮೇ ಐದರಂದು ನೀಟ್ ಪರೀಕ್ಷೆ ದೇಶದಾದ್ಯಂತ ನಡೆದಿತ್ತು, ಅಂದು ಹಂಪಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಗಳೂರಿಗೆ ಪರೀಕ್ಷೆ ಬರೆಯಲು ಆಗಮಿಸುತ್ತಿದ್ದ ವಿದ್ಯಾರ್ಥಿಗಳು, ರೈಲು ತಡವಾದ ಕಾರಣ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ.

NEET re exam will be held on May 20 in Karnataka, Odisha, West Bengal

ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಮಂತ್ರಿ ಸದಾನಂದಗೌಡ ಅವರುಗಳು ಮಾನವ ಸಂಪನ್ಮೂಲ ಇಲಾಖೆ ಮತ್ತು ಪ್ರಧಾನಿಯನ್ನು ನೀಟ್ ಪರೀಕ್ಷೆ ತಪ್ಪಿಸಿಕೊಂಡ ರಾಜ್ಯದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಗೆ ಅವಕಾಶ ಕೊಡಬೇಕೆಂದು ಒತ್ತಾಯ ಮಾಡಿದ್ದರು, ಅಂತೆಯೇ ಕೇಂದ್ರ ಮಂತ್ರಿಗಳು ಅವಕಾಶ ಕೊಡುವ ಭರವಸೆ ನೀಡಿದ್ದರು.

ಅಷ್ಟೆ ಅಲ್ಲದೆ, ಸುಪ್ರಿಂ ಕೋರ್ಟ್‌ನಲ್ಲಿ ಸಹ ಈ ಬಗ್ಗೆ ಪ್ರಕರಣದ ದಾಖಲಿಸಲಾಗಿತ್ತು, ಅದರ ವಿಚಾರಣೆ ಇಂದು ಪೂರ್ಣವಾಗಿ ತಮ್ಮದಲ್ಲದ ತಪ್ಪಿಗೆ ಪರೀಕ್ಷೆ ಎದುರಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಗೆ ಅವಕಾಶ ಕೊಡಬೇಕು ಎಂದು ಸುಪ್ರಿಂ ಸಹ ಹೇಳಿತ್ತು.

ನೀಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷೆ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆಗಳನ್ನು ಸಹ ನೀಡಲಾಗಿದೆ. ಒಡಿಸ್ಸಾದಲ್ಲಿ ಈಮುಂಚೆ ನಿಗದಿ ಪಡಿಸಿದ್ದ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ನಡೆಯುತ್ತಿದೆ. ರಾಜ್ಯದಲ್ಲೂ ಸಹ ಈ ಮುಂಚೆ ನಿಗದಿ ಪಡಿಸಿದ್ದ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+